16 ರಂದು ಬಬಲೇಶ್ವರದಲ್ಲಿ ಮೀಸಲಾತಿ ಹಕ್ಕೊತ್ತಾಯಕ್ಕೆ ಪಂಚಮಸಾಲಿ ಆಲಗೂರ ಪೀಠದಿಂದ ಪ್ರತಿಭಟನೆ

Team Udayavani, Dec 15, 2022, 12:51 PM IST

16 ರಂದು ಬಬಲೇಶ್ವರದಲ್ಲಿ ಮೀಸಲಾತಿ ಹಕ್ಕೊತ್ತಾಯಕ್ಕೆ ಪಂಚಮಸಾಲಿ ಆಲಗೂರ ಪೀಠದಿಂದ ಪ್ರತಿಭಟನೆ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಾಗೂ ಕೇಂದ್ರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗಾಗಿ ಡಿ.16 ರಂದು ಬಬಲೇಶ್ವರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಪಂಚಮಸಾಲಿ ಆಲಗೂರ ಪೀಠದ ಜಗದ್ಗುರು ಡಾ.ಮಹದೇವ ಶ್ರೀಗಳು ಹಾಗೂ ಪೀಠದ ಉಸ್ತುವಾರಿ ಡಾ.ಸುರೇಶ ಬಿರಾದಾರ ಬೆಳಗಾವಿ ಅಧಿವೇಶನಕ್ಕೆ ಪೂರ್ವದಲ್ಲಿ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಡಿ.19 ರೊಳಗೆ ಮೀಸಲಾತಿ ಕಲ್ಪಿಸುವ ಕುರಿತು ಭರವಸೆ ನೀಡಿದೆ. ಸರ್ಕಾರದ ಮೇಲೆ ಒತ್ತಡ ಹೇರಲು ಬಬಲೇಶ್ವರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಕುಲ ಶಾಸ್ತ್ರೀಯ ಅಧ್ಯಯನ ನಡೆಸುವುದಾಗಿ ಸರ್ಕಾರ ಹೇಳಿದೆ. ಹಿಂದುಳಿದ ವರ್ಗಗಳ ಆಯೋಗ ರಾಜ್ಯದಲ್ಲಿ ಸಮೀಕ್ಷೆ ನಡೆಸಿದೆ. ಈಗ ಈ ಎಲ್ಲ ಪ್ರಕ್ರಿಯೆಗಳು ಬಹುತೇಕ ಅಂತಿಮಗೊಂಡಿದ್ದು, ಹೀಗಾಗಿ ಸರ್ಕಾರ ನಿಗದಿತ ಅವಧಿಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಆಲಗೂರ ಪೀಠಕ್ಕೆ ಬರುವ ಮುನ್ನ ನಾವೂ ಕೂಡ ಈ ಹಿಂದೆ ಮೀಸಲಾತಿ ಹಕ್ಕೊತ್ತಾಯದ ಕುರಿತು ನಡೆದ ಪಾದಯಾತ್ರೆ, ಧರಣಿ ಸೇರಿದಂತೆ ಇತರೆ ಎಲ್ಲ ಹೋರಾಟಗಳಲ್ಲೂ ಪಾಲ್ಗೊಂಡು ಹೋರಾಟ ಮಾಡಿದೆ. ಇದೀಗ ಆಲಗೂರ ಪೀಠದಿಂದ ಇದೀಗ ಜನಸಮುದಾಯದ ಜಾಗೃತಿ ಹಾಗೂ ಹಕ್ಕೊತ್ತಾಯದ ಹೋರಾಟಕ್ಕಾ ಬೃಹತ್ ಸಮಾವೇಶ ಪಂಚಮಸಾಲಿ ಸಮಾಜದ ಮಠಾಧೀಶರ ಒಕ್ಕೂಟ ಮಠಾಧೀಶರು, ಸಚಿವರು, ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಪಂಚಮಸಾಲಿ ಸಮಾಜದ ಮೂರು ಪೀಠಗಳು ಮೀಸಲಾತಿ ಹಕ್ಕೊತ್ತಾಯದ ಏಕ ಗುರಿ ಹೊಂದಿದ್ದು, ಪ್ರತ್ಯೇಕತೆ ಎಂಬುದಿಲ್ಲ. ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು, ಹರಿಹರ ಪೀಠದ ವಚನಾನಂದ ಶ್ರೀಗಳು ನಡೆಸಿದ ಬಹುತೇಕ ಎಲ್ಲ ಹೋರಾಟಗಳಲ್ಲೂ ನಾವು ಸಕ್ರಿಯವಾಗಿ ಪಾಲ್ಗೊಂಡಿದ್ದೇವೆ ಎಂದರು.

ಇದೀಗ ಸಮುದಾಯದ ಜನರಲ್ಲಿ ಜಾಗೃತಿ ಹಾಗೂ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ನಮ್ಮ ಭಾಗದಲ್ಲಿ ನಮ್ಮ ಪೀಠದಿಂಸಲೂ ಹೋರಾಟ ನಡೆಸಿದ್ದೇವೆ. ಡಿ.16 ರಂದು ಬಬಲೇಶ್ವರ ಗುರುಪಾದೇಶ್ವರ ಮಠದಿಂದ ತಹಶಿಲ್ದಾರರ ಕಛೇರಿಗೆ ತೆರಳಿ ಮನವಿ ಸಲ್ಲಿಸಲಾಗುತ್ತದೆ. ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಪ್ರಕಟಿಸುವಂತೆ ಆಗ್ರಹಿಸುವುದು ಹೋರಾಟದ ಮೂಲ ಉದ್ದೇಶ ಎಂದರು.

ಧರಿದೇವರ ಮಠದ ಲಕ್ಷ್ಮಣ ಶ್ರೀಗಳು, ಬಿ.ಎಸ್. ಪಾಟೀಲ, ಶಂಕರಗೌಡ ಬಿರಾದಾರ, ಲತಾ ಬಿರಾದಾರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.