ಕೃಷಿಯಲ್ಲಿ ಸುಧಾರಣೆ ತರುವ ಉದ್ದೇಶ: ಭೈರೇಗೌಡ
Team Udayavani, Jul 7, 2017, 10:08 AM IST
ಇಂಡಿ: ಕೃಷಿ ಅಭಿಯಾನದ ಮುಖ್ಯ ಉದ್ದೇಶ ಸರಕಾರದ ಇಲಾಖೆಗಳು ರೈತರಿಗೆ ವಿನೂತನ ಯೋಜನೆಯಡಿ ಕೃಷಿಯಲ್ಲಿ ಸುಧಾರಣೆ ತರುವ ಮೂಲಕ ಆರ್ಥಿಕವಾಗಿ ಅಭಿವೃದ್ದಿ ಹೊಂದುವ ಉದ್ದೇಶವಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ 2017-18 ನೇ ಸಾಲಿನ ಕೃಷಿ ಅಭಿಯಾನ ಯೋಜನೆಯಡಿ ಕೃಷಿ ಯಂತ್ರಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 10ರಿಂದ 15 ವರ್ಷಗಳ ಹಿಂದೆ ಕೇವಲ ಬಿತ್ತನೆ ಬೀಜ, ಗೊಬ್ಬರ, ಸಬ್ಸಿಡಿಗಳಿಗೆ ಮಾತ್ರ ಸೀಮಿತವಾದ ಇಲಾಖೆ ರೈತರಿಗಾಗಿ ಅನೇಕ ವಿನೂತನ ಯೋಜನೆಗಳನ್ನು ಜಾರಿ ಮಾಡಿ ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದರು.
ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಎರಡುವರೆ ವರ್ಷದ ಅವ ಧಿಯಲ್ಲಿ 1 ಲಕ್ಷ 60 ಸಾವಿರ ಕೃಷಿ ಹೊಂಡ ನಿರ್ಮಿಸಲಾಗಿದೆ. ವಿಜಯಪುರ ಜಿಲ್ಲೆಗೆ ಕೃಷಿ ಹೊಂಡಕ್ಕೆ ಅದರಲ್ಲಿ ವಿಶೇಷವಾಗಿ ಇಂಡಿ ತಾಲೂಕಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.
ರಾಜ್ಯದ ರೈತರಿಗೆ ಹಾಲಿನ ಸಬ್ಸಿಡಿಗಾಗಿ ಒಟ್ಟು ಎರಡುವರೆ ಸಾವಿರ ಕೋಟಿ ನೀಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ ಪೂರೈಕೆ ಮಾಡಿದಕ್ಕಾಗಿ ಪ್ರತಿ ವರ್ಷ 9 ಸಾವಿರ ಕೋಟಿ ಭರಿಸಿದೆ ಎಂದರು. ರಾಜ್ಯದಲ್ಲಿ ಅತೀ ಹೆಚ್ಚು ತೊಗರಿ ಬೆಳೆದ ಜಿಲ್ಲೆಗಳೆಂದರೆ ಕಲಬುರಗಿ ಹಾಗೂ ವಿಜಯಪುರ ತೊಗರಿ ಖರೀದಿಗೆ ಸರಕಾರ 1900 ಕೋಟಿ ರೂಪಾಯಿ ವ್ಯಯಿಸಿದೆ. ಇದರಲ್ಲಿ ಜಿಲ್ಲೆಗೆ 484 ಕೋಟಿ ನೀಡಲಾಗಿದೆ. ಬರದ ತಾಲೂಕಿನ ಸಮಗ್ರ ನೀರಾವರಿ ಮಾಡುವ ಮುಖಾಂತರ ಬರದ ಹಣೆಪಟ್ಟಿ ಕಳಚಿ ಹಸಿರನ್ನಾಗಿ ಮಾಡಿ ರೈತರಿಗೆ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸರ ನಂತರ ಎಲ್ಲ ಸಮುದಾಯವನ್ನು ಸಮಾನವಾಗಿ ಗೌರವಿಸುವ ನಾಯಕರಾಗಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿ ಶಿವುಕುಮಾರ ಕೆ. ಬಿ., ಪುರಸಭೆ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ತಾಪಂ ಅಧ್ಯಕ್ಷ ರುಕುದೀನ ತದ್ದೇವಾಡಿ, ಜಿಪಂ ಸದಸ್ಯ ಮಹಾದೇವಪ್ಪ ಪೂಜಾರಿ,
ತಮ್ಮಣ್ಣಾ ಪೂಜಾರಿ, ಜೆಟ್ಟೆಪ್ಪ ರವಳಿ, ಮಳಸಿದ್ದ ಬ್ಯಾಳಿ, ಭೀಮಣ್ಣಾ ಕೌಲಗಿ, ಸದಾಶಿವ ಪ್ಯಾಟಿ, ಮಹಾದೇವಪ್ಪ ಏವೂರ, ಕೃಷಿ ಡಿನ್ ಡಾ| ಬಿರಾದಾರ, ಇಲಿಯಾಸ ಬೋರಾಮಣಿ, ತಾಪಂ ಅಧಿಕಾರಿ ರಾಜಕುಮಾರ ತೊರವಿ, ತೋಟಗಾರಿ ಅಧಿಕಾರಿ ಎಸ್.ಎಚ್. ಪಾಟೀಲ, ದಾನಮ್ಮಗೌಡತಿ ಪಾಟೀಲ, ಬಿ.ಎಂ. ಕೋರೆ, ಭೀಮಣ್ಣ ಕವಲಗಿ, ಕಲ್ಲನಗೌಡ ಬಿರಾದಾರ, ಸುಬಾಸ ಕಲ್ಲೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.