ಕೆರೆ ತುಂಬಿಸಲು ಜೆಡಿಎಸ್ ನಿಯೋಗದಿಂದ ಮನವಿ
Team Udayavani, Jul 21, 2020, 10:01 AM IST
ಇಂಡಿ: ತಾಲೂಕಿನ ಎಲ್ಲ ಕೆರೆಗಳಿಗೆ ಕಾಲುವೆ ಮೂಲಕ ನೀರು ತುಂಬಿಸುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ತಾಲೂಕಿನಲ್ಲಿ ಅನೇಕ ಹಳ್ಳಿಗಳಲ್ಲಿ ಜನ, ಜಾನುವಾರಗಳಿಗೆ ಕುಡಿಯುವ ನೀರು ಸಿಗುತ್ತಿಲ್ಲ. ಮುಂಗಾರು ಹಂಗಾಮಿನಲ್ಲಿ ಮಳೆಯಾಗದೆ ರೈತರ ಬೆಳೆಗಳು ಸಂಪೂರ್ಣ ಕಮರಿವೆ. ಇನ್ನು ಮಳೆಗಾಲ ಪ್ರಾರಂಭವಾದರೂ ಸಹಿತ ಟ್ಯಾಂಕರ್ ಮೂಲಕ ನೀರು ಹಾಕುವ ಪರಿಸ್ಥಿತಿ ನಿಂತಿಲ್ಲ. ತಾಲೂಕಿನಲ್ಲಿ ಸಾಕಷ್ಟು ಕೆರೆಗಳಿದ್ದು ಅವುಗಳಲ್ಲಿ ನೀರಿಲ್ಲ. ಈಗ ಮಹಾರಾಷ್ಟ್ರ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿದೆ. ಮಳೆಯಿಂದ ಭೀಮಾ ನದಿಯಲ್ಲಿ ನೀರು ಹೆಚ್ಚಾಗಿ ಪ್ರವಾಹ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಯಿಂದ ಮತ್ತು ಕೃಷ್ಣಾ ಕಾಲುವೆಯಿಂದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಪುರಸಭೆ ಮಾಜಿ ಸದಸ್ಯ ಸಿದ್ದು ಡಂಗಾ, ಶ್ರೀಶೈಲಗೌಡ ಪಾಟೀಲ, ಮಂಜುನಾಥ ಕಾಮಗೊಂಡ, ಮೆಹಬೂಬ ಬೇನೂರ, ಬಸವರಾಜ ಹಂಜಗಿ, ಎ.ಜೆ. ತಳವಾರ, ಖಲೀಲ್ ತೋಳನೂರ, ರವಿ ಸಿಂಧೆ, ಸಿದ್ದು ಪೂಜಾರಿ ಸೇರಿದಂತೆ ಅನೇಕ ಜೆಡಿಎಸ್ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.