ಗೋಶಾಲೆಗೆ ಮೇವು-ನೀರು ಪೂರೈಸಿ


Team Udayavani, Jan 11, 2019, 9:37 AM IST

vij-1.jpg

ವಿಜಯಪುರ: ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಪ್ರಮಾಣದಲ್ಲಿ ನೀರು ಪೂರೈಸುವಂತೆ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ ಮೊಹಸೀನ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿದರು. ತುರ್ತಾಗಿ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಬೇಕು. 90 ದಿನಗಳ ನಂತರವೂ ಜನರಿಗೆ ನೀರು ಪೂರೈಕೆ ಮಾಡಬೇಕು. ಸಚಿವ ಸಂಪುಟ ಉಪಸಮಿತಿ ಸೂಚಿಸಿರುವಂತೆ ಜಿಲ್ಲೆಯಲ್ಲಿ ಜಲಸಂಪನ್ಮೂಲ ಆಧಾರದ ಮೇಲೆ ಕೊಳವೆ ಬಾವಿಗಳ ಫ್ಲಸಿಂಗ್‌, ಹೈಡ್ರೋಫ್ಯಾಕ್ಚರಿಂಗ್‌ ಹಾಗೂ ಡಿಪನಿಂಗ್‌, ಪುನಶ್ಚೇತನಕ್ಕೆ ಕ್ರಿಯಾ ಯೋಜನೆ ರೂಪಿಸಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಮಾಲೀಕರ ಕೊಳವೆ ಬಾವಿಗಳನ್ನು ಗುರುತಿಸಿ ಅವರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಪಡೆಯಬೇಕು.

ಜಿಲ್ಲೆಯಲ್ಲಿ ಬರ ಇರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಗಳಲ್ಲಿ ನಿರ್ಲಕ್ಷ ತೋರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಕುರಿತು ಸೂಕ್ತ ಕ್ರಮಕ್ಕಾಗಿ ಸರ್ಕಾರದ ಗಮನಕ್ಕೂ ಸಹ ತರಲಾಗುವುದು. ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅದೀನದಲ್ಲಿನ ತಾಲೂಕು ಮಟ್ಟದ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಿ ಬರ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಗೋಶಾಲೆಗಳಲ್ಲಿ ಇರುವ ಜಾನುವಾರುಗಳಿಗೂ ಮೇವಿನ ಜೊತೆಗೆ ಅಗತ್ಯ ಪ್ರಮಾಣದ ನೀರು ಪೂರೈಸಬೇಕು. ಸರ್ಕಾರೇತರ ಸಂಘ-ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳ ಜಾನುವಾರುಗಳಿಗೂ ಮೇವು ಹಾಗೂ ಕುಡಿಯುವ ನೀರು ಪೂರೈಸಬೇಕು. ಪ್ರತಿ ವಸತಿಗಳಿಗೆ ಜನಸಂಖ್ಯೆ ಹಾಗೂ ಜಾನುವಾರುಗಳ ಸಂಖ್ಯೆ ಆಧರಿಸಿ ನಿತ್ಯವೂ ಅಗತ್ಯ ಪ್ರಮಾಣದ ನೀರು ಪೂರೈಸಲು ನಾಳೆಯಿಂದಲೇ ಕಾರ್ಯ ಪ್ರವೃತ್ತರಾಗಬೇಕು ಎಂದರು.

ತಾಲೂಕು ಟಾಸ್ಕ್ಫೋರ್ಸ್‌ಗಳ ಸಭೆ ನಡೆಸಿ ಬರ ಪರಿಹಾರ ಕಾಮಗಾರಿ ಚುರುಕುಗೊಳಿಸಬೇಕು. ತಹಶೀಲ್ದಾರರು, ತಾಪಂ ಇಒಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಅಭಿಯಂತರರು, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜಾಗೃತರಾಗಿ ಸಮನ್ವಯದಿಂದ ಜವಾಬ್ದಾರಿ ನಿಭಾಯಿಸಬೇಕು ಎಂದು ಸೂಚಿಸಿದರು.

ಮುಂದಿನ ತಿಂಗಳಿಂದ ಜನ ಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಆಗ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಅಲ್ಲದೇ ನಿರ್ಲಕ್ಷ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೂ ಮುಂದಾಗಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಹೊಣೆಗಾರಿಕೆಯಿಂದ ಕೆಲಸ ಮಾಡಿ ಎಂದು ಸೂಚಿಸಿದರು.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸ್ಥಳೕಯವಾಗಿಯೇ ಉದ್ಯೋಗ ನೀಡುವ ಮೂಲಕ ಗುಳೆ ಹೋಗುವುದನ್ನು ತಪ್ಪಿಸಬೇಕು. ಇದಕ್ಕಾಗಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ, ಹೆಚ್ಚು ಪ್ರಗತಿ ಸಾಧಿಸಬೇಕು ಎಂದರು.

ಸಾಮಾಜಿಕ ಅರಣ್ಯ ಇಲಾಖೆ ಮೂಲಕ ನದಿ ಪಾತ್ರದ ಪ್ರದೇಶ, ಕಾಲುವೆ ವ್ಯಾಪ್ತಿಯಲ್ಲಿ, ನೀರಾವರಿ ಸೌಲಭ್ಯ ಇರುವ ಕಡೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸುತ್ತಲಿನ ಪ್ರದೇಶಗಳಲ್ಲಿ ಅರಣ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಸಾಲಮನ್ನಾ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಪ್ರತಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಪ್ರತಿದಿನ ಗುರಿ ನಿಗದಿಪಡಿಸಿ ಅರ್ಹ ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರಕಿಸಬೇಕು. ಇದರಲ್ಲಿ ನಿರ್ಲಕ್ಷ್ಯ ತೋರುವ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಹಕಾರ ಇಲಾಖೆಯಿಂದ ಮುಂಬರುವ ಒಂದು ವಾರದ ಅವಧಿಯಲ್ಲಿ ಸೂಕ್ತ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.

ಗ್ರಾಮೀಣ ವಸತಿ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸದೇ ಇರುವ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.