ಮಹರ್ಷಿ ವಾಲ್ಮೀಕಿಗೆ ಎಲ್ಲೆಡೆ ನಮನ
Team Udayavani, Oct 6, 2017, 12:28 PM IST
ಇಂಡಿ: ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಮಹಾಕಾವ್ಯ ಭಕ್ತಿ, ಸತ್ಯ, ನ್ಯಾಯ ನೀತಿಗಳ ಆಧಾರ ಸ್ಥಂಭವಾಗಿದ್ದು, ಮಾನವೀಯ ನೆಲೆಗಟ್ಟಿನ ಮೇಲೆ ನಡೆಯಲು ದಾರಿ ದೀಪವಾಗಿದೆ. ರಾಮಾಯಣ ಮಹಾಕಾವ್ಯ ಮೂರುಸಾವಿರ ಭಾಷೆಗಳಲ್ಲಿ ಅನುವಾದಗೊಂಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಪಟ್ಟಣದ ವಿಜಯಪುರ ವಾಲ್ಮೀಕಿ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೀನ ದಲಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 20 ಸಾವಿರ ಕೋಟಿ ಹಣ ನೀಡಿ ಸಮುದಾಯದ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದರು.
ಗುತ್ತಿಬಸವಣ, ಮುಳವಾಡ ಏತನೀರಾವರಿ ಯೋಜನೆಗಳು ಅಂತಿಮ ಹಂತದಲ್ಲಿವೆ. ತಾಲೂಕಿನ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಕೆರೆತುಂಬುವ ಯೋಜನೆಗಳು ಪ್ರಾರಂಭವಾಗಿವೆ. ನಿಂಬಾಳ, ಹಂಜಗಿ, ಅರ್ಜನಾಳ, ಕೊಟ್ನಾಳ ಕೆರೆಗಳು ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುವ ಪೂರ್ವದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸುವುದಾಗಿ ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸಿ.ಎಂ. ಬಂಡಗಾರ ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ತಾ.ಪಂ ಅಧ್ಯಕ್ಷ ರುಕ್ಮುದೀನ್ ತದ್ದೇವಾಡಿ, ತಾ.ಪಂ ಸದಸ್ಯ ಅಣ್ಣಪ್ಪ ಬಿದರಕೋಟಿ, ಉಪವಿಭಾಗಾಧಿಕಾರಿ ಮಹಾದೇವಪ್ಪ ಮುರಗಿ, ಜಿ.ಪಂ ಮಾಜಿ ಸದಸ್ಯೆ ಸುನಂದಾ ವಾಲಿಕಾರ, ಬಿಇಒ ಜೆ.ಟಿ. ತಳಕೇರಿ, ಇಲಿಯಾಸ ಬೋರಾಮಣಿ, ತಹಶೀಲ್ದಾರ ಸಂತೋಷ ಮ್ಯಾಗೇರಿ, ತಾ.ಪಂ ಅಧಿಕಾರಿ ರಾಜಕುಮಾರ ತೊರವಿ, ಪುರಸಭೆ ಮುಖ್ಯಾಧಿಕಾರಿ ಎಸ್.ಡಿ. ನಾಯ್ಕ, ಸಮಾಜಕಲ್ಯಾಣ ಅಧಿಕಾರಿ ಆರ್.ವಿ. ಕೊಕಟನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಗೋವರ್ಧನ ಬಿ.ಸಿ, ಡಿವೈಎಸ್‌ಪಿ ರವೀದ್ರ ಶಿರೂರ ವೇದಿಕೆಯಲ್ಲಿದ್ದರು.
ನೌಕರ ಸಂಘದ ಅಧ್ಯಕ್ಷ ಬಸವರಾಜ ರಾವೂರ, ಸಣ್ಣ ನೀರಾವರಿ ಅಧಿಕಾರಿ ಎಸ್.ಎಸ್. ಬಿರಾದಾರ, ಪಿಎಸ್‌ಐ ಎಸ್.ಜಿ. ಬಿರಾದಾರ, ಪ್ರಶಾಂತ ಕಾಳೆ, ದೈಹಿಕ ಶಿಕ್ಷಣಾಧಿಕಾರಿ ಎ.ಬಿ. ಕೌಲಗಿ, ಪಂಡೀತ ಕೊಡಹೊನ್ನ, ನಿಜಣ್ಣಾ ಕಾಳೆ, ಶ್ರೀಶೈಲ ವಾಲಿಕಾರ (ಅಂಜುಟಗಿ), ಮಹೇಶ ಹೊನ್ನಬಿಂದಗಿ, ಧರ್ಮರಾಜ ವಾಲಿಕಾರ, ಜಾವೀದ ಮೋಮಿನ, ಗುರವ ಪಿ. ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.