ಕಾಪಾಡಮ್ಮ ಕೃಷ್ಣೆ


Team Udayavani, Aug 4, 2019, 1:31 PM IST

vp-tdy-2

ವಿಜಯಪುರ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಸೃಷ್ಟಿಸಿರುವ ಕೃಷ್ಣೆ ಜಮೀನುಗಳಿಗೆ ನುಗ್ಗಿ ವಿಜಯಪುರ ಜಿಲ್ಲೆಯ ಅನ್ನದಾತರಲ್ಲಿ ಆತಂಕ ಸೃಷ್ಟಿ ಮಾಡಿದ್ದಾಳೆ.

ಈ ಮಧ್ಯೆ ಮಹಾರಾಷ್ಟ್ರ ಹಾಗೂ ರಾಜ್ಯದ ಕೆಲ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಈ ಮಧ್ಯೆ ಪ್ರವಾಹ ಪರಿಸ್ಥಿತಿ ಕುರಿತು ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಶನಿವಾರ ಸಂಜೆ ವಿಡಿಯೋ ಸಂವಾದ ಮಾಡಿ, ಪ್ರವಾಹ ಪರಿಸ್ಥಿತಿ ಮಾಹಿತಿ ಪಡೆದಿದೆ.

ವಿಜಯಪುರ ಜಿಲ್ಲೆಯ ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳ ಗಡಿಯಲ್ಲಿ ಹರಿವ ಕೃಷ್ಣಾ ನದಿ ಹರಿಯುತ್ತಿದ್ದು, ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 2.36 ಲಕ್ಷ ಕ್ಯೂಸೆಕ್‌ ನೀರು ಒಳ ಹರಿವಿದೆ. ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಒಳಹರಿವಿಗಿಂತ ಸುಮಾರು 10-20 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರನ್ನು ಶಾಸ್ತ್ರಿ ಜಲಾಶಯದ 26 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇಷ್ಟೇ ಪ್ರಮಾಣದ ನೀರು ಬಸವಸಾಗರಕ್ಕೆ ಸೇರುತ್ತಿದ್ದು, ಇಲ್ಲಿಂದಲೂ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಜಲಾಶಯದ 21ಗೇಟ್‌ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ. ಪರಿಣಾಮ ಜಲಾಶಯದ ಅಧಿಕಾರಿಗಳು ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಸಂಬಂಧಿಸಿದ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದ ಕುರಿತು ಮಾಹಿತಿ ನೀಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುದ್ದೇಬಿಹಾಳ ತಾಲೂಕಿನ 10 ಹಾಗೂ ನಿಡಗುಂದಿ ತಾಲೂಕಿನ 5 ಹಳ್ಳಿಗಳ ರೈತರ ಜಮೀನಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಇನ್ನೂ ಸುಮಾರು 20 ಹಳ್ಳಿಗಳ ಜಮೀನುಗಳಿಗೆ ಜಲಾಶಯಗಳ ಹಿನ್ನೀರು ನುಗ್ಗುವ ಭೀತಿ ಇದೆ. ಇದರಲ್ಲಿ ಜಲಾಶಯದ ಹಿನ್ನೀರಿಗೆ ಭೂಸ್ವಾಧೀನ ಆಗದ ರೈತರ ಜಮೀನಿನಲ್ಲಿ ಬೆಳೆ ಹಾನಿಗೆ ಪರಿಹಾರ ನೀಡಲು ಜಿಲ್ಲಾಡಳಿತ ಸಮೀಕ್ಷೆಗೆ ಮುಂದಾಗಿದೆ. ಭೂಸ್ವಾಧೀನ ಪ್ರದೇಶದ ಸರ್ಕಾರಕ್ಕೆ ಸೇರಿದ್ದು, ಇಂಥ ಜಮೀನಿನಲ್ಲಿ ಬಿತ್ತನೆ ಮಾಡಿದ ಬೆಳೆಹಾನಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸ್ಪಷ್ಟಪಡಿಸಿದ್ದಾರೆ.

ವಿಜಯಪುರ ಜಿಲ್ಲೆಯ ಗಡಿಯಲ್ಲಿ ಕೃಷ್ಣಾ ನದಿಗೆ ನಾರಾಯಣಪುರ ಹಾಗೂ ಆಲಮಟ್ಟಿ ಬಳಿ ಎರಡು ಜಲಾಶಯಗಳಿಗೆ ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ ಹೊರ ಹರಿವು ಇರುವ ಹಾಗೂ ಕೊಯ್ನಾ ಮುಂಭಾಗದ ಕರ್ನಾಟಕ ಪ್ರದೇಶದಲ್ಲಿ ಸುರಿಯುವ ಮಳೆಯಿಂದ ನದಿಯಲ್ಲಿ ಹೆಚ್ಚುವರಿ ನೀರಿನಿಂದ ಉಂಟಾಗಬಹುದಾದ ಸಂಭಾವ್ಯ ಪ್ರವಾಹದ ಅಪಾಯ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

ಜಿಲ್ಲಾಡಳಿತ ಶುಕ್ರವಾರ ಸಂಜೆಯಿಂದಲೇ ಕೃಷ್ಣಾ ನದಿ ತೀರ ಪ್ರದೇಶದ ಹಳ್ಳಿಗಳಲ್ಲಿ ಡಂಗೂರ ಸಾರುತ್ತಿದೆ. ಮಕ್ಕಳು, ಮಹಿಳೆಯರು ಹಾಗೂ ಜಾನುವಾರು ನದಿ ತೀರಕ್ಕೆ ಹೋಗದಂತೆ ಜಾಗೃತಿ ಮೂಡಿಸುತ್ತಿದ್ದು, ನದಿಗೆ ಹೆಚ್ಚಿನ ನೀರು ಹರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ವಿಜಯಪುರ ಜಿಲ್ಲೆಯಲ್ಲಿ ಜಮೀನಿಗೆ ನೀರು ನುಗ್ಗಿದ್ದರೂ ಜನವಸತಿ ಪ್ರದೇಶಕ್ಕೆ ನೀರು ನುಗ್ಗುವ ಹಾಗೂ ನಡುಗಡ್ಡೆ ಪ್ರದೇಶಗಳು, ವಸ್ತಿ ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಇಲ್ಲ. ಆದಾಗ್ಯೂ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವಿವಿಧ ತಹಶೀಲ್ದಾರ್‌ ಹಾಗೂ ಸಂಭಾವ್ಯ ಪ್ರವಾಹ ಪೀಡಿತ ಹಳ್ಳಿಗಳ ಕಂದಾಯ ಅಧಿಕಾರಿ-ಸಿಬ್ಬಂದಿಗೆ ರವಿವಾರ ಸೇರಿದಂತೆ ರಜೆ ರಹಿತವಾಗಿ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಲು ಸೂಚಿಸಿದೆ. ಇದಲ್ಲದೇ ಪ್ರವಾಹ ಪರಿಸ್ಥಿತಿ ಉಂಟಾಗಿ ಜನವತಿ ಪ್ರದೇಶಕ್ಕೆ ನೀರು ನುಗ್ಗಿದಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಅಗ್ನಿಶಾಮಕ ಹಾಗೂ ತಾಲೂಕ ಆಡಳಿತದ ಬಳಿ 4 ಬೋಟ್‌ಗಳನ್ನು ಸಿದ್ಧವಾಗಿ ಇರಿಸಿಕೊಂಡಿವೆ.

ಮತ್ತೂಂದೆಡೆ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆ ದೋರಿದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ವಿಜಯಪುರ, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆ. ಅಲ್ಲದೇ ಸಂಭಾವ್ಯ ಪ್ರವಾಹ ಎದುರಿಸಲು ಜಿಲ್ಲಾಡಳಿತಗಳು ಸನ್ನದ್ಧ ಸ್ಥಿತಿಯಲ್ಲಿ ಇರಬೇಕು. ಆಗತ್ಯ ಎನಿಸಿದಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಿದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೀಡು ಬಿಟ್ಟಿರುವ ಎನ್‌ಡಿಆರ್‌ಎಫ್‌ ತಂಡಗಳನ್ನು ನೆರವಿಗೆ ಕಳಿಸಲು ಸಿದ್ಧ ಎಂಬ ಸಂದೇಶವನ್ನೂ ನೀಡಿದ್ದಾರೆ.

• ನಿಡಗುಂದಿ, ಮುದ್ದೇಬಿಹಾಳ ತಾಲೂಕಿನ 15 ಹಳ್ಳಿ ಜಮೀನುಗಳಿಗೆ ನುಗ್ಗಿದ ಹಿನ್ನೀರು

• 20 ಹಳ್ಳಿ ಜಮೀನುಗಳಿಗೆ ನೀರು ನುಗ್ಗುವ ಸಾಧ್ಯತೆ-ಜನವಸತಿ ಪ್ರದೇಶಕ್ಕಿಲ್ಲ ಅಪಾಯ

• ನಾಲ್ಕು ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದ

• ಜಿಲ್ಲೆಯಲ್ಲಿ 4 ಬೋಟ್‌ಗಳ ಸಹಿತ ಅಧಿಕಾರಿಗಳ ತಂಡ ಪರಿಸ್ಥಿತಿ ಎದುರಿಸಲು ಸನ್ನದ್ಧ

• ಪರಿಸ್ಥಿತಿ ಕೈ ಮೀರಿದರೆ ಎನ್‌ಡಿಅರ್‌ಎಫ್‌ ತಂಡ ಕರೆಯಿಸಲು ರಾಜ್ಯ ಸರ್ಕಾರ ಚಿಂತನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಸಮನ್ವಯ:

ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆ ಹಾಗೂ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ, ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ನದಿ ಪಾತ್ರದಲ್ಲಿ ಮಳೆ, ಜಲಾಶಯಗಳಿಗೆ ಇರುವ ಒಳ-ಹೊರ ಹರಿವಿನ ಪ್ರಮಾಣ, ನದಿಯಲ್ಲಿ ಉಂಟಾಗಬಹುದಾದ ಸಂಭಾವ್ಯ ಪ್ರವಾಹ ಪರಿಸ್ಥಿತಿ ಕುರಿತು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ವಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿಕೊಂಡು ಸಮನ್ವಯ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಕೃಷ್ಣಾ ನದಿಯಲ್ಲಿನ ಒಳ-ಹೊರ ಹರಿವಿನ ಪ್ರಮಾಣ ಆಧರಿಸಿ ಪ್ರತಿ ಅರ್ಧ ಗಂಟೆಗೊಮ್ಮೆ ಮಾಹಿತಿ ಪಡೆಯಲಾಗುತ್ತದೆ. 123 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಶಾಸ್ತ್ರಿ ಜಲಾಶಯದಲ್ಲಿ 102 ಟಿಎಂಸಿ ನೀರು ಸಂಗ್ರಹಿಸಿ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತದೆ. ಒಳಹರಿನ ಪ್ರಮಾಣ ಕಡಿಯೆಯಾದಲ್ಲಿ ಜಲಾಶಯದಲ್ಲಿ ಪೂರ್ಣ ಪ್ರಮಾಣದ ನೀರು ಸಂಗ್ರಹಿಲಾಗುತ್ತದೆ.• ವೈ.ಎಸ್‌. ಪಾಟೀಲ, ಡಿಸಿ
•ಜಿ.ಎಸ್‌.ಕಮತರ

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.