ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ
Team Udayavani, Mar 20, 2022, 5:00 PM IST
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಗ್ರಾಮದ ಸಮಗ್ರ ಅಭಿವೃದ್ಧಿ ವಿಷಯದಲ್ಲಿ ಗ್ರಾಮಸ್ಥರ ಸಹಕಾರವೂ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಶನಿವಾರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದ ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ 128 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲ ಸ್ವೀಕೃತ ಅಹವಾಲುಗಳಿಗೆ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ನಿಮ್ಮ ಗ್ರಾಮದ ಗಂಭೀರ ಸಮಸ್ಯೆಗಳಲ್ಲಿ ಪ್ರಮುಖವಾಗಿರುವ ಸ್ಮಶಾನ ಭೂಮಿ ಒತ್ತುವರಿಗೆ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸ್ಮಶಾನ ರಕ್ಷಣೆಗೆ ಕಾಂಪೌಂಡ್ ನಿರ್ಮಿಸುವುದಾಗಿ ಭರವಸೆ ನೀಡಿದರು.
ಇದಲ್ಲದೇ ಕಾಲುದಾರಿ ಸಮಸ್ಯೆಯನ್ನು ಗ್ರಾಮಸ್ಥರು ಪಂಚಾಯತ್ ವ್ಯಾಪ್ತಿಯಲ್ಲೇ ಪರಸ್ಪರ ಮಾತುಕತೆ ಮೂಲಕ ಪರಿಹರಿಸಿಕೊಳ್ಳಬಹುದು. ಇದಕ್ಕಾಗಿ ನಮ್ಮ ಅಧ್ಯಕ್ಷತೆಯಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ದೊಡ್ಡ ದಾರಿ ಸಮಸ್ಯೆ ಪರಿಹಾರಕ್ಕೆ ಶಾಸಕರ ಅನುದಾನದ ಅಡಿ ಕ್ರಮ ಕೈಗೊಳ್ಳಬಹುದಾಗಿದೆ ಎಂದರು.
ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಚರಂಡಿ ಸಮಸ್ಯೆ ಗಂಭೀರವಾಗಿದ್ದು, 15ನೇ ಹಣಕಾಸು ಯೋಜನೆಯ ಅಂದಾಜು ವೆಚ್ಚದಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದ ಪ್ರತಿ ಮನೆ ಮನೆಗೂ ಜಲಜೀವನ ಮಿಷನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಾರಿಗೆ ಸೌಲಭ್ಯ ಹಾಗೂ ಬಸ್ ನಿಲ್ದಾಣ ನಿರ್ಮಿಸಲಾಗುತ್ತದೆ. ಮನೆಗಳ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಸಮಸ್ಯೆ ಪರಿಹಾರಕ್ಕೂ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಗ್ರಾಮದ ಕೆಲ ಪಾನ್ ಶಾಪ್‌ಗ್ಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರಿಂದ ಅಂಥ ಅಂಗಡಿಗಳನ್ನು ಸೀಸ್ ಮಾಡಲಾಗಿದೆ. ಗ್ರಾಮದಲ್ಲಿ ಸಾರಾಯಿ ಅಂಗಡಿ ಬೇಡ ಎಂಬ ಮಹಿಳೆಯರ ಆಗ್ರಹದ ಭಾವನೆಗೆ ಜಿಲ್ಲಾಡಳಿತ ಸೂಕ್ತ ಸ್ಪಂದನೆ ನೀಡಲಿದೆ. ಈ ವಿಷಯದಲ್ಲಿ ಪುರುಷರ ಇಚ್ಛಾಶಕ್ತಿಯೂ ಮುಖ್ಯ ಎಂದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಉಪ್ಪಲದಿನ್ನಿ ಗ್ರಾಮದಲ್ಲಿರುವ ಸಮಸ್ಯೆಗಳಲ್ಲಿ ತಮ್ಮ ವ್ಯಾಪ್ತಿಗೆ ಬರುವ ಎಲ್ಲ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಉಪ್ಪಲದಿನ್ನಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ, ಊಟದ ಕೊಠಡಿ, ಆಹಾರ ಸಾಮಗ್ರಿ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಉಪ ವಿಭಾಗಾಧಿಕಾರಿ ಬಲರಾಮ್ ಲಮಾಣಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಉಪ್ಪಲದಿನ್ನಿ ಗ್ರಾಪಂ ಅಧ್ಯಕ್ಷೆ ಗಂಗೂಬಾಯಿ ಶಿಂಧೆ, ತಹಶೀಲ್ದಾರ್ ಸಂತೋಷ ಮ್ಯಾಗೇರಿ, ತಾಪಂ ಇಒ ಜಿ.ಎಸ್. ಪಠಾಣ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.