ಕಳ್ಳತನ ಪ್ರಕರಣ ಖಂಡಿಸಿ ಪ್ರತಿಭಟನೆ
Team Udayavani, Jan 12, 2018, 12:38 PM IST
ಆಲಮೇಲ: ಪಟ್ಟಣದಲ್ಲಿ ಸರಣಿ ಕಳ್ಳತನ ವಾಗುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ಪೊಲೀಸರನ್ನು
ವರ್ಗಾಯಿಸಬೇಕು ಎಂದು ಆಗ್ರಹಿಸಿ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ ಮಾಡಿ ಪೊಲೀಸ್ ಠಾಣೆ
ಎದುರು ಪ್ರತಿಭಟನೆ ನಡೆಸಿದರು.
ಬಸವರಾಜ ಧನಶ್ರೀ, ಜಿಪಂ ಮಾಜಿ ಸದಸ್ಯ ಮಲ್ಲಪ್ಪ ತೋಡಕರ, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ದೇವಪ್ಪ
ಗುಣಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಿಎಸ್ಐ ಅನೀಲಕುಮಾರ ಎಚ್ .ಡಿ. ದೂರು ಸಲ್ಲಿಸಿ ಸ್ವಲ್ಪ ಕಾಲಾವಕಾಶ ನೀಡಿ. ಕಳ್ಳರನ್ನು ಬಂಧಿಸುತ್ತವೆ ಎಂದು ಮನವಿ ಮಾಡಿದರು.
ಆದರೆ ಮೇಲಾಧಿಕಾರಿಗಳು ಬಂದು ಭರವಸೆ ನೀಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಂದಗಿ ಸಿಪಿಐ ಮಹಾಂತೇಶ ದ್ಯಾಮಣ್ಣನವರ
ಮಾತನಾಡಿ, ವಾರದೊಳಗಾಗಿ ಕಳ್ಳರನ್ನು ಬಂಧಿಸಲಾಗುವುದು.
ಇನ್ನು ಮುಂದೆ ಈ ರೀತಿ ಯಾವುದೇ ಕಳ್ಳತನವಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು. ರಾತ್ರಿ ಗಸ್ತು
ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದು ವ್ಯಾಪಾರ ವಹಿವಾಟು ಮುಂದು
ವರಿಸಲಾಯಿತು. ಉಸ್ಮಾನಸಾಬ್ ಮೇಲಿಮನಿ, ರವಿ ಬಡದಾಳ, ಸುನೀಲ ಗುಂದಗಿ, ಬಸವರಾಜ ರಾಯಗೊಂಡ, ಬಸವರಾಜ ತೆಲ್ಲೂರ, ಗುಂಡು ಜೋಗೂರ, ಮಲ್ಲಿಕಾರ್ಜುನ ಅಚ್ಚಲೇರಿ, ಭರತಕುಮಾರ ಮೇಟಿ, ಸಂಗಪ್ಪ ಸುಂಠಿ,
ದೇವಾನಂದ ಖಂದಾರೆ, ಮಲ್ಲು ಮಹಿಂದ್ರಕರ ಸೇರಿದಂತೆ ಪಟ್ಟಣದ ಎಲ್ಲ ಅಂಗಡಿ ವ್ಯಾಪರಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.