ಕಬ್ಬಿನ ಹಿಂಬಾಕಿಗೆ ಆಗ್ರಹಿಸಿ ರೈತರಿಂದ ಜಿಲ್ಲಾಡಳಿತಕ್ಕೆ ಮನವಿ
Team Udayavani, Jul 26, 2017, 11:33 AM IST
ವಿಜಯಪುರ: ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ಮುದ್ದೇಬಿಹಾಳ ತಾಲೂಕಿನ ರೈತರಿಗೆ ಬಾಕಿ ಹಣ ನೀಡುವಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಾರತಮ್ಯ ಮಾಡುತ್ತಿದ್ದಾರೆ. ಕೂಡಲೇ ಎಲ್ಲ ರೈತರಿಗೆ ಸಮಾನವಾಗಿ ಹಿಂಬಾಕಿ ನೀಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ರೈತರು ಮನವಿ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಎಸ್. ಬೂದೆಪ್ಪ ಅವರಿಗೆ ಮನವಿ ಸಲ್ಲಿಸಿದ ರೈತರು, ಮುದ್ದೇಬಿಹಾಳ ತಾಲೂಕಿನ ಕಾಶಿನಕುಂಟೆ, ಯಲಗೂರು, ಯಲ್ಲಮ್ಮನ ಬೂದಿಹಾಳ, ಬಳಬಟ್ಟಿ, ವಡವಡಗಿ, ಹೊಳೆಮಸೂತಿ ಇನ್ನುಳಿದ ಹಲವಾರು ಗ್ರಾಮಗಳ ಕಬ್ಬು ಬೆಳೆದ ರೈತರು 2016ನೇ ಸಾಲಿನಲ್ಲಿ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಾಣೆ ಮಾಡಿದ್ದಾರೆ. ಆದರೆ ಈವರೆಗೆ ಕಬ್ಬು ಸಾಗಿಸಿದ ರೈತರಿಗೆ ಬಿಲ್ ಪಾವತಿ ಮಾಡಿಲ್ಲ. ಭೀಕರ ಬರದ ಮಧ್ಯೆಯೂ ರೈತರು ಬೆಳೆದ ಕಬ್ಬಿಗೆ ಬಿಲ್ ಪಾವತಿಸುವಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.
ಕೂಡಲೇ ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ಹಿಂಬಾಕಿ ಪಾವತಿ, ಬೆಂಬಲ ಬೆಲೆ ನೀಡಿಕೆ ಸೇರಿದಂತೆ ಕಬ್ಬು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದರು, ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ಗೌಡಪ್ಪಗೌಡ ಮೈಗೂರ, ಡಾ| ಎಂ. ರಾಮಚಂದ್ರ
ಬೊಮ್ಮನಜ್ಯೋಗಿ, ಸಿದ್ರಾಯ ಜಂಗಮಶೆಟ್ಟಿ ಬಸವ್ವ ಮಾದರ, ನಬಿಸಾಬ ನಂದನೂರ, ಶಿವಮೂರ್ತೆಪ್ಪ ಕಾಮನಕೇರಿ, ಶಿವರಾಯಪ್ಪ ಕಾಮನಕೇರಿ, ಯಲಗೂರದಪ್ಪ ಕಂದಗನೂರ, ಕೆಂಚಪ್ಪ ಮಾದರ, ಬಸಪ್ಪ ಮಾದರ, ದೋಂಡಿಬಾ ಪವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.