ಅಮಾನತು ಆದೇಶ ಹಿಂಪಡೆಯಲು ಆಗ್ರಹಿಸಿ ಮನವಿ
Team Udayavani, Mar 11, 2022, 5:15 PM IST
ಮುದ್ದೇಬಿಹಾಳ: ತಾಳಿಕೋಟೆ ತಾಲೂಕು ಚೊಕಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಾಧ್ಯಾಪಕ ಎಸ್.ಎಸ್. ತೀರ್ಥ ಅವರ ಅಮಾನತು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು, ಪಾಲಕರು, ರೈತ ಸಂಘದ ಮುಖಂಡರು ವಿದ್ಯಾರ್ಥಿಗಳೊಂದಿಗೆ ಗುರುವಾರ ಬಿಇಒ ಕಚೇರಿಗೆ ತೆರಳಿ ಬಿಇಒ ಹಣಮಂತಗೌಡ ಮಿರ್ಜಿ ಅವರಿಗೆ ಮನವಿ ಸಲ್ಲಿಸಿದರು.
ಈಚೆಗೆ ತಾಳಿಕೋಟೆ ಬಳಿ ಶಾಲಾ ಮಕ್ಕಳು ಪಿಕ್ನಿಕ್‌ಗೆ ತೆರಳುತ್ತಿದ್ದ ವಾಹನ ಅಪಘಾತದಲ್ಲಿ ಕ್ಲೀನರ್ ಮೃತಪಟ್ಟು ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದ ಹಿನ್ನೆಲೆ ಮೇಲಧಿಕಾರಿಗಳ ಅನುಮತಿ ಪಡೆಯದೇ ಮಕ್ಕಳನ್ನು ಪ್ರವಾಸಕ್ಕೆ ಕಳಿಸಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ತೀರ್ಥ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು. ನಮ್ಮೆಲ್ಲರ ಬೇಡಿಕೆಯಂತೆ ಅಮಾನತು ಆದೇಶ ಹಿಂಪಡೆಯದೇ ಹೋದಲ್ಲಿ ನಾವೆಲ್ಲರೂ ಸೇರಿ ಮಕ್ಕಳ ಸಮೇತ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಆಗಮಿಸಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ. ಇದಕ್ಕೂ ಸ್ಪಂದಿಸದಿದ್ದಲ್ಲಿ ಆಮರಣ ಉಪವಾಸ ಸತ್ಯಾಗ್ರಹ, ತಮಟೆ ಚಳವಳಿ ಸೇರಿ ಹಲವು ಹಂತದ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಈ ವೇಳೆ ಇದ್ದ ಮುಖಂಡರು ತಿಳಿಸಿದರು.
ಬಿಇಒ ಹಣಮಂತಗೌಡ ಮಿರ್ಜಿ ಮನವಿ ಸ್ವೀಕರಿಸಿ ಮಾತನಾಡಿ, ಶಾಲೆಗೆ ಭೇಟಿ ನೀಡಿ ಮಕ್ಕಳು, ಪಾಲಕರಿಂದ ವರದಿ ಪಡೆದು ಯೋಗ್ಯ ನಿರ್ಣಯ ಮಾಡುತ್ತೇನೆ. ಇದಕ್ಕಾಗಿ ನನಗೆ ಒಂದು ವಾರ ಕಾಲಾವಕಾಶ ಕೊಡಬೇಕು. ಅಲ್ಲಿವರೆಗೂ ಎಲ್ಲರೂ ತಾಳ್ಮೆಯಿಂದ ನಡೆದುಕೊಳ್ಳಬೇಕು. ತೀರ್ಥ ಅವರನ್ನು ಅಮಾನತುಗೊಳಿಸುವುದಕ್ಕೂ ಮುನ್ನ ಅವರ ಮೇಲೆ ಬಂದಿರುವ ಆರೋಪಗಳ ಕುರಿತು ಕೂಲಂಕಷವಾಗಿ ತನಿಖೆ ನಡೆಸಿಯೇ ಕ್ರಮ ಕೈಗೊಳ್ಳಲಾಗಿದೆ. ಈಗ ಮತ್ತೊಮ್ಮೆ ಖುದ್ದು ನಾನೇ ಹೋಗಿ ವಿವರವಾದ ಮಾಹಿತಿ ಸಂಗ್ರಹಿಸುತ್ತೇನೆ ಎಂದು ಭರವಸೆ ನೀಡಿದರು.
ನಮಗೆ ಎಷ್ಟು ದಿನಗಳಲ್ಲಿ ಬೇಡಿಕೆ ಈಡೇರಿಸುತ್ತೀರಿ ಎನ್ನುವ ಸ್ಪಷ್ಟ ಭರವಸೆ ಕೊಡಬೇಕು. ತೀರ್ಥ ಅವರ ಅಮಾನತು ರದ್ದುಗೊಳ್ಳುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪಟ್ಟು ಹಿಡಿದರು.
ಕೆಲ ಹೊತ್ತಿನ ಮನವೊಲಿಕೆ ನಂತರ ಪರಿಸ್ಥಿತಿ ತಿಳಿಯಾಗಿ ಎಲ್ಲರೂ ಸ್ವಗ್ರಾಮಕ್ಕೆ ತೆರಳಿದರು. ಈ ವೇಳೆ ಮುಖಂಡರಾದ ಸಾಹೇಬಗೌಡ ಬಿರಾದಾರ, ನಾನಾಗೌಡ ಬಿರಾದಾರ, ಶಂಕರಗೌಡ ಬಿರಾದಾರ, ಬಸವರಾಜ ತಳವಾರ, 50-60 ಜನರು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.