ಶಾಲಾ ಮಕ್ಕಳಿಗೆ ತ್ವರಿತ ಪಠ್ಯ ಪೂರೈಕೆಗೆ ಆಗ್ರಹ
Team Udayavani, Jun 23, 2022, 5:42 PM IST
ವಿಜಯಪುರ: ಸರ್ಕಾರ ಅನಗತ್ಯವಾಗಿ ಪಠ್ಯ ಪುಸ್ತಕ ಪರಿಷ್ಕರಣೆಗೆ ಕೈ ಹಾಕಿ ಅಗತ್ಯವಿರುವ ಪಠ್ಯವನ್ನು ತೆಗೆದು ಹಾಕಿ ವಿವಾದ ಹುಟ್ಟುವಂತೆ ಮಾಡಿದೆ. ಇದರಿಂದ ಮಕ್ಕಳ ಓದಿಗೆ ಪುಸ್ತಕಗಳು ದೊರೆಯದಂತಾಗಿದೆ. ತ್ವರಿತ ಗತಿಯಲ್ಲಿ ಕನ್ನಡ ಶಾಲೆಗಳಿಗೆ ಪುಸ್ತಕಗಳು ವಿತರಣೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಿಸಿ ಕರ್ನಾಟಕ ರಕ್ಷಣಾ ವೇದಿಕೆ ನಮ್ಮ ಬಣದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕರವೇ ಜಿಲ್ಲಾಧ್ಯಕ್ಷ ಶೇಷರಾವ್ ಮಾನೆ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ನೂತನ ಸಮಿತಿಯನ್ನು ರಚಿಸಿ ಹಳೆಯ ಸಮಿತಿಗೆ ಬೆಲೆ ಇಲ್ಲದಂತೆ ಮಾಡಿ ಅಗತ್ಯವಿರುವ ವಿಷಯಗಳನ್ನು ಪಠ್ಯದಿಂದ ಕೈ ಬಿಡಲಾಗಿದೆ. ಅನಗತ್ಯ ವಿಷಯಗಳನ್ನು ಪಠ್ಯದಲ್ಲಿ ಸೇರಿಸುವ ಕೆಲಸಕ್ಕೆ ಮುಂದಾದ ಸರ್ಕಾರದ ಕ್ರಮ ಸರಿಯಲ್ಲ ಎಂದು ಹರಿಹಾಯ್ದರು.
ಪಠ್ಯದಲ್ಲಿ ಪುತ್ರಕಾಮಿಷ್ಟಿಯಾಗ ಹಾಗೂ ಅಶ್ವಮೇಧಯಾಗ ಯಜ್ಞ ಯಾಗಗಳು ಈ ದೇಶದ ಅಸ್ಮಿತೆಯೆಂದು ತಪ್ಪಾಗಿ ಹೇಳಲಾಗಿದೆ. ಆ ಮೂಲಕ ಶೈಕ್ಷಣಿಕ ದಾರಿ ತಪ್ಪಿಸುವ ಹುನ್ನಾರ ಸಮಿತಿ ಮಾಡಿರುವುದು ಗಂಭೀರ ವಿಷಯ. ಈ ಬಗ್ಗೆ ಜ್ಞಾನಿಗಳು ಅನಿಷ್ಟ ಪದ್ಧತಿಗಳೆಂದು ಹೇಳಿದ್ದಾರೆ. ಹಾಗಾಗಿ ಅವುಗಳನ್ನು ಪಠ್ಯದಿಂದ ತೆಗೆದು ಹಾಕಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಬರಗೂರು ಸಮಿತಿಯ ಪಠ್ಯ ಪುಸ್ತಕದಲ್ಲಿ ದೋಷಗಳೆಂದು ಹೇಳುತ್ತಿರುವುದು ರೋಹಿತ್ ಚಕ್ರತೀರ್ಥ ಅವರ ಬೌದ್ದಿಕ ಅಜ್ಞಾನದ ಪ್ರತೀಕವಾಗಿದ್ದು, ರಾಷ್ಟ್ರಕವಿ ಕುವೆಂಪು ಅವರನ್ನು ಕಡೆಗಣಿಸಿರುವ ಕ್ರಮ ಖಂಡನಾರ್ಹ ಎಂದು ವಾಗ್ಧಾಳಿ ನಡೆಸಿದರು.
ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು, ಸಾಹಿತಿಗಳು, ದೇಶಕ್ಕಾಗಿ ಮಡಿದ ವೀರಗಾಥೆಯರ ಇತಿಹಾಸವನ್ನು ಸಂಪೂರ್ಣವಾಗಿ ಕೈ ಬಿಡಲಾಗಿದೆ. ಕೆಲವರ ಹೆಸರುಗಳನ್ನು ಪತ್ರಿಕೆಯಲ್ಲಿ ತೋರಿಸಿ ನೂತನ ಪಠ್ಯ ಪುಸ್ತಕ ಪರಿಷ್ಕರಣೆ ಅತ್ಯಂತ ಪರಿಣಾಮಕಾರಿ ಎಂದು ಸುಳ್ಳು ಹೇಳಿ ಸಮಿತಿಯಲ್ಲಿ ತಾವೇ ಉಳಿಯಬೇಕೆಂಬ ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಟಂಕಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಕೆ. ಬನ್ನಟ್ಟಿ, ಪರಶುರಾಮ ಚಲವಾದಿ, ಸೋಮಶೇಖರ ವಾಲೀಕಾರ, ಜಿಲ್ಲಾ ಮಹಿಳಾ ಘಟಕದ ಗೌರವಾಧ್ಯಕ್ಷೆ ಉಷಾ ಭಾಸ್ಕರ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ನಂದಿಕೋಲಮಠ, ರಮೇಶ ಪಾಟೀಲ, ಅಶೋಕ ನಂದಿಹಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.