ಕಾಲುವೆಗಳಿಗೆ ನೀರು ಹರಿಸದಿದ್ದ ರೆ ಉಪವಾಸ ಸತ್ಯಾಗ್ರಹ


Team Udayavani, Jun 26, 2021, 9:09 PM IST

sದ್ವ್ದ್ದೆ್ದ

ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಕಾಲುವೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ನೀರು ಹರಿಸದಿದ್ದರೆ ನಾಡಿನ ಮಠಾಧಿಧೀಶರೊಂದಿಗೆ ಕೆಬಿಜೆಎನ್ನೆಲ್‌ ಮುಖ್ಯ ಅಭಿಯಂತರರ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಶುಕ್ರವಾರ ಇಲ್ಲಿನ ಕೆಬಿಜೆಎನ್ನೆಲ್‌ ಮುಖ್ಯ ಅಭಿಯಂತರರಿಗೆ ಸಂಘಟನೆಯ ಪದಾಧಿ  ಕಾರಿಗಳು ಹಾಗೂ ಮಠಾಧಿಧೀಶರೊಂದಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಬಾರದೇ ಇರುವುದರಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ರೈತರಿಗೆ ತೊಂದರೆಯಾಗಿದೆ. ಮಹಾರಾಷ್ಟ್ರದ ಮಹಾಬಲೇಶ್ವರ, ಸಾಂಗ್ಲಿ ಸೇರಿದಂತೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಶಾಸ್ತ್ರಿ ಜಲಾಶಯ ಬಹುತೇಕ ಭರ್ತಿಯಾಗಿದೆ.

ಹೆಚ್ಚಿನ ನೀರನ್ನು ನಾರಾಯಣಪುರದ ಬಸವ ಸಾಗರ ಜಲಾಶಯಕ್ಕೆ ಹರಿಸಲಾಗುತ್ತಿದೆ ಎಂದರು. ನಾರಾಯಣಪುರದ ಬಸವ ಸಾಗರದಿಂದ 45 ಸಾವಿರ ಕ್ಯೂಸೆಕ್‌ ನೀರನ್ನು ನದಿ ಪಾತ್ರಕ್ಕೆ ಬಿಡುತ್ತಿದ್ದಾರೆ. ನದಿಗೆ ನೀರು ಬಿಡುವ ಬದಲು ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ನೀರುಣಿಸಲು ಕಾಲುವೆಗೆ ನೀರು ಹರಿಸಬೇಕು. ಈ ಬಾರಿ ಸಮರ್ಪಕವಾಗಿ ಮುಂಗಾರು ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ. ಬಿತ್ತಿದ ಬೀಜಗಳು ಹಾಳಾಗುವ ಮೊದಲೇ ಕಾಲುವೆಗಳಿಗೆ ನೀರು ಹರಿಸಿ ಜಮೀನುಗಳಿಗೆ ನೀರುಣಿಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು. ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹಾಗೂ ಕರಭಂಟನಾಳದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಅಗತ್ಯವಿದ್ದ ಸಂದರ್ಭದಲ್ಲಿ ರೈತರಿಗೆ ನೀರು ಕೊಡದಿದ್ದರೆ ಜಿಲ್ಲೆಯಲ್ಲಿ ಬೃಹತ್‌ ಜಲಾಶಯ ಹಾಗೂ ಕಾಲುವೆ ನಿರ್ಮಾಣ ಮಾಡಿದ್ದು ಏತಕ್ಕೆ? ಲಕ್ಷಾಂತರ ಎಕರೆ ಜಮೀನು ಕಳೆದುಕೊಂಡು ತ್ಯಾಗ ಮಾಡಿದ ನಮ್ಮ ಜಿಲ್ಲೆಯ ರೈತರಿಗೆ ನೀರು ಕೊಡಬೇಕು.

ಇಲ್ಲದಿದ್ದರೆ ರೈತರೊಂದಿಗೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯ ಅಭಿಯಂತರ ಎಚ್‌.ಸುರೇಶ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಬಾಗಲಕೋಟೆಯಲ್ಲಿ ಭೇಟಿಯಾಗಿ ನೀರಾವರಿ ಸಲಹಾ ಸಮಿತಿ ಸಭೆಯ ದಿನಾಂಕ ನಿಗದಿ ಕುರಿತು ಚರ್ಚಿಸಲಾಗಿದೆ. ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಕಳೆದ 13ವರ್ಷಗಳಿಂದ ಜುಲೈ 2ನೇ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯುವುದು ವಾಡಿಕೆ. ಅದರನ್ವಯ ಸಲಹಾ ಸಮಿತಿ ಅಧ್ಯಕ್ಷರನ್ನು ಹಾಗೂ ಸಮಿತಿ ಸದಸ್ಯ ಕಾರ್ಯದರ್ಶಿ ಕೃಷ್ಣಾ ಕಾಡಾ ಭೀಮರಾಯನಗುಡಿ ವಲಯ ಮುಖ್ಯ ಅಭಿಯಂತರರಿಗೂ ಚರ್ಚಿಸಿರುವೆ. ಅಲ್ಲಿಯವರೆಗೂ ಸಹಕರಿಸಬೇಕು ಎಂದು ವಿನಂತಿಸಿದರು.

ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಈರಣ್ಣ ದೇವರಗುಡಿ, ಹೊನಕೇರೆಪ್ಪ ತೆಲಗಿ, ಕೃಷ್ಣಪ್ಪ ಬಮ್ಮರಡ್ಡಿ, ಚನ್ನಬಸಪ್ಪ ಸಿಂಧೂರ, ವಿಠuಲ ಬಿರಾದಾರ, ಮಾಚಪ್ಪ ಹೊರ್ತಿ, ರಾಜೇಸಾಬ ವಾಲಿಕಾರ, ದಾವಲಸಾಬ್‌ ಪಿಂಜಾರ, ಮಲ್ಲಪ್ಪ ಮಾಡ್ಯಾಳ, ಗುರಲಿಂಗಪ್ಪ ಪಡಸಲಗಿ, ಶೇಖಪ್ಪ ಸಜ್ಜನ, ಬಸವರಾಜ ದೊಡಮನಿ, ಶರಣಪ್ಪ ಗದಗ, ಚಂದ್ರಾಮ ತೆಗ್ಗಿ ಇದ್ದರು.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.