ಜಿಲ್ಲಾಡಳಿತಕ್ಕೆ ಸಂಘಟನೆಗಳ ಮನವಿ
Team Udayavani, Nov 10, 2019, 2:45 PM IST
ವಿಜಯಪುರ: ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸವೊತ್ಛ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ವಿವಿಧ ಸಂಘಟನೆಗಳ ಪ್ರಮುಖರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕರ್ನಾಟಕ ಪ್ರಾಂತ್ಯ ರೈತ ಸಂಘ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ನೇತೃತ್ವದಲ್ಲಿ ಜಿಲ್ಲಾ ಧಿಕಾರಿ ವೈ.ಎಸ್. ಪಾಟೀಲ ಅವರಿಗೆ ಮನವಿ ಸಲ್ಲಿಸಿದ ವಿವಿಧ ಸಂಘಟನೆಗಳು, ಇಂಥ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಪಕ್ಷಗಳು ತಮ್ಮ ಉನ್ನತಿಗೆ ಬಳಸಿಕೊಂಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಹಿಂಸಾಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಸಂಸದೀಯ ಅಂಗವು ಹಲವು ದಶಕಗಳಿಂದಲೇ ಸಂವಿಧಾನದ ಅಡಿಯಲ್ಲಿ ತನ್ನ ಶಕ್ತಿಯನ್ನು ಕ್ರಮೇಣವಾಗಿ ಸವೆಸಿಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಸ್ತುತ ಸಂದರ್ಭದಲ್ಲಿ ಮಾಧ್ಯಮ ರಂಗವೂ ಬಹುತೇಕವಾಗಿ ಇತ್ತೀಚೆಗೆ ಆಡಳಿತಾಂಗದ ಗಿಣಿಯಾಗಿದೆ. ಹೀಗಾಗಿ ಆಡಳಿತ ವರ್ಗಕ್ಕೆ ಸತ್ಯವನ್ನು ಹೇಳುವ ಶಾಂತಿಯನ್ನು ಕಾಪಾಡುವ, ನ್ಯಾಯಕ್ಕಾಗಿ ಹೋರಾಡುವ ಜವಾಬ್ದಾರಿ ನಾಗರಿಕರದ್ದಾಗಿದೆ. ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಲು ನಾವೀಗಮತ, ಜಾತಿ, ಪ್ರಾಂತ, ಲಿಂಗ, ಲೈಂಗಿಕತೆ, ಭಾಷೆ ಸಾಂಸ್ಕೃತಿಕ ನಂಬಿಕೆಗಳ ಭಿನ್ನತೆಗಳನ್ನು ಲೆಕ್ಕಿಸದೇ ಪ್ರತಿಯೊಬ್ಬರು ಜೀವ ಸ್ವಾತಂತ್ರ ಹಾಗೂ ಮೂಲಭೂತ ಹಕ್ಕುಗಳಾಗಿ ಮುಂದಾಗಬೇಕಾದ ಸಮಯ ಬಂದಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ, ಎಸ್.ವೈ. ನಡುವಿನಕೇರಿ, ಜನವಾದಿ ಮಹಿಳಾ ಸಂಘಟನೆಯ ಸೋನುಬಾಯಿ ಬ್ಯಾಳಿ, ಸುಮಂಗಲಾ ಪೂಜಾರಿ, ಎಸ್.ಐ. ಕಿಣಗಿ, ಅಪ್ಪಾಸಾಹೇಬ ಯರನಾಳ, ಮಹಾದೇವ ರಾವಜಿ, ಯುವರಾಜ ಚೋಳಕೆ, ಹೀರಾಬಾಯಿ ಹಜೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.