ಮಳೆ ಹಾನಿ ಬಾಧಿತರಿಗೆ ತಕ್ಷಣ ಪರಿಹಾರ ವಿತರಿಸಿ: ರಂದೀಪ


Team Udayavani, May 28, 2022, 3:45 PM IST

20rain

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಬಾಧಿತರಿಗೆ ಪರಿಹಾರ ಕ್ರಮಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮತ್ತು ವಿಜಯಪುರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಿ.ರಂದೀಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮಳೆಯಿಂದ ಆಸ್ತಿಪಾಸ್ತಿ ಹಾಗೂ ಜನ-ಜಾನುವಾರು ಹಾನಿ ಪ್ರಕರಣಗಳಿಗೆ ಕಾಲಮಿತಿಯಲ್ಲಿ ಪರಿಹಾರ ವಿತರಣೆಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಮಳೆಗಾಲ ಆಗಿರುವ ಕಾರಣ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು. ಮಳೆ ಮತ್ತು ಪ್ರವಾಹದಂತಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಬೇಕು ಎಂದು ತಹಶೀಲ್ದಾರ್‌ ಗಳಿಗೆ ಸೂಚಿಸಿದರು.

ಜಿಲ್ಲೆಯ ಪರಿಸ್ಥಿತಿ ವಿವರಿಸಿದ ಜಿಲ್ಲಾಧಿಕಾರಿ ಡಾ| ವಿಜಯಮಹಾಂತೇಶ ದಾನಮ್ಮನವರ, ಜಿಲ್ಲೆಯಲ್ಲಿ ಸಿಡಿಲಿನಿಂದಾದ ಹಾನಿಯ 7 ಪ್ರಕರಣಗಳಿಗೆ ಈಗಾಗಲೇ 5 ಲಕ್ಷ ರೂ. ಪರಿಹಾರಕ್ಕೆ ಕ್ರಮ ವಹಿಸಲಾಗಿದೆ. ಏಪ್ರಿಲ್‌ ನಿಂದ ಇಲ್ಲಿವರೆಗೆ ಒಟ್ಟು 82 ಜಾನುವಾರು ಹಾನಿ ಪ್ರಕರಣಗಳಿಗೆ ಪರಿಹಾರ ಕಲ್ಪಿಸಲು ಮತ್ತು ಒಟ್ಟು 57 ಮನೆಹಾನಿ ಪ್ರಕರಣಗಳಲ್ಲಿ 52 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

279 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿ ಪೈಕಿ ಇದುವರೆಗೆ 32.82 ಲಕ್ಷ ರೂ. ನಷ್ಟ ಪರಿಹಾರ ಕಲ್ಪಿಸಲಾಗಿದೆ. ತಿಕೋಟಾ, ಬಬಲೇಶ್ವರ, ಚಡಚಣ, ಕೋಲಾರ ಮತ್ತು ನಿಡಗುಂದಿ ಸೇರಿದಂತೆ ವಿವಿಧೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಇತ್ತೀಚೆಗೆ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿ, ಮಳೆ ಹಿನ್ನೆಲೆಯಲ್ಲಿ ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಪ್ರಸ್ತಕ ವರ್ಷವೂ 17 ಸಾವಿರ ಕ್ವಿಂಟಲ್‌ ಬೀಜ ದಾಸ್ತಾನು ಮಾಡಲಾಗಿದೆ. ಈ ಬಾರಿ ಸೂರ್ಯಕಾಂತಿ ಬೀಜಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಈಗಾಗಲೇ 25,399 ಮೆಟ್ರಿಕ್‌ ಟನ್‌ ಗೊಬ್ಬರ ಸಂಗ್ರಹ ಮಾಡಲಾಗಿದೆ ಇದೆ ಎಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಮ್‌ ಅರಸಿದ್ದಿ, ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ರಾಮಚಂದ್ರ ಗಡಾದೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.