ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಲು ಮನವಿ

ವ್ಯಕ್ತಿಗಳ ವೈಭವೀಕರಣದಿಂದ ಪ್ರಜಾಪ್ರಭುತ್ವ ಕಗ್ಗೋಲೆ

Team Udayavani, May 23, 2019, 1:26 PM IST

vp-tdy-2..

ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

ಇಂಡಿ: ಸ್ಥಳೀಯ ಆಡಳಿತ ಚುನಾವಣೆಗಳು ಅತ್ಯಂತ ಪ್ರಮುಖವಾಗಿದ್ದು ಸಾರ್ವಜನಿಕ ಬದುಕಿನಲ್ಲಿ ಒಳ್ಳೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವದು ಮತದಾರರ ಕರ್ತವ್ಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ದೊಡದ್ದು. ವ್ಯಕ್ತಿಗಳ ವೈಭವೀಕರಣದಿಂದ ಪ್ರಜಾಪ್ರಭುತ್ವ ಕಗ್ಗೋಲೆ ಮಾಡಿದಂತಾಗುತ್ತದೆ ಎಂದು ಪರೋಕ್ಷವಾಗಿ ಬೆಜೆಪಿ ಮೇಲೆ ಹರಿಹಾಯ್ದರು.

ಇಂಡಿ ಪಟ್ಟಣದ ಪುರಸಭೆಗೆ 23 ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಗುರುತರ ಜವಾಬ್ದಾರಿ ಮತದಾರರ ಮೇಲಿದೆ. ರಾಜ್ಯದ ಗಡಿ ಭಾಗದಲ್ಲಿರುವ ತಾಲೂಕಿಗೆ ಕಳೆದ ಬಾರಿ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ.

ನನ್ನ ಅಧಿಕಾರ ಅವಧಿಯಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ರಸ್ತೆಗಳ ಸುಧಾರಣೆ, ಸಿಟಿ ಲೈಟ್, ರಸ್ತೆ ವಿಭಜಕ, ಫುಟ್ಪಾತ್‌, ನಗರ ಸೌಂದರ್ಯಿಕರಣಕ್ಕೆ ಒತ್ತು ಕೊಡಲಾಗಿದೆ. ಶೈಕ್ಷಣಿಕ ಪ್ರಗತಿಗೆ ವಿಜಯಪುರ ರಸ್ತೆಯಲ್ಲಿ ಆದರ್ಶ ಶಾಲೆ, ಉರ್ದು ಮಾಧ್ಯಮ ಶಾಲೆ, ಡಿಗ್ರಿ ಕಾಲೇಜು, ಐಟಿಐ ಕಾಲೇಜು ತೆರೆದು ನಗರಕ್ಕೆ ವಿದ್ಯಾಗಿರಿ ಎಂದು ಹೆಸರಿಡಲಾಗಿದೆ ಎಂದರು.

ಬಹು ದಿನಗಳಿಂದ ನಗರಕ್ಕೆ ಒಂದು ಪಪೂ ಕಾಲೇಜು ಮಂಜೂರಾತಿ ತಂದಿರಲಿಲ್ಲ. ನಾನು ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಂದು ಮಂಜೂರಾತಿ ತಂದಿರುವೆ. ತಾಲೂಕಾಡಳಿತ ಪರವಾಗಿ ರಾಷ್ಟ್ರೀಯ ಕಾರ್ಯಕ್ರಮಗಳು, ಕ್ರೀಡೆಗಳು ನಡೆಯಬೇಕಾದರೆ ಸ್ಥಳದ ಕೊರತೆ ಕಂಡು ಬಂದಾಗ ತಾಲೂಕು ಕ್ರೀಡಾಂಗಣ ಮತ್ತು ರಾಜ್ಯ, ರಾಷ್ಟ್ರ ನಾಯಕರ ಆಗಮನಕ್ಕೆ ಹೆಲಿಪ್ಯಾಡ್‌ ನಿಲ್ದಾಣ ಅಗತ್ಯವಿತ್ತು. ಇದನ್ನು ಕೂಡಾ ಕ್ರೀಡಾಂಗಣದ ಕೂದಲೆಳೆ ಅಂತರದಲ್ಲಿಯೇ ಹೆಲಿಪ್ಯಾಡ್‌ ನಿಲ್ಲುವ ಸ್ಥಳ ನಿರ್ಮಾಣ ಮಾಡಲಾಗಿದೆ. ಬಸ್‌ ಡಿಪೊ 17 ವರ್ಷಗಳಿಂದ ಮಂಜೂರಾತಿ ಆದರೂ ಸೂಕ್ತ ಜಾಗ ಇರಲಿಲ್ಲ. ಇಂದು ಬಸ್‌ ಡೀಪೊ ಸ್ಥಾಪಿಸಲಾಗಿದೆ ಎಂದರು.

ಪಟ್ಟಣಕ್ಕೆ ಕುಡಿಯುವ ನೀರಿನ ತೊಂದರೆ ಇರುವದನ್ನು ಅರಿತ ಧೂಳಖೇಡ ಭೀಮಾನದಿಯಿಂದ ಇಂಡಿ ಪಟ್ಟಣಕ್ಕೆ 24×7 ಶುದ್ಧ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಜನೆವರಿಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲಾಗುವದು. ಪಟ್ಟಣದ 8,900 ಮನೆಗಳಿಗೆ ಸರಕಾರದಿಂದಲೇ ಹಣ ಭರಿಸಿ ಹೌಸ್‌ ಕನೆಕ್ಷನ್‌ ಒಳಚರಂಡಿ ಯೋಜನೆ ನಿರ್ಮಾಣ ಮಾಡಲಾಗುವದು. ರಸ್ತೆ ತೆರವು ಕಾರ್ಯಾಚರಣೆ ಮಾಡುವಾಗ ಅನೇಕ ವ್ಯಾಪಾರಸ್ಥರಿಗೆ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಿಕೊಡುವದಾಗಿ ಭರವಸೆ ನೀಡಿದ್ದೆ. ಪುರಸಭೆ ಚುನಾವಣೆ ನಂತರ ಟೆಂಡರ್‌ ಕರೆದು 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೋಳಿಸಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಡಲಾಗುವದು ಎಂದರು.

ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲು ಮನವಿ ಮಾಡಿದ ಅವರು, ಈ ಬಾರಿಯೂ 19ರಿಂದ 20 ಅಭ್ಯರ್ಥಿಗಳು ಪುರಸಭೆಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಿದರು.

ಭೀಮಾಶಂಕರ ಮುರಗುಂಡಿ, ಅನಿಲ ಕುಲಕರ್ಣಿ, ಸಾಂಬಾಜಿರಾವ್‌ ಮಿಸಾಳೆ, ಜಟ್ಟೆಪ್ಪ ರವುಳಿ, ಶ್ರೀಕಾಂತ ಕುಡಿಗನೂರ, ಅನಿಲ ಏಳಗಿ, ಅಂತೂ ಜೈನ್‌, ಪ್ರಶಾಂತ ಕಾಳೆ, ಇಲಿಯಾಸ್‌ ಬೋರಾಮಣಿ, ಜಾವೀದ್‌ ಮೂಮಿನ್‌, ರುಕ್ಮುದ್ದಿನ್‌ ತದೇವಾಡಿ, ಅವಿನಾಶ ಬಗಲಿ ಇದ್ದರು.

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.