ಮಳೆ; ಕೆಲ ರೈತರಲ್ಲಿ ಹರ್ಷ-ಕೆಲವರಲ್ಲಿ ಆತಂಕ
Team Udayavani, Nov 21, 2021, 6:15 PM IST
ಆಲಮಟ್ಟಿ: ಕಳೆದ ಎರಡು ದಿನಗಳಿಂದ ಜಿಟಿ ಜಿಟಿ ಸುರಿಯುತ್ತಿರುವ ಮಳೆಯಿಂದ ಬಿಳಿ ಜೋಳ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ. ಜತೆಗೆ ಕೆಲ ರೈತರಲ್ಲಿ ಆತಂಕವನ್ನೂ ಮೂಡಿಸಿದೆ.
ಮುಂಗಾರು ಹಂಗಾಮಿನಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದರೂ ಕಾಲುವೆ ನೀರು ಮತ್ತು ಅಲ್ಪ ಸುರಿದ ಮಳೆಯಿಂದ ರೈತರು ಮೆಕ್ಕೆ ಜೋಳವನ್ನು ಬಿತ್ತನೆ ಮಾಡಿ ರಾಶಿಯನ್ನೂ ಮಾಡಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣ ಹಾಗೂ ಜಿಟಿಜಿಟಿ ಮಳೆಯಿಂದ ಫಸಲು ಒಣಗಿಸಲು ಸಾಧ್ಯವಾಗದೇ ಅವುಗಳಿಗೆ ಪ್ಲಾಸ್ಟಿಕ್ ಹಾಳೆಯಿಂದ ಮುಚ್ಚಿ ಮಳೆಯ ನೀರಿನಿಂದ ಸಂರಕ್ಷಿಸಲಾಗುತ್ತಿದ್ದರೂ ಪ್ಲಾಸ್ಟಿಕ್ ಹಾಳೆ ಬೇಗುದಿಯಿಂದ ಮೆಕ್ಕೆಜೋಳದ ಕಾಳುಗಳು ಅಲ್ಲಿಯೇ ಕೊಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಯ ಫಸಲು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ಮಕ್ಕೆಜೋಳ ಬೆಳೆದ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಎರಡನೇ ತೊಗರಿಯ ಕಣಜ ಎಂಬ ಖ್ಯಾತಿಗೆ ಒಳಗಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಮರ್ಪಕವಾಗಿ ಸುರಿಯದ್ದರಿಂದ ಅಪಾರ ಪ್ರಮಾಣದಲ್ಲಿ ತೊಗರಿ ಬೆಳೆಯು ನಾಶವಾಗುವಂತಾಗಿತ್ತು. ಇನ್ನು ಅಲ್ಪಸ್ವಲ್ಪ ಉಳಿದಿರುವ ಬೆಳೆಯಾದರೂ ಕೈಗೆ ಬರಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದು ವಾರದಿಂದ ಮೋಡ ಮುಸುಕಿದ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಕೀಟಗಳ ಹಾವಳಿ ಹೆಚ್ಚಾಗಿರುವುದು ನುಂಗಲಾರದ ತುತ್ತಾಗಿದೆ ಎನ್ನುತ್ತಾರೆ ರೈತರು.
ರೈತರು ಕಬ್ಬು ಕಟಾವು ಮಾಡದಿರುವುದರಿಂದ ಈಗಾಗಲೇ ಕಬ್ಬು ಗರಿ ಬಿಟ್ಟಿರುವುದರಿಂದ ತೂಕದಲ್ಲಿ ವ್ಯಾಪವಾಗಿ ಕಡಿಮೆಯಾಗುತ್ತದೆ. ಇದರಿಂದ ವರ್ಷದವರೆಗೂ ಹಗಲಿರುಳು ಶ್ರಮಿಸಿ ನೀರು, ಗೊಬ್ಬರ ಹಾಕಿ ಉತ್ತಮವಾಗಿ ಬೆಳೆದರೂ ಜಿಟಿ ಜಿಟಿ ಮಳೆಯ ಕಾರಣದಿಂದ ರೈತರು ಹಾನಿ ಅನುಭವಿಸುವಂತಾಗಿದೆ. ಒಟ್ಟಾರೆ ಈಗ ಸುರಿಯುತ್ತಿರುವ ಮಳೆ ಕೆಲ ರೈತರ ಮಂದಹಾಸಕ್ಕೆ ಕಾರಣವಾಗಿದ್ದರೆ ಇನ್ನುಳಿದ ರೈತರ ಸಂಕಟಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.