Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ
ಕಾರ್ಯಕರ್ತರ ಬಳಿ ಚರ್ಚಿಸಿ ಮುಂದಿನ ನಿರ್ಣಯ
Team Udayavani, Sep 22, 2024, 10:45 PM IST
ವಿಜಯಪುರ: ರಾಜ್ಯದಲ್ಲಿ ಲಿಂಗಾಯತರು, ಹಿಂದುಳಿದವರು, ದಲಿತರು ಹಾಗೂ ಬ್ರಾಹ್ಮಣರಿಗೂ ಸೇರಿದಂತೆ ಅನ್ಯಯವಾಗುವುದನ್ನು ತಡೆಯಲು “ರಾಯಣ್ಣ ಚನ್ನಮ್ಮ ಬ್ರಿಗೇಡ್’ (ಆರ್‌ಸಿಬಿ) ಸ್ಥಾಪನೆ ಸಂಬಂಧ ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಈ ಬ್ರಿಗೇಡ್ ಮಾಡುವ ಬಗ್ಗೆ ಕೂಡಲಸಂಗಮ ಸ್ವಾಮೀಜಿ ಹೇಳಿಕೆ ವಿಚಾರವನ್ನು ಕಾರ್ಯಕರ್ತರೊಂದಿಗೆ ಚರ್ಚಿಸಲಾಗುತ್ತದೆ. ಬೇರೆ ಸ್ವಾಮೀಜಿಗಳು ಕೂಡ ಬ್ರಿಗೇಡ್ ಬೇಕು ಎಂದಿದ್ದಾರೆ. ಕಾರ್ಯಕರ್ತರ ಬಳಿ ಚರ್ಚಿಸಿದ ನಂತರ ಮುಂದಿನ ನಿರ್ಣಯ ಮಾಡುತ್ತೇವೆ ಎಂದರು.
ಬಿಜೆಪಿ ಬಿಡಲ್ಲ: ಭಾರತೀಯ ಜನತಾ ಪಾರ್ಟಿ ನನ್ನ ತಾಯಿ ಇದ್ದಂತೆ. ಆದರೆ, ಅಲ್ಲಿನ ಅವ್ಯವಸ್ಥೆಯಿಂದ ನಾನು ಪಕ್ಷ ಬಿಟ್ಟಿದ್ದೇನೆ. ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಹೆಚ್ಚಾಗುತ್ತಿದೆ. ಆ ತಾಯಿಯನ್ನು ಬಿಟ್ಟು ನಾನು ಬೇರೆ ಯಾವ ಪಕ್ಷಕ್ಕೂ ಹೋಗಲ್ಲ. ಪಕ್ಷದಲ್ಲಿ ಶುದ್ಧೀಕರಣವಾಗಲಿ ಎಂಬ ಕಾರಣಕ್ಕೆ ಪಕ್ಷದಿಂದ ದೂರ ಇದ್ದೇನೆ ಎಂದರು.
ರಾಜ್ಯ ಬಿಜೆಪಿ ಘಟಕದ ಅವ್ಯವಸ್ಥೆ ಬಗ್ಗೆ ಇವತ್ತಲ್ಲ, ನಾಳೆ ಹೈಕಮಾಂಡ್‌ನವರು ಚಿಂತಿಸಿ ಮಾತನಾಡುವ ನಂಬಿಕೆ ಇದೆ. ಪಕ್ಷದಲ್ಲಿ ಹಿಂದೂತ್ವ ಪಕ್ಕಕ್ಕೆ ಹೋಗಿದೆ. ಜಾತಿ, ಉಪಜಾತಿಗೆ ಬೆಂಬಲ ಸಿಗುತ್ತಿದೆ. ಪಕ್ಷ ಶುದ್ಧೀಕರಣವಾಗಬೇಕು. ಆಗ ನಾನು ಕೂಡಾ ಬಿಜೆಪಿಗೆ ಸೇರುವ ವಿಚಾರವಾಗಿ ತೀರ್ಮಾನ ಮಾಡುವೆ. ಹಿರಿಯ ಶಾಸಕ ಬಸವಗೌಡ ಪಾಟೀಲ ಯತ್ನಾಳ ಹಿಂದೂತ್ವದ ಹುಲಿ. ನನ್ನನ್ನು ಬಿಜೆಪಿಗೆ ಕರೆತಂದು ಸಿಎಂ ಮಾಡುತ್ತೇವೆ ಎಂಬ ಅವರ ಪ್ರೀತಿ-ಮಾತಿಗೆ ಅಭಿನಂದಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.