ಅಭ್ಯುದಯ ಇಂಟರ್ ನ್ಯಾಶನಲ್ ಸ್ಕೂಲ್ ಲೋಕಾರ್ಪಣೆ ಇಂದು
Team Udayavani, Jul 2, 2021, 7:39 PM IST
ಮುದ್ದೇಬಿಹಾಳ: ಅಡವಿಹುಲಗಬಾಳ ಗ್ರಾಮದ ಅಭ್ಯುದಯ ಇಂಟರ್‌ನ್ಯಾಶನಲ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಲೋಕಾರ್ಪಣೆ ಸಮಾರಂಭ ಜು.2ರಂದು ಬೆಳಗ್ಗೆ 10ಕ್ಕೆ ಸರಳವಾಗಿ ನಡೆಯಲಿದೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯೂ ಆಗಿರುವ ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ತಿಳಿಸಿದ್ದಾರೆ. “ಉದಯವಾಣಿ’ ಜತೆ ಮಾತನಾಡಿದ ಅವರು, 2020-21ನೇ ಸಾಲಿನಲ್ಲೇ ಶಾಲೆ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗಿರಲಿಲ್ಲ.
ಈಗ ಕೋವಿಡ್ ಪರಿಸ್ಥಿತಿ ತಿಳಿಯಾಗುತ್ತಿದ್ದು, ಶಾಲೆಗಳು ಪುನಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದಿಂದ ಕಲಿಕಾ ಚಟುವಟಿಕೆ ನಡೆಸಲಾಗುವುದು ಎಂದರು. ಅಂದಾಜು ಎರಡು ಎಕರೆ ವಿಸ್ತೀರ್ಣದ ಜಮೀನಿನಲ್ಲಿ 100×100 ಅಳತೆ ಜಾಗದಲ್ಲಿ ಮೂರು ಅಂತಸ್ತಿನ ಅತ್ಯಾಧುನಿಕ, ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ಜಾಗವನ್ನು ಆಟದ ಮೈದಾನಕ್ಕೆ ಮೀಸಲಿಡಲಾಗಿದೆ. ಒಟ್ಟು 35 ಕೊಠಡಿಗಳಿದ್ದು ಮುಖ್ಯಾಧ್ಯಾಪಕರು, ಶಿಕ್ಷಕರು, ಪ್ರಯೋಗಾಲಯ ಮತ್ತು ಆಡಳಿತ ಕಚೇರಿಗೆ ಹೊರತುಪಡಿಸಿ ಉಳಿದ 20-25 ಕೊಠಡಿಗಳನ್ನು ಪಠ್ಯಬೋಧನೆಗಾಗಿ ಮೀಸಲಿಡಲಾಗಿದೆ ಎಂದರು.
ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿದ್ದು, ಪ್ರತಿಯೊಂದಕ್ಕೂ ಪ್ರತ್ಯೇಕ ಮುಖ್ಯಾಧ್ಯಾಪಕರೂ ಸೇರಿ ಅಂದಾಜು 15-20 ಶಿಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. ಈಗಾಗಲೇ ಅಂದಾಜು 200 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಸದ್ಯ ಆನ್‌ಲೈನ್ ಕ್ಲಾಸ್ ಆರಂಭಿಸಲಾಗುತ್ತಿದೆ. ಭೌತಿಕ ತರಗತಿಗಳು ಪ್ರಾರಂಭಗೊಂಡ ಮೇಲೆ ಮಕ್ಕಳಿಗೆ ಶಾಲಾ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಸ್ವಾಮೀಜಿಗಳಿಂದ ಲೋಕಾರ್ಪಣೆ: ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ ದಿವ್ಯಸಾನ್ನಿಧ್ಯ, ಬಾಲಶಿವಯೋಗಿ ಸಿದ್ಧಲಿಂಗ ದೇವರು, ಸರೂರಿನ ಶಿವಯ್ಯ ಗುರುವಿನ, ಸಿದ್ದಾಪೂರದ ಅರವಿಂದ ಒಡೆಯರ್ ಹಾಗೂ ರಾಮಾನಂದ ಮಹಾರಾಜರು ಸಾನ್ನಿಧ್ಯ ವಹಿಸಿ ಶಾಲೆ ಲೋಕಾರ್ಪಣೆಗೊಳಿಸುವರು. ಸಂಸ್ಥೆಯ ಅಧ್ಯಕ್ಷ ಎನ್.ಎಸ್. ಪೂಜಾರಿ ಅಧ್ಯಕ್ಷತೆ ವಹಿಸುವರು. ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು, ಸುತ್ತಲಿನ ಗ್ರಾಮಗಳ ಹಿತೈಷಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.