ಸೌಲಭ್ಯಕ್ಕೆ ಆಗ್ರಹಿಸಿ ಮನವಿ
Team Udayavani, Feb 12, 2019, 7:30 AM IST
ಹೊನ್ನಾಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಫೆಡರೇಷನ್ ತಾಲೂಕು ಅಧ್ಯಕ್ಷೆ ಚನ್ನಮ್ಮ, 1975ರಿಂದ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯ ನಿರ್ವಹಿಸುತ್ತಾ ಬಂದಿದ್ದು, ಈಗಾಗಲೆ ಅನೇಕ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ಯಾವುದೇ ಸೌಲಭ್ಯವಿಲ್ಲದೆ ಗೌರವಧನ ಪಡೆದು ನಿವೃತ್ತರಾಗಿದ್ದಾರೆ. ಅವರ ಬದುಕು ಈಗ ಸಂಕಷ್ಟದಲ್ಲಿದೆ ಎಂದು ಹೇಳಿದರು.
ಆಳುವ ಸರ್ಕಾರಗಳು ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರಿಗೆ ಸೇವಾ ಭದ್ರತೆ, ನಿವೃತ್ತಿ ವೇತನವನ್ನಾಗಲಿ ನೀಡದೆ ವಂಚಿಸುತ್ತ ಬಂದಿವೆ. 2019-20ರ ಬಜೆಟ್‌ನಲ್ಲಿ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರುಗಳು ವಂಚನೆ ಮಾಡಿವೆ ಎಂದು ದೂರಿದರು.
ಫೆಡರೇಷನ್ ಖಜಾಂಚಿ ಕೆ.ಎಚ್. ಶಾರಾದಾದೇವಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ 18 ಸಾವಿರ ರೂ. ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಸಿ ಮತ್ತು ಡಿ ಗ್ರೂಪ್ ನೌಕರರನ್ನಾಗಿ ಪರಿಗಣಿಸಬೇಕು. ನಿವೃತ್ತಿ ನಂತರ ನಿವೃತ್ತಿ ವೇತನ ನೀಡಬೇಕು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಅವರ ಸೇವಾ ಹಿರಿತನದ ಅವಧಿ ಪರಿಗಣಿಸಿ ಗೋವಾ ಸರ್ಕಾರದ ರೀತಿಯಲ್ಲಿ ಗೌರವಧನವನ್ನು ನಿಗದಿಗೊಳಿಸಬೇಕು ಸೇರಿದಂತೆ ಇತರೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಫೆಡರೇಷನ್ ಉಪಾಧ್ಯಕ್ಷೆ ರೇಣುಕಮ್ಮ, ಗೌರವಾಧ್ಯಕ್ಷೆ ಗೀತಾ, ಕಾರ್ಯದರ್ಶಿ ವಸಂತಮ್ಮ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳ ಕಾರ್ಯರ್ತೆಯರು ಹಾಗೂ ಸಹಾಯಕಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.