ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Dec 10, 2019, 12:22 PM IST
ವಿಜಯಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರು ಜಿಪಂ ಸಿಇಒ ಅವರಿಗೆ ಸೋಮವಾರ ಮನವಿ ಸಲ್ಲಿಸಿ ಅಹೋರಾತ್ರಿ ಧರಣಿ ಆರಂಭಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಬಾಕಿ ಉಳಿಸಿಕೊಂಡಿರುವ ಬಾಕಿ ವೇತನ ಮರು ಪಾವತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರನ್ನು ತೆಗೆದು ಹಾಕುವಲ್ಲಿ ನಡೆದಿರುವ ಅವ್ಯವಹಾರ ಎಸಗಿದ ವಾರ್ಡನ್ ಮತ್ತು ತಾಲೂಕು ವಿಸ್ತರಣಾಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ ಸ್ವಚ್ಛತೆ ಕಾವಲು ಮೊದಲಾದ ಡಿ ದರ್ಜೆ ಹುದ್ದೆಗಳಲ್ಲಿ ಹೊರಗುತ್ತಿಗೆ ಸೇವೆ ಸಲ್ಲಿಸುತ್ತಿರುವ ಸುಮಾರು 3,000 ಹೊರ ಸಂಪನ್ಮೂಲ ಸಿಬ್ಬಂದಿಗಳಿಗೆ ಕಳೆದ 8-10 ತಿಂಗಳಿಂದ ವೇತನ ಪಾವತಿಸಿಲ್ಲ. ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ವೇತನ ನೀಡತ್ತಿಲ್ಲ ಹಾಗೂ ಹಬ್ಬ ಹರಿ ದಿನಗಳಲ್ಲಿ ಇರುವ ತಮ್ಮ ಮಕ್ಕಳಿಗೆ ಕನಿಷ್ಠ ಊಟ, ಒದಗಿಸಲಾಗದೆ ಕಣ್ಣೀರು ಹಾಕುತ್ತಿದ್ದಾರೆ. ಈ ಬಡಪಾಯಿ ನೌಕರರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರುವ ಕಾರಣ ಕುಟುಂಬದ ಹೊಣೆ ನಿರ್ವಹಿಸಲು ಸಂಕಷ್ಟ ಎದುರಿಸುವಂತಾಗಿದೆ.
ಕೂಡಲೇ ಬಾಕಿ ವೇತನವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು. ಕೆಲಸದಿಂದ ತೆಗೆದು ಹಾಕುವ ಭೀತಿ ಎದುರಿಸುತ್ತಿದ್ದ ಇವರನ್ನು ಹೊರಗುತ್ತಿಗೆ ಆಧಾರದಲ್ಲಿ ನಿವೃತ್ತಿವರೆಗೆ ಸೇವೆಯಲ್ಲಿ ಮುಂದುವರಿಸಬೇಕು. ಸರಕಾರಕ್ಕೆ
ಹೆಚ್ಚು ಹೊರೆಯಾಗದಂತೆ ಇವರನ್ನು ನಿವೃತ್ತಿವರೆಗೆ ಸೇವೆಯಲ್ಲಿ ಮುಂದುವರಿಸುವ ಪ್ರಸ್ತಾವನೆ ಈಡೇರಿಕೆಗೆ ಇಲಾಖೆಗಳು ಮುಂದಾಗಬೇಕು. ಹೊರಗುತ್ತಿಗೆ ಸಿಬ್ಬಂದಿಗಳಿಗೆ ಕಾನೂನು ಅನ್ವಯ ರಜೆ, ಪಿಎಫ್, ಇಎಸ್‌ಐ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾರ್ಮಿಕ ಸಂಘಟನೆ ಮುಖಂಡರಾದ ಭೀಮಶಿ ಕಲಾದಗಿ, ಕಾಶೀಮ ಅಲಬಾಳ , ಹುಲಿಗೆಪ್ಪ ಚಲವಾದಿ, ಲಕ್ಷ್ಮಣ ಹಂದ್ರಾಳ, ಪವಾಡೆಪ್ಪ ಚಲವಾದಿ, ಅಭಿಷೇಕ ಚಕ್ರವತಿ, ರೂಪಾ ಬಿರಾದಾರ, ಶರಣಮ್ಮ ಜಟ್ಟಗಿ, ರಾಮವ್ವ ಭಜಂತ್ರಿ, ಮಹಾದೇವಿ ಮಹಾಲದಾರ, ರಜನಿ ಬನಸೋಡೆ, ಯಲ್ಲಮ್ಮ ಮಧಭಾವಿ, ಸವಿತಾ ಸವದಿ, ಮಲ್ಲಮ್ಮ ಬೇಂದ್ರೆ, ಬೋರಮ್ಮ ಹಾದಿಮನಿ, ನಸಿಮಾ ಬೈಗಂಪಲ್ಲಿ ಸೇರಿದಂತೆ ಇತರರು ಪ್ರತಿಭಟನೆ ಮುಂಚೂಣಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.