ತಾಂಡಾಗಳ ಸಮಗ್ರ ಅಭಿವೃದ್ಧಿಗಾಗಿ ಸಿಎಂಗೆ ಮನವಿ
Team Udayavani, Aug 7, 2018, 12:04 PM IST
ವಿಜಯಪುರ: ಸಮಸ್ಯೆಗಳ ಆಗರಗಳಾಗಿರುವ ತಾಂಡಾಗಳ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ
ಹೇಳಿದರು. ವಿಜಯಪುರ ತಾಲೂಕಿನ ಹಂಚನಾಳ ಎಲ್.ಟಿ. ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾಂಡಾಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲ.
ಲಂಬಾಣಿ ಸಮುದಾಯದಲ್ಲೇ ಹುಟ್ಟಿರುವ ನನಗೆ ನನ್ನ ಸಮುದಾಯದ ಸಮಸ್ಯೆಗಳ ಕುರಿತು ಸ್ಪಷ್ಟ ಅರಿವಿದ್ದು
ತಾಂಡಾಗಳಲ್ಲಿ ಬಂಜಾರಾರು ಅನುಭವಿಸುತ್ತಿರುವ ಎಲ್ಲ ಸಮಸ್ಯೆಗಳಗೆ ಪರಿಹಾರ ಕಂಡುಕೊಡಬೇಕಿದೆ. ಸಿಎಂ
ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಹಲವು ಗಂಭೀರ ವಿಚಾರಗಳಿಗೆ ಸ್ಪಂದಿಸಿದ್ದಾರೆ. ಹೀಗಾಗಿ ವಿಜಯಪುರ ಜಿಲ್ಲೆ ಮಾತ್ರವಲ್ಲ ರಾಜ್ಯದ ಎಲ್ಲ ತಾಂಡಾಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸುವಂತೆ ಮನವಿ ಮಾಡುವುದಾಗಿ ಹೇಳಿದರು.
ನಾನು ನಾಯಕನಲ್ಲ, ನಿಮ್ಮ ಸೇವೆಯ ಕಾಯಕ ಮಾಡಲು ನಿಯೋಜಿತ ಜನಸೇವಕ ಮಾತ್ರ. ಹೀಗಾಗಿ ಕ್ಷೇತ್ರದ
ಸಮಗ್ರ ಅಭಿವೃದ್ಧಿಗೂ ಆದ್ಯತೆ ನೀಡಿ, ಕ್ಷೇತ್ರದ ಮತದಾರರು ನನ್ನ ಮೇಲೆ ಇರಿಸಿರುವ ವಿಶ್ವಾಸ ಗಳಿಸುತ್ತೇನೆ. ಕ್ಷೇತ್ರದಲ್ಲಿ ನಡೆಯುವ ಎಲ್ಲ ಯೋಜನೆಗಳ ಕಾಮಗಾರಿಗಳು ಪ್ರಾಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸರ್ಕಾರದಿಂದ ದೊರಕುವ ಸಾಲ ಸೌಲಭ್ಯ, ಸ್ವ-ಉದ್ಯೋಗ ಯೋಜನೆಗಳು ಸೇರಿದಂತೆ ಹಲವಾರು ಯೋಜನೆಗಳ
ಪ್ರಯೋಜನವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಯುವ ಪಡೆ ಸದಸ್ಯರಾದ ಕಿರಣ ನಾಥು ರಾಠೊಡ, ಮೋಹನ ಶಂಕರ ರಾಠೊಡ, ರವಿ ರಾಠೊಡ, ಶ್ರೀಮಂತ
ಚವ್ಹಾಣ, ಆನಂದ ಹರಸಿಂಗ್ ರಾಠೊಡ, ಬಾಳು ರಾಠೊಡ, ಹರಸಿಂಗ್ ನಾಯಕ, ಪಾಂಡುರಂಗ ಚವ್ಹಾಣ, ಅರವಿಂದ
ಪೈಲ್ವಾನ, ಕಾಶೀನಾಥ ರಾಠೊಡ, ಚಂದು ಕೇಸು ರಾಠೊಡ, ವಿಜಯ ರಾಠೊಡ, ಮೋಹನ ರಾಠೊಡ, ಗುರು ರಾಠೊಡ,
ಅಶೋಕ ಡಿಜೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.