ಕುಂಬಾರ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂ.
Team Udayavani, Mar 5, 2018, 1:26 PM IST
ವಿಜಯಪುರ: ಜಿಲ್ಲೆಯಲ್ಲಿರುವ ಕುಂಬಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಸ್ಪಂದನೆ ನೀಡುವ ಭರವಸೆ ನೀಡಿರುವ ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ, ಕುಂಬಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದರು.
ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಪ್ರದೇಶ ಕುಂಬಾರರ ಸಂಘದಿಂದ ಆಯೋಜಿಸಿದ್ದ ಕುಂಬಾರ ಸಮಾಜದ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿರುವ ಕುಂಬಾರ ಸಮಾಜ ಸಂಘಟಿತರಾಗಬೇಕು. ಇದಕ್ಕಾಗಿ ಪ್ರತಿಯೊಬ್ಬರು ಒಗ್ಗೂಡಿದಲ್ಲಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಸರ್ಕಾರದ ಸೌಲಭ್ಯಗಳ ಕುರಿತು ಮನವರಿಕೆ ಮಾಡಿಕೊಂಡು, ಅವುಗಳ ಸದ್ಬಳಕೆ ಮಾಡಿಕೊಂಡು ಕುಂಬಾರ ಸಮಾಜ ಅಭಿವೃದ್ಧಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಕಾಲಿಕ ಎನಿಸಿರುವ ತ್ರಿಪದಿ ಬರೆದಿರುವ ಸರ್ವಜ್ಞ ಜಗತ್ತು ಕಂಡ ಮಹಾನ್ ದಾರ್ಶನಿಕ. ಸರ್ವಜ್ಞರ ಚಿಂತನೆಗಳು ಉತ್ತಮ ಜೀವನ ನಡೆಸಲು ಸದಾ ಮಾರ್ಗದರ್ಶಿ. ಅವರ ಚಿಂತನೆ, ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸಮಾಜದಲ್ಲಿ ಮೌಲಿಕ ಜೀವನ ನಡೆಸಲು ಸಾಧ್ಯ ಎಂದರು.
ನೀರಾವರಿ ಸಚಿವ ಪಾಟೀಲರನ್ನು ಹೊಗಳಿದರೆ ತಪ್ಪೇನು?
ವಿಜಯಪುರ: ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರನ್ನು ಹೊಗಳುತ್ತಿರುವುದು ಏಕೆ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ನನ್ನನ್ನು ಪ್ರಶ್ನಿಸಿದ್ದಾರೆ. ಆದರೆ ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡಿರುವ ಅವರನ್ನು ಹೊಗಳಿದರೆ ತಪ್ಪೇನು? ಜಿಲ್ಲೆಗೆ ಮಾದರಿ ಕೆಲಸ ಮಾಡಿರುವ ಅವರನ್ನು ನಾನು ಭವಿಷ್ಯದಲ್ಲೂ ಬಣ್ಣಿಸುತ್ತೇನೆ ಎಂದು ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಹೇಳಿದರು.
ಕುಂಬಾರ ಸಮಾಜದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಒಳ್ಳೆ ಕೆಲಸ ಮಾಡಿದವರನ್ನು ಬೆಂಬಲಿಸಿ ಮಾತನಾಡಬೇಕು. ಅಭಿವೃದ್ಧಿ ಮಾಡಿದವರನ್ನು ಪಕ್ಷ-ಜಾತಿ ಮರೆತು ಹೊಗಳುವುದು ನನ್ನ ಜಾಯಮಾನ.
ಜಿಲ್ಲೆಯ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಕಾರಣವಾಗಿರುವ ಸಚಿವ ಡಾ| ಎಂ.ಬಿ. ಪಾಟೀಲ ಅವರನ್ನು ಹೊಗಳಿದ್ದೇನೆ. ಇದನ್ನೇ ಪ್ರಶ್ನಿಸಿದ ಬಿಜೆಪಿ ನಾಯಕರಿಗೆ ನಾನು ಒಳ್ಳೆಯ ಕೆಲಸ ಮಾಡಿದವರನ್ನು ಹೊಗಳುತ್ತೇನೆ. ಅದನ್ನು ಬಿಟ್ಟು ಬೇರೆ ಏನಾದರೂ ಇದ್ದರೆ ಹೇಳಿ ಎಂದೂ ಹೇಳಿದ್ದೇನೆ ಎಂದರು.
ನಾನು ಮರಳಿ ಬಿಜೆಪಿ ಸೇರುವ ಪ್ರಯತ್ನ ನಡೆದಿದ್ದು, ಬಿಜೆಪಿ ಸೇರದಿದ್ದರೂ ನಾನು ಬರುವ ವಿಧಾನಸಭೆ ಚುನಾವಣೆಯಲ್ಲಿ
ಪಕ್ಷೇತರನಾಗಿ ಕಣಕ್ಕಿಳಿಯುವುದು ಖಚಿತ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.