ಆರೋಗ್ಯ ಸಹಾಯಕರ ಬೇಡಿಕೆ ಈಡೇರಿಕೆಗೆ ಮನವಿ
Team Udayavani, May 26, 2020, 6:16 AM IST
ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರ ಸಂಘದ ಪ್ರಮುಖ ಪದಾಧಿಕಾರಿಗಳು ಸೋಮವಾರ ಬಳ್ಳಾರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಸಂಕಷ್ಟದಲ್ಲಿ ಆರೋಗ್ಯ ಸಹಾಯಕರು ಎಂಬ ತಲೆ ಬರಹದಲ್ಲಿ ಮೇ 19ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ವಿಶೇಷ ವರದಿಯನ್ನು ಇದೇ ಸಂದರ್ಭ ಸಚಿವರಿಗೆ ತೋರಿಸಿ ಗಮನ ಸೆಳೆದರು. ಈ ಕುರಿತು ಉದಯವಾಣಿಯೊಂದಿಗೆ ಮಾತನಾಡಿದ ಒಕ್ಕೂಟದ ಪದಾಧಿಕಾರಿಯೂ ಆಗಿರುವ ವಿಜಯಪುರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಆರೋಗ್ಯ ಇಲಾಖೆಯ ಪ್ರತಿನಿಧಿ ಎಂ.ಎಸ್.ಗೌಡರ, ರಾಜ್ಯವ್ಯಾಪಿ ಆರೋಗ್ಯ ಸಹಾಯಕರ ಪದನಾಮ ಬದಲಾವಣೆ, 6ನೇ ವೇತನ ಆಯೋಗದ ತಾರತಮ್ಯ ನಿವಾರಣೆ, ರಿಸ್ಕ್ ಅಲಾವೆನ್ಸ್ ಒದಗಿಸುವಿಕೆ ಸೇರಿ ಕೆಲ ಪ್ರಮುಖ ಬೇಡಿಕೆ ಈಡೇರಿಕೆಗೆ ಸಚಿವರನ್ನು ಒತ್ತಾಯಿಸಲಾಗಿದೆ. ಮನವಿಗೆ ಸ್ಪಂದಿಸಿರುವ ಸಚಿವರು, ಮೇ 26ರಂದು ಬೆಂಗಳೂರಿನ ವಿಕಾಸಸೌಧದಲ್ಲಿ ಇದೇ ವಿಷಯ ಹಿನ್ನೆಲೆ ಸಭೆ ಕರೆದಿದ್ದು, ಸಂಘದ ಪದಾಧಿಕಾರಿಗಳನ್ನೂ ಬರಹೇಳಿದ್ದಾರೆ. ನಾವು ಸದ್ಯ ಬೆಂಗಳೂರಿಗೆ ತೆರಳುತ್ತಿದ್ದು, ಮಂಗಳವಾರದ ಸಭೆಯಲ್ಲಿ ಸಕಾರಾತ್ಮಕ ಸ್ಪಂದನೆ ದೊರಕುವ ಆಶಾಭಾವ ಹೊಂದಿದ್ದೇವೆ ಎಂದರು.
ಸಂಘದ ರಾಜ್ಯಾಧ್ಯಕ್ಷ ಬಿ.ಎ.ಕುಂಬಾರ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಧರ್ಮನಗೌಡ, ಗುರು ಹುಲುಕಲ್, ವಹಾಬ್, ವಿರೂಪಾಕ್ಷ, ಸದಸ್ಯರಾದ ಜಕ್ಕನಗೌಡರ, ವಿನೋದ ಪಗಾದ, ಹೊಸಪೇಟೆ ತಾಲೂಕು ಸದಸ್ಯ ರವಿ ಜಿನಗಾ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲಾ ಸಂಘಗಳ ಸದಸ್ಯರು ಇದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.