ವಿಜಯಪುರ: ಒಂದೇ ಕುಟುಂಬದ ನಾಲ್ವರು ಸೇರಿ ಜೈಲಿನ 10 ಕೈದಿಗಳ ಬಿಡುಗಡೆ
Team Udayavani, Aug 14, 2022, 5:29 PM IST
ವಿಜಯಪುರ: ಭಾರತ ಸ್ವಾತಂತ್ರ್ಯ 75ನೇ ವರ್ಷಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ಆಧಾರದಲ್ಲಿ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಒಂದೇ ಕುಟುಂಬದ ನಾಲ್ವರು ಸೇರಿ 10 ಕೈದಿಗಳ ಬಿಡುಗಡೆಗೆ ಪಟ್ಟಿ ಸಿದ್ಧವಾಗಿದೆ.
ನಗರದ ಕೇಂದ್ರ ಕಾರಾಗೃಹದಿಂದ ಆ.15 ರಂದು ಸ್ವಾತಂತ್ರ್ಯದ ಧ್ವಜಾರೋಹಣದ ಬಳಿಕ ಸನ್ನಡತೆ ಆಧಾರದಲ್ಲಿ 10 ಕೈದಿಗಳು ಬಿಡುಗಡೆಯಾಗಲಿದ್ದಾರೆ. ಅಲ್ಲದೇ, ಉತ್ತಮ ಜೀವ ರೂಪಿಸಿಕೊಳ್ಳುವ ಭರವಸೆ ಮೂಡಿಸಿರುವ ಕೈದಿಗಳಲ್ಲಿ ಮೂವರು ಸಹೋದರರು, ಅವರ ತಂದೆ ಸೇರಿ ಒಂದೇ ಕುಟುಂಬದ ನಾಲ್ವರು ಸೇರಿರುವುದು ಗಮನಾರ್ಹ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಕ್ರಾಸ್ ನಿವಾಸಿಗಳಾದ ಬಸಪ್ಪ ಮಲಕಾರಿ ಜಟಗೊಂಡ, ಗೌಡಪ್ಪ ಜಟಗೊಂಡ, ಬೆಳೆನ್ನಿ ಜಟಗೊಂಡ ಹಾಗೂ ಇವರ ತಂದೆ ಮಲಕಾರಿ ಜಟಗೊಂಡ ಜೈಲಿನಿಂದ ಬಿಡುಗಡೆ ಆಗುತ್ತಿದ್ದಾರೆ.
ಇದನ್ನೂ ಓದಿ:ಹುಮನಾವಾದ: ಸ್ವಾತಂತ್ರ್ಯ ಅಮೃತಮಹೋತ್ಸವ; ಪಟ್ಟಣದಲ್ಲಿ ಪ್ರತಿದಿನ ಹತ್ತಾರು ಜಾಥ
ಗ್ರಾಮಸ್ಥರೊಬ್ಬರ ತೋಟದಲ್ಲಿ ಹೂವು ಕೀಳಿದ್ದಾರೆ ಎಂಬ ಕಾರಣ ಎರಡು ಕುಟುಂಬಗಳ ಮಧ್ಯೆ ಜಗಳವಾಗಿದ್ದಾಗ ತಂದೆ ಹಾಗೂ ಮೂವರು ಮಕ್ಕಳು ಹೂವು ತೋಟದ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಸಂಬಂಧ ನಾಲ್ವರಿಗೂ ಎರಡು ವರ್ಷ ಶಿಕ್ಷೆಯಾಗಿತ್ತು. ಈಗ ಇವರ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡ ಲಾಗುತ್ತಿದೆ.
ಇದಲ್ಲದೇ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಿದ್ದಪ್ಪ ಮಾದರ, ಅಪ್ಪುಹಿರೇಮಠ, ಮಾಯಪ್ಪ ವಾಡೇದ, ಉಮಾ ಚವ್ಹಾಣ ಹಾಗೂ ಮುತ್ತವ್ಚ ನಾಗವ್ವಗೋಳ ಇವರೂ ಕೂಡ ಸನ್ನಡತೆ ಆಧಾರದಲ್ಲಿ ಆ.15 ರಂದು ವಿಜಯಪುರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.