Vijayapura; ಸರ್ಕಾರ ಪತನದ ಹಗಲುಗನಸು ಕಾಣುವವರಿಗೆ ಬೇಡ ಎನ್ನಲಾದೀತೆ: ಡಾ.ಪರಮೇಶ್ವರ್


Team Udayavani, Nov 21, 2023, 1:02 PM IST

ಸರ್ಕಾರ ಪತನದ ಹಗಲುಗನಸು ಕಾಣುವವರಿಗೆ ಬೇಡ ಎನ್ನಲಾದೀತೆ: ಡಾ.ಪರಮೇಶ್ವರ್

ವಿಜಯಪುರ: ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ನನಸಾಗದ ಹಗಲು ಕಾಣುವವರಿಗೆ ಬೇಡವೆನ್ನಲಾದೀತೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಬಿಜೆಪಿ ನಾಯಕರ ಹೇಳಿಕೆಗೆ ಕುಟುಕಿದ್ದಾರೆ.

ಮಂಗಳವಾರ ನಗರದಲ್ಲಿರುವ ಐತಿಹಾಸಿಕ ಹಾಸಿಂಪೀರ ದರ್ಗಾಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲು ನಡೆಸಿರುವ ಪ್ರಯತ್ನದ ಫಲವಾಗಿ ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಡಾ.ಪರಮೇಶ್ವರ, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಡೇ ಡ್ರೀಮ್ ಕಾಣುವವರಿಗೆ ಬೇಡ ಎನ್ನಲಾಗದು.

ಕನಸಾಗಿಯೇ ಉಳಿಯುವ ಹಗಲುಗನಸು ಕಾಣುವವರನ್ನು ಅಂಥ ಕನಸು ಕಾಣಲಿ ಎಂದು ಬಿಟ್ಟುಬಿಡಬೇಕು ಎಂದ ಅವರು, ನಾವು ಜೋಡೆತ್ತುಗಳು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷದ ನಾಯಕ ಆರ್. ಆಶೋಕ ಹೇಳಿಕೆಗೆ ಬಹಳ ಸಂತೋಷ ಎಂದಷ್ಟೇ ಪರಮೇಶ್ವರ ನಗೆ ಬೀರಿದರು.

ಹೂಮಳೆ ಸ್ವಾಗತ: ಡಾ.ಜಿ. ಪರಮೇಶ್ವರ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದಾಗ ಹೂಮಳೆ ಗರೆದು ಅದ್ದೂರಿ ಸ್ವಾಗತ ಕೋರಿದರು. ಮಂಗಳವಾರ ಬೆಳಿಗ್ಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ನಗರದಲ್ಲಿನ ಪಕ್ಷದ ಕಛೇರಿ ಭೇಟಿ ನೀಡಿದ್ದರು. ಈ ಹಂತದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸಚುವರಾದ ಡಾ.ಜಿ.ಪರಮೇಶ್ವರ, ಜೊತೆಗಿದ್ದ ಜವಳಿ ಸಚಿವ ಶಿವಾನಂದ ಪಾಟೀಲ ಅವರಿಗೆ ಭಾರಿ ಗಾತ್ರದ ಹೂಮಾಲೆ ಹಾಕಲು ಮುಂದಾದಾಗ, ಸಚಿವರು ತಡೆದರು. ಆದರೆ ಸಚಿವರ ಆಕ್ಷೇಪಣೆಗೆ ಮಣಿಯದ ಕಾಂಗ್ರೆಸ್ ಕಾರ್ಯಕರ್ತರು, ಹೂಮಳೆ ಗರೆದು ಜೈಕಾರ ಕೂಗುತ್ತಲೇ ಇದ್ದರು.

ಇದರಿಂದಾಗಿ ಸಚಿವರಾದ ಡಾ.ಪರಮೇಶ್ವರ, ಶಿವಾನಂದ ಪಾಟೀಲ ಕೆಲಕಾಲ ಕಾರಿನಿಂದ ಇಳಿಯದೇ ಕಾರಿನ‌ ಒಳಗೇ ಕುಳಿತಿದ್ದರು. ಬಳಿಕ ಕಾಂಗ್ರೆಸ್ ಕಚೇರಿಗೆ ಬಂದ ಸಚಿವ ದ್ವಯರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.