ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ-ಧರಣಿ
Team Udayavani, Mar 4, 2022, 5:53 PM IST
ವಿಜಯಪುರ: ತಮ್ಮನ್ನು ಸರ್ಕಾರಿ ನೌಕರರೆಂದು ಪ್ರಸಕ್ತ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸುವ ಜೊತೆಗೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಧರಣಿ ನಡೆಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತರ ಸಂಘಟನೆ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗನವಾಡಿ ನೌಕರರು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಿದರು.
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ತಮ್ಮ ಗೌರವಧನ ಹೆಚ್ಚಿಸಬೇಕು. ಈ ಬೇಡಿಕೆ ಪ್ರಸಕ್ತ ಬಜೆಟ್‌ನಲ್ಲೇ ಘೋಷಿಸಬೇಕು ಎಂದು ಮನವಿ ಸಲ್ಲಿಸಿದರು.
ಎಐಯುಟಿಯುಸಿ ನಾಯಕಿ ಎಂ. ಉಮಾದೇವಿ ಮಾತನಾಡಿ, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅತ್ಯಂತ ಕಡಿಮೆ ಗೌರವಧನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಲೆ ಏರಿಕೆ ಪ್ರಸಕ್ತ ಸಂದರ್ಭದಲ್ಲಿ ಕಡಿಮೆ ಗೌರವಧನದಲ್ಲಿ ಕುಟುಂಬ ನಿರ್ವಹಣೆ ಅಸಾಧ್ಯ. ಹೀಗಾಗಿ ರಾಜ್ಯ ಸರ್ಕಾರದ ಸಿ-ಡಿ ದರ್ಜೆ ನೌಕರರಿಗೆ ಸರಿಸಮನಾಗಿ ಗೌರವಧನ ಅಥವಾ ವೇತನ ನೀಡಬೇಕು. ಈ ಬೇಡಿಕೆ ಮಾ.4ರಂದು ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನಲ್ಲಿ ಘೋಷಣೆ ಆಗಬೇಕು ಎಂದು ಬೇಡಿಕೆ ಮಂಡಿಸಿದರು.
ಅಂಗನವಾಡಿ ನೌಕರರು ಗಂಭೀರ ಕಾಯಿಲೆಗಳ ಚಿಕಿತ್ಸೆಗಳಿಗೆ ಇರುವ ಕ್ಷೇಮಾಭಿವೃದ್ಧಿ ನಿಧಿಯಲ್ಲಿ ಸಲ್ಲಿಸಲಾದ ಪ್ರಕರಣಗಳಿಗೆ ಸಹಾಯಧನ ಸರಿಯಾಗಿ ನೀಡಬೇಕು. ಸಲ್ಲಿಕೆಯಾಗಿರುವ ಎಲ್ಲ ಅರ್ಜಿ ಕೂಡಲೇ ವಿಲೇವಾರಿ ಮಾಡಿ ಸಹಾಯಧನ ನೀಡಬೇಕು. ಈಗಿರುವ ಮರು ಪಾವತಿ ಸಹಾಯಧನ 20 ಸಾವಿರದಿಂದ ಕನಿಷ್ಟ 50 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾ ಮುಖಂಡರಾದ ಲಕ್ಷ್ಮೀ ಲಕ್ಷಾನಟ್ಟಿ, ಜಿಲ್ಲಾ ಕಾರ್ಯದರ್ಶಿ ನಿಂಗಮ್ಮ ಮಠ ಮಾತನಾಡಿ, ಮಾಸಿಕ ಸಭೆಯೂ ಸೇರಿದಂತೆ ಮಾತೃ ಇಲಾಖೆ, ಜಿಲ್ಲಾಧಿಕಾರಿ, ಜಿಪಂ-ತಾಪಂ, ತಹಶೀಲ್ದಾರ್ ಕಚೇರಿಗಳ ಅಧಿಕಾರಿಗಳ ಸಭೆ, ಇಲಾಖೆ ಕಚೇರಿ ಕೆಲಸಕ್ಕೆ ಬರುವ ಕಾರ್ಯಕರ್ತೆ-ಸಹಾಯಕಿಯರಿಗೆ ಕಡ್ಡಾಯವಾಗಿ ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ನೀಡುವಂತೆ ಬೇಡಿಕೆ ಸಲ್ಲಿಸಿದರು.
ಪ್ರಯಾಣ ಹಾಗೂ ದಿನಭತ್ಯೆ ಕನಿಷ್ಟ 500 ರೂ.ಗೆ ಹೆಚ್ಚಿಸಬೇಕು. ಮೂಲ ಮತ್ತು ಪರಿಷ್ಕೃತ ಐಸಿಡಿಎಸ್ ಯೋಜನೆಯಂತೆ ಅಂಗನವಾಡಿ ಕೇಂದ್ರಗಳ ಪರಿಕಲ್ಪನೆ ಮತ್ತು ಅಲ್ಲಿ ಕೆಲಸ ಮಾಡುವ ನೌಕರರ ಸೇವಾ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಯೋಜನೆ ತರುವುದನ್ನು ನಿಲ್ಲಿಸಿ ಎಂದು ಮನವಿ ಮಾಡಿದರು.
ಈ ವೇಳೆ ಗುರುಬಾಯಿ ಮಲ್ಲನಗೌಡರ, ಮಹಾದೇವಿ ನಾಗೂಡ, ಶಾಂತಾ ಕಟ್ಟಾರೆ, ಬಸಮ್ಮ ಹಿರೇಮಠ, ಕಲಾವತಿ ಪಾದಗಟ್ಟಿ, ಯಲ್ಲಮ್ಮ ಜಟ್ಟಂಗಿ, ಸಾವಿತ್ರಿ ನಾಗರತ್ತಿ, ರೆಣುಕಾ ಹಡಪದ, ಉಷಾ ಕುಲಕರ್ಣಿ, ರೇಖಾ ಪತ್ತಾರ, ಭಾರತಿ ಅಂಗನಗೌಡ, ರೇಣುಕಾ ಕರ್ಜಗಿ, ಕಾಶಿಬಾಯಿ ಕುಂಬಾರ, ತಾಯಕ್ಕ ಬೂದಿಹಾಳ, ಸವಿತಾ ತೇರದಾಳ, ಗಂಗುಬಾಯಿ ಪೂಜಾರಿ, ವಿಮಲಾ ಬುಷೆಟ್ಟಿ, ಶೋಭಾ ಪತ್ತಾರ, ಗುರುದೇವಿ ಮೂಡಲಗಿ ಸೇರಿದಂತೆ ಇತರರಿದ್ದರು.
ಹಣದುಬ್ಬರ ಮತ್ತು ಬೆಲೆ ಏರಿಕೆ ಗಮನದಲ್ಲಿ ಇರಿಸಿಕೊಂಡು ಅಂಗನವಾಡಿ ಕೇಂದ್ರಗಳ ಪ್ರಭಾರ ಭತ್ಯೆ ಹಣ, ಬಾಡಿಗೆ ದರ, ಮೊಟ್ಟೆ ದರ, ಸಾದಿಲ್ವಾರು ಹಣ, ಫ್ಲೆಕ್ಸಿ ಫಂಡ್ ಅನುದಾನ ಇತ್ಯಾದಿ ದರ ಹೆಚ್ಚಿಸಿ. ಕಾರ್ಯಕರ್ತೆಯರಿಗೆ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 21 ಸಾವಿರ ರೂ. ಮಾಸಿಕ ವೇತನ/ಗೌರವ ಧನ ನೀಡಬೇಕು. -ಎಂ. ಉಮಾದೇವಿ, ಎಐಯುಟಿಯುಸಿ ನಾಯಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.