Road Mishap: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Team Udayavani, Jan 10, 2024, 4:37 PM IST
ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿದ್ದು, ಬಸ್ ಪ್ರಯಾಣಿಕರು ಅಪಾಯದಿಂದ ಪಾರಾದರೂ ಬೈಕ್ ಸವಾರ ಮಾತ್ರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂದಗಿ ರಸ್ತೆಯಲ್ಲಿ ಸಂಭವಿಸಿದೆ.
ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ಹೊರಟಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆಎ28 ಎಫ್ 2469 ಸಂಖ್ಯೆಯ ಬಸ್ ಗೆ ಎದುರಿನಿಂದ ಬಂದ್ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಬಸ್ಸಿನ ಅಡಿಯಲ್ಲಿ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.
ಬಸ್ ಗೆ ಬೆಂಕಿ ಹೊತ್ತಿಕೊಳ್ಳುತ್ತಲೇ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಪ್ರಯಾಣಿಕರು, ಕೂಡಲೇ ಬಸ್ ನಿಂದ ಕೆಳಗೆ ಇಳಿದ ಕಾರಣ ಸಂಭವನೀಯ ಭಾರಿ ದುರಂತ ತಪ್ಪಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸೇವೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರೂ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಿಂದಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತ ಬೈಕ್ ಸವಾರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: INDvsAFG; ಭಾರತದ ವಿರುದ್ಧದ ಸರಣಿಯಿಂದ ಹೊರಬಿದ್ದ ಸ್ಪಿನ್ನರ್ ರಶೀದ್ ಖಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.