ಕೋವಿಡ್‌ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸಿ

ಐಸಿಯು ನಿರ್ವಹಣಾ ತಂತ್ರಜ್ಞರನ್ನು ಜಿಲ್ಲಾಸ್ಪತ್ರೆಗೆ ಪಡೆದುಕೊಳ್ಳಬೇಕು.

Team Udayavani, Apr 22, 2021, 6:43 PM IST

Nemaka

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ನಿಗ್ರಹದ ಜೊತೆಗೆ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವುದಕ್ಕಾಗಿ ಸಂಬಂಧಪಟ್ಟ ಆಸ್ಪತ್ರೆಗಳ ವೈದ್ಯರು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ ಕೋವಿಡ್‌-19 ನಿಯಂತ್ರಣ ಕುರಿತು ಜಿಲ್ಲಾ ಜಾಗೃತ-ತಜ್ಞರ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಈ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ಒದಗಿಸಬೇಕು. ಕೋವಿಡ್‌ ಸೋಂಕಿತರಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಹೆಚ್ಚಿನ ಸಾವು ಆಗದಂತೆ ನೋಡಿಕೊಳ್ಳಲು ವಿಶೇಷ ಗಮನ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರೆಮ್ಡಿಸಿವಿಯರ್‌ ಲಸಿಕೆ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಇದರ ಸಮರ್ಪಕ ನಿರ್ವಹಣೆಗಾಗಿ ನಿಯೋಜಿತ ಅಧಿಕಾರಿಗಳಾದ ಡಾ| ಔದ್ರಾಮ್‌ ಹಾಗೂ ಸಹಾಯಕ ಔಷಧ ನಿಯಂತ್ರಕರು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಮಸ್ಯೆ ನಿವಾರಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಕೋವಿಡ್‌ ವಿಷಯದಲ್ಲಿ ಯಾವುದೇ ಸಮಸ್ಯೆಗಳ ಕಂಡು ಬಂದರೂ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರ ಗಮನಕ್ಕೆ ತಂದು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿರುವ ಪರಿಸ್ಥಿತಿ-ವಾಸ್ತವಾಂಶ ಆಧಾರದ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ವೆಂಟಿಲೇಟರ್‌ಗಳ ಸಮರ್ಪಕ ನಿರ್ವಹಣೆ ಮಾಡಿಕೊಳ್ಳಬೇಕು. ಐಸಿಯು ನಿರ್ವಹಣಾ ತಂತ್ರಜ್ಞರನ್ನು ಜಿಲ್ಲಾಸ್ಪತ್ರೆಗೆ ಪಡೆದುಕೊಳ್ಳಬೇಕು. ಅವಶ್ಯಕ ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಕಾರದ ಜೊತೆಗೆ ಸಮರ್ಪಕ ಸಿಬ್ಬಂದಿಗಳು ಇರುವಂತೆ ನೋಡಿಕೊಂಡು ಐಸಿಯು ಘಟಕ ನಿರ್ವಹಿಸಲು ಸೂಚನೆ ನೀಡಿದರು.

ಸರ್ಕಾರದ ನಿರ್ದೇಶನದಂತೆ ಗುತ್ತಿಗೆ ಆಧಾರದ ಮೇಲೆ ನರ್ಸ್‌, ಲ್ಯಾಬ್‌ ಟೆಕ್ನಿಷಿಯನ್‌ ಹಾಗೂ ಅವಶ್ಯಕ ಸಿಬ್ಬಂದಿಗಳ ಪಾರದರ್ಶಕ ನೇಮಕಾತಿಗೆ ವಿಶೇಷ ಗಮನ ನೀಡಬೇಕು. ಪ್ರತಿ ದಿನ ಬರುತ್ತಿರುವ ಸುತ್ತೋಲೆಗಳ ಬಗ್ಗೆ ನಿರಂತರ ಗಮನ ಹರಿಸಬೇಕು. ಅಲ್ಲದೇ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕು. ಕೆಳ ಹಂತದ ಸಿಬ್ಬಂದಿಗಳನ್ನು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಮೇಲಧಿಕಾರಿಗಳು ಸ್ಫೂರ್ತಿ ತುಂಬುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಎಎಸ್ಪಿ ರಾಮ ಅರಿಸಿದ್ದಿ, ಸರ್ಕಾರಿ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ| ಶರಣಪ್ಪ ಕಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಕುಮಾರ ಯರಗಲ್‌, ಡಾ| ಲಕ್ಕಣ್ಣನರ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.