ವಿಜಯಪುರ: ಒಂದೇ ದಿನ 7 ಜನರಿಗೆ ಕೋವಿಡ್ ಸೋಂಕು, ಬಾಧಿತರ ಸಂಖ್ಯೆ 68ಕ್ಕೇರಿಕೆ
Team Udayavani, May 22, 2020, 6:13 PM IST
ವಿಜಯಪುರ: ಶುಕ್ರವಾರ ಒಂದೇ ದಿನ ವಿಜಯಪುರ ಜಿಲ್ಲೆಯಲ್ಲಿ 7 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟಿನ್ ನಲ್ಲಿ ಜಿಲ್ಲೆಯ ಮತ್ತೆ 7 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರಲ್ಲಿ ಮೂರು ಹೆಣ್ಣು ಹಾಗೂ ನಾಲ್ಕು ಪುರುಷರು ಸೇರದ್ದಾರೆ. ಹೊಸ ಸೋಂಕಿತರಲ್ಲಿ ಇಬ್ಬರು ನಗರದ ಕಂಟೈನ್ಮೆಂಟ್ ಝೋನ್ ವಲಯದ ಸಂಪರ್ಕ ಇದ್ದರೆ, ಇತರೆ ಐವರು ಮಹಾರಾಷ್ಟ್ರ ರಾಜ್ಯದಿಂದ ಮರಳಿ, ಸಾಂಸ್ಥಿಕ ಕ್ವಾರಂಟೈನ್ ನಿಗಾದಲ್ಲಿ ಇದ್ದವರಾಗಿದ್ದಾರೆ.
ಹೊಸ ಸೋಂಕಿತರನ್ನು ಕಂಟೋನ್ಮೆಂಟ್ ಪ್ರದೇಶದ ಸಂಪರ್ಕ ಹೊಂದಿದ್ದ 34 ವರ್ಷದ ಯುವಕ ಪಿ1660, 33 ವರ್ಷದ ಯುವಕ ಪಿ1661, ಮಹಾರಾಷ್ಟ್ರ ರಾಜ್ಯದಿಂದ ಮರಳಿರುವ 30 ವರ್ಷದ ಯುವ ಪಿ1725, 15 ವರ್ಷದ ಬಾಲಕಿ ಪಿ1726, 36 ವರ್ಷದ ಮಹಿಳೆ ಪಿ1727, 29 ವರ್ಷದ ಮಹಿಳೆ ಪಿ1728, 20 ವರ್ಷದ ಯುವಕ ಪಿ1729 ಎಂದು ಗುರುತಿಸಲಾಗಿದೆ.
ಹೊಸದಾಗಿ ದೃಢಪಟ್ಟ 7 ಸೋಂಕಿತರು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68 ಕ್ಕೆ ಏರಿದೆ. ಕೋವಿಡ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಫಲವಾಗಿ ಈ ವರಗೆ 41 ಜನರು ಸೋಂಕುಮುಕ್ತರಾಗಿ ಮನೆಗೆ ಮರಳಿದ್ದು, 23 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 4 ಸೋಂಕಿತರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.