ಕೂಡಲಸಂಗಮದೇವ ಅಂಕಿತನಾಮಕ್ಕೆ ಪಾಟೀಲ ಸಂತಸ
Team Udayavani, Dec 30, 2021, 9:47 PM IST
ವಿಜಯಪುರ: ಲಿಂಗಾಯತ ಧರ್ಮ ಗುರು ಬಸವಣ್ಣನವರ ವಚನಾಂಕಿತ ಕೂಡಲ ಸಂಗಮದೇವ ಎಂದೇ ಬಳಸಬೇಕು ಎಂದು ಬಸವಧರ್ಮ ಪೀಠದ ಜಗದ್ಗುರು ಡಾ| ಗಂಗಾ ಮಾತಾಜಿ ತಿಳಿಸಿದ್ದಾರೆ. ಇದು ಸಮಸ್ತ ಲಿಂಗಾಯತ ಸಮಾಜಕ್ಕೆ ಸಂತಸ ತಂದಿದೆ ಎಂದು ಮಾಜಿ ಸಚಿವರಾದ ಶಾಸಕ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ತಿಳಿಸಿರುವ ಅವರು ಲಿಂಗಾಯತರ ಅಸ್ಮಿತೆಯನ್ನು ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಗಂಗಾಮಾತಾಜಿ ಅವರ ಸಂದೇಶ ಲಿಂಗಾಯತರಿಗೆ ನೈತಿಕ ಬೆಂಬಲ ಹೆಚ್ಚಿಸಿದೆ. ಕೂಡಲಸಂಗಮದೇವ ಅಂಕಿತನಾಮ ಬಳಕೆಯಿಂದ ಬಸವಪರ ಸಂಘಟನೆಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ಪಷ್ಟತೆ ದೊರಕಿದಂತಾಗಿದೆ ಎಂದರು.
ಈ ಹಿಂದೆ ಕಲಬುರಗಿಯಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ ಮಾತೆ ಮಹಾದೇವಿ ಅವರಿಗೆ ನಾನು ಈ ಕುರಿತು ವಿನಂತಿ ಮಾಡಿಕೊಂಡಿದ್ದೆ. ಅದಕ್ಕೆ ಮಾತಾಜಿ ಸಕಾರಾತ್ಮಕವಾಗಿ Óಂದ³ ನೆ ನೀಡಿದ್ದರು. ಇಂದು ಅಧಿಕೃತವಾಗಿ ಅವರ ಪೀಠದಿಂದ ಡಾ| ಗಂಗಾಮಾತಾಜಿ ಹೇಳಿಕೆ ನೀಡಿರುವುದು ಸಂತಸದ ತಂದಿದೆ. ಸಮಸ್ತ ಲಿಂಗಾಯತ ಸಮುದಾಯದ ಪರವಾಗಿ ಹೃದಯಪೂರ್ವಕವಾಗಿ ಡಾ| ಗಂಗಾ ಮಾತಾಜಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಎಂ.ಬಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.