ಪುನರ್ವಸತಿ ಕೇಂದ್ರಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ: ಪಾಟೀಲ
Team Udayavani, Dec 2, 2018, 2:31 PM IST
ಆಲಮಟ್ಟಿ: ಆಲಮಟ್ಟಿ-ಬಳೂತಿ ಸಂಯುಕ್ತ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ನೂತನವಾಗಿ ನಿರ್ಮಾಣವಾಗುತ್ತಿರುವ ಮುಖ್ಯ ಸ್ಥಾವರಕ್ಕೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಸ್ಥಳೀಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದ ಹಿನ್ನೀರು ಪ್ರದೇಶವಾದ ಚಂದ್ರಮ್ಮ ದೇವಸ್ಥಾನದ ಬಳಿ ನಡೆಯುತ್ತಿರುವ ಪುನರ್ವಸತಿ ಕೇಂದ್ರಗಳಿಗೆ ಕುಡಿಯುವ ನೀರಿನ ಮುಖ್ಯಸ್ಥಾವರ (ಜಾಕ್‌ವೆಲ್) ಕಾಮಗಾರಿ ಪರಿಶೀಲಿಸಿದ ಆರೋಗ್ಯ ಸಚಿವರು ಪುನರ್ವಸತಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಯೋಜನೆ ಕೈಗೊಂಡಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಕಾಮಗಾರಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಆಲಮಟ್ಟಿ ಕೃಷ್ಣಾ ನದಿ ಹಿನ್ನೀರಿನಿಂದ ಮುಳುಗಡೆಯಾಗಿ ಪುನರ್ ನೆಲೆ ಕಂಡ ಸುಮಾರು 11ಪುನರ್ವಸತಿ ಕೇಂದ್ರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.
ಶಾಸ್ತ್ರಿ ಜಲಾಶಯದ ಮುಂಭಾಗದಲ್ಲಿರುವ ಕೃಷ್ಣಾ ಸೇತುವೆ ಹತ್ತಿರವಿದ್ದ ಮುಖ್ಯ ಸ್ಥಾವರದಿಂದ ಈ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತಿತ್ತು, ಇದರಿಂದ ಬೇಸಿಗೆಯಲ್ಲಿ ಕೃಷ್ಣಾ ನದಿ ನೀರಿಗಾಗಿ ನೆಲೆ ಕಳೆದುಕೊಂಡ ಈ ಗ್ರಾಮಗಳಿಗೆ ನೀರಿನ ಸಮಸ್ಯೆ ಉಂಟಾಗುತ್ತಿತ್ತು.
ಈಗ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಸುಮಾರು 5.54 ಕೋಟಿ ರೂ. ವೆಚ್ಚದಲ್ಲಿ ಜಾಕ್ ವೆಲ್ ನಿರ್ಮಿಸುತ್ತಿದ್ದು, ಅಲ್ಲದೇ 3.05 ಕೋಟಿ ವೆಚ್ಚದಲ್ಲಿ ಪೈಪ್‌ಲೈನ್ ಆಧುನೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿದಂತಾಗುತ್ತದೆ.
ಕ್ಷೇತ್ರದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಎಲ್ಲೆಡೆಯೂ ಕುಡಿಯುವ ಬಹುಹಳ್ಳಿ ಯೋಜನೆಯಿಂದ ಕೃಷ್ಣಾ ನದಿಯಿಂದಲೇ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಈಚೆಗೆ ಕೃಷ್ಣಾ ನದಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಶಾಸಕರು ಹಲವಾರು ಸಮಸ್ಯೆಗಳನ್ನು ನಿವೇದಿಸಿಕೊಂಡಿದ್ದು, ಚರ್ಚಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಕರೆಸಲು ತಿಳಿಸಿದ್ದರು.
ಅವರ ಜೊತೆ ಈಗಾಗಲೇ ಮಾತನಾಡಿದ್ದು, ಶಾಸಕರ ಜೊತೆಗೂಡಿ ಬೆಳಗಾವಿ ವಿಧಾನಮಂಡಲದ ಅಧಿವೇಶನ ವೇಳೆಯಲ್ಲಿ ಇಲ್ಲವೇ ಆಲಮಟ್ಟಿಯಲ್ಲಿಯೇ ಸಭೆ ಕರೆದು ಯುಕೆಪಿಯ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಕಾಮಗಾರಿ ನಡೆಯುವ ಸ್ಥಳದಲ್ಲಿ ಕೃಷ್ಣಾ ನದಿ ಹಿನ್ನೀರು ಇದ್ದು, ಇದರಿಂದ ಕಾಮಗಾರಿ ವಿಳಂಬವಾಗಿದೆ. ನದಿ ನೀರು ಇಳಿದ ನಂತರ ಕಾಮಗಾರಿ ತ್ವರಿತವಾಗಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು. ಸಿ.ಎಸ್. ನಾಗರಾಳ, ಸಿ.ಎಂ. ಮಲ್ಲಾಪುರ, ವೀರೇಶಕುಮಾರ ಹೆಬ್ಟಾಳ, ಗೋಪಾಲ ಬಂಡಿವಡ್ಡರ, ಬಾಬು ಬಡೇಗಾರ, ಚಂದ್ರಶೇಖರ ಪಳನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.