ಹದಗೆಟ್ಟ ಅಂಜುಟಗಿ-ಝಳಕಿ ರಸ್ತೆ
Team Udayavani, Aug 26, 2022, 6:25 PM IST
ಇಂಡಿ: ತಾಲೂಕಿನ ಅಂಜುಟಗಿ-ಝಳಕಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಸೇರಿದಂತೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಜನರು ನಿತ್ಯ ಹೈರಾಣಾಗುತ್ತಿದ್ದು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಇಂಡಿ ಪಟ್ಟಣದಿಂದ ಕೇವಲ 18 ಕಿ.ಮೀ ದೂರದಲ್ಲಿರುವ ಝಳಕಿ ರಸ್ತೆ ದುಸ್ಥಿತಿ ಜನರಿಗೆ ಕಿರಿಕಿರಿಯುಂಟು ಮಾಡುತ್ತಿದೆ. ಶಿಕ್ಷಣ ಕಾಶಿ ಎಂದು ಬಿಂಬಿಸುವ ಈ ಗ್ರಾಮದಲ್ಲಿ ನಿತ್ಯ ಸಾವಿರಾರೂ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಈ ಗ್ರಾಮಕ್ಕೆ ಬಂದು ಹೋಗಬೇಕು. ಏಕಂದರೆ ಇಲ್ಲಿ ಎಂಜಿನಿಯರಿಂಗ್, ಸರ್ಕಾರಿ ಪಾಲಿಟೆಕ್ನಿಕ್, ಐಟಿಐ, ಡಿಪ್ಲೊಮಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಿಯು ಕಾಲೇಜು ಹೀಗೆ ಹಲವಾರು ಶಾಲಾ-ಕಾಲೇಜುಗಳು, ವಿದ್ಯಾ ಮಂದಿರಗಳು ಇಲ್ಲಿ ನಿರ್ಮಾಣವಾಗಿವೆ. ಆದರೆ ಸರಿಯಾದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಿಗುವುದಿಲ್ಲ. ಇಂಡಿಯಿಂದ 18 ಕಿ.ಮೀ ಸಂಚರಿಸಲು ಒಂದು ಗಂಟೆ ಕಾಲಾವಕಾಶ ಬೇಕು. ಅದೇ ರಸ್ತೆ ಉತ್ತಮವಾಗಿದ್ದರೆ ಸರಿಯಾದ ಸಮಯದಲ್ಲಿ ಬಸ್ ಒಡಾಡಬಹುದು ಎಂದು ಸಾರ್ವಜನಿಕರು ಹೇಳುತ್ತಾರೆ.
ಝಳಕಿ, ಜೇವೂರ, ಚಡಚಣ, ಶಿರಾಡೋಣ, ಮಂಗಳವೇಡ, ಪ್ರಸಿದ್ಧ ದೇವಸ್ಥಾನವಾದ ಪಂಢರಪುರ, ಪುಣೆ, ಮುಂಬೈವರೆಗೆ ಹಾದು ಹೋಗಲು ಈ ಮಾರ್ಗವಿರುವುದರಿಂದ ಸಾವಿರಾರು ವಾಹನಗಳ ನಿತ್ಯ ಇಲ್ಲಿ ಓಡಾಡುತ್ತವೆ. ಆದರೆ, ರಸ್ತೆ ದುರಸ್ತಿ ಮಾಡುವಲ್ಲಿ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರ ಆರೋಪಿಸುತ್ತಿದ್ದಾರೆ.
ತಾಲೂಕಿನಾದ್ಯಂತ ಹಾದು ಹೋದ ರಾಜ್ಯ ಹೆದ್ದಾರಿಯಲ್ಲಿ ತಗ್ಗು-ಗುಂಡಿಗಳು ಬಿದ್ದು ಸಂಪೂರ್ಣ ಹದಗೆಟ್ಟಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇಂಡಿ ತಾಲೂಕಿನಿಂದ ಬೇರ್ಪಟ್ಟು ಚಡಚಣ ಹೊಸ ತಾಲೂಕಾಗಿದೆ. ಆದರೆ ಹೊಸ ತಾಲೂಕಿಗೆ ಆಗಮಿಸುವಾಗ ರಸ್ತೆ ಗುಂಡಿಗಳು ಆಹ್ವಾನ ನೀಡುತ್ತಿವೆ. ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಗೊತ್ತಾಗುತ್ತಿಲ್ಲ. ಒಟ್ಟಾರೆ ವಾಹನ ಸವಾರರು ಮತ್ತು ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.
ಈ ರಸ್ತೆ ಎರಡೂ ಬದಿಯಲ್ಲಿ ವಾಹನಗಳು ಎದುರು ಬದುರಾದರೆ ವಾಹನ ಬೀಳುವ ಭಯ ಶುರುವಾಗುತ್ತದೆ. ಕಳೆದ ಐದಾರು ವರ್ಷಗಳಿಂದ ರಸ್ತೆಯ ಬಲ ಮತ್ತು ಎಡ ಬದಿಯಲ್ಲಿ ಆಳವಾದ ತಗ್ಗು-ಗುಂಡಿಗಳಿಗೆ ಮೊರಂ ಹಾಕುವ ಕೆಲಸ ಯಾರೊಬ್ಬರೂ ಮಾಡಿಲ್ಲ. ಈ ರಸ್ತೆಯಲ್ಲಿ ಕಳೆದ ಎರಡ್ಮೂರು ತಿಂಗಳಲ್ಲಿ ಸುಮಾರು ಮೂರ್‍ನಾಲ್ಕು ಜನ ದ್ವಿಚಕ್ರ ವಾಹನ ಸವಾರರು ಅಪಘಾತ ಸಂಭವಿಸಿ ಜೀವ ತೆತ್ತ ಉದಾಹರಣೆಗಳೂ ಇವೆ. ಇಷ್ಟಾದರೂ ಯಾವೊಬ್ಬ ಅಧಿಕಾರಿಗಳು, ಆಡಳಿತ ವರ್ಗದವರು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.
ತಾಲೂಕಿನ ಅನೇಕ ರಾಜ್ಯ, ಜಿಲ್ಲಾ ರಸ್ತೆ ಬದಿಯಲ್ಲಿ ಅಪಘಾತಕ್ಕೆ ಸಂಬಂದಿಸಿದ ಮುಂಜಾಗ್ರತೆ ಮೂಡಿಸುವ ಫಲಕಗಳು ಅಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳು ಕಂಡು ಕಾಣದಂತೆ, ಕೇಳಿ ಕೇಳದಂತೆ ಮೂಕವಿಸ್ಮಿತರಾಗಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎನ್ನುವ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.
ಈಗಾಗಲೇ ಝಳಕಿಯಿಂದ ಅಂಜುಟಗಿ ಕಡೆಗೆ 4.5 ಕಿ.ಮೀ ರಸ್ತೆ ಹಾಗೂ ಝಳಕಿಯಿಂದ ಜೇವೂರವರೆಗೆ ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಇನ್ನು 15 ದಿನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು. -ದಯಾನಂದ ಮಠ, ಇಇ, ಲೋಕೋಪಯೋಗಿ ಇಲಾಖೆ, ಇಂಡಿ
ಯಲಗೊಂಡ ಬೇವನೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.