ಕೋವಿಡ್ ಹೆಸರಲ್ಲಿ ಬಿಜೆಪಿ ರಾಜಕೀಯ
Team Udayavani, May 17, 2020, 4:01 PM IST
ಸಾಂದರ್ಭಿಕ ಚಿತ್ರ
ಸೇಡಂ: ಕೋವಿಡ್ ಹೆಸರಲ್ಲಿ ಬಿಜೆಪಿ ನಾಯಕರು ರಾಜಕೀಯ ಪಿತೂರಿ ನಡೆಸಿ ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ದಾಮೋದರರೆಡ್ಡಿ ಆರೋಪಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ನಡೆಸಿದ ಸಭೆ ರಾಜಕೀಯ ಪ್ರೇರಿತ ಎಂದು ಸುಳ್ಳು ಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರು ಸತ್ಯ ಮೊದಲು ಅರ್ಥೈಸಿಕೊಳ್ಳಬೇಕು. ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಾಸ್ಕ್, ಸ್ಯಾನಿಟೈಸರ್ ಹಂಚಲು ಮಾತ್ರ ಸಾಮಾಜಿಕ ಅಂತರ ಕಾಪಾಡಿಕೊಂಡು ಸಭೆ ಸೇರಲಾಗಿತ್ತು. ಆದರೆ ಆ ವಿಷಯ ತಿರುಚಿ ರಾಜಕೀಯ ಪ್ರಭಾವ ಬಳಸಿ ಶರಣಪ್ರಕಾಶ ಪಾಟೀಲ ಅವರ ಮೇಲೆ ದೂರು ದಾಖಲಿಸುವಂತೆ ಬಿಜೆಪಿಯವರೇ ಮಾಡಿದ್ದಾರೆ. ಪ್ರಜೆಗಳ ಆರೋಗ್ಯ ವಿಚಾರಿಸುವ ಹಕ್ಕು ಹಾಲಿ ಶಾಸಕರಿಗೆ ಇದ್ದಷ್ಟೇ ಹಕ್ಕು ಮಾಜಿ ಶಾಸಕರಿಗೂ ಇರಲಿದೆ ಎಂದರು.
ಮುಖಂಡ ಜೈಭೀಮ ಊಡಗಿ, ಎಪಿಎಂಸಿ ಅಧ್ಯಕ್ಷ ಸಿದ್ದು ಬಾನಾರ ಮಾತನಾಡಿ, ಶರಣಪ್ರಕಾಶ ಪಾಟೀಲ ರಾಜಕೀಯ ಸಭೆ ನಡೆಸಿಲ್ಲ. ಜನರಿಗೆ ಆಗಿರುವ ನೀರಿನ ಸಮಸ್ಯೆ ಆಲಿಸಿದ್ದಾರೆ. ನರೇಗಾದಡಿ ಕಾರ್ಯಗಳ ಬಗ್ಗೆ ಪರೀಶೀಲಿಸಿದ್ದಾರೆ. ಬಿಜೆಪಿಯವರಿಗೆ ಸಾಮಾನ್ಯ ಜ್ಞಾನವೂ ಇಲ್ಲ. ಅದರಿಂದ ತಮ್ಮ ಪ್ರಭಾವ ಬಳಸಿ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ವರ್ಷದಲ್ಲಿ ಸೇಡಂ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯ ಶೂನ್ಯವಾಗಿದೆ ಎಂದು ಟೀಕಿಸಿದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ ಮಾತನಾಡಿ, ಮಾಜಿ ಸಚಿವ ಶರಣಪ್ರಕಾಶ ಪಾಟೀಲ ಹಾಗೂ ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಿಗೆ ಕಪ್ಪು ಚುಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಮುಖಂಡರಾದ ಸುದರ್ಶನರೆಡ್ಡಿ ಪಾಟೀಲ, ದತ್ತು ಪಾಟೀಲ, ರುದ್ರು ಪಿಲ್ಲಿ, ಉಮಾರೆಡ್ಡಿ ಹಂದರಕಿ, ಬಸ್ಸಯ್ಯಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.