ವಾಹನ ಪಲ್ಟಿಯಾಗಿ ಹಲವರಿಗೆ ಗಾಯ: ಮಾನವೀಯತೆ ಮೆರೆದ ಶಾಸಕ ನಡಹಳ್ಳಿ
Team Udayavani, Oct 26, 2022, 7:53 PM IST
ಮುದ್ದೇಬಿಹಾಳ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು15 ಜನರು ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ತಾಲೂಕಿನ ಅಡವಿ ಹುಲಗಬಾಳ ಗ್ರಾಮದ ಬೀರಪ್ಪನ ಬೆಟ್ಟದಲ್ಲಿ ದೀಪಾವಳಿ ಪಾಡ್ಯದಂದು ನಡೆದ ಜಾತ್ರೆ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಸ್ವಗ್ರಾಮದತ್ತ ಹೊರಟಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು ಅದರಲ್ಲಿ ಇದ್ದ ಇಬ್ಬರು ಮಕ್ಕಳು, ಮೂವರು ವೃದ್ಧರು ಸೇರಿ ಒಟ್ಟು 15 ಜನರಿಗೆ ತೀವ್ರಸ್ವರೂಪದ ಮತ್ತು ಸಣ್ಣ ಪುಟ್ಟ ಗಾಯಗಳಾಗಿವೆ.
ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುತ್ತಿದ್ದ ಸ್ಥಳೀಯ ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿಯವರು ಗಾಯಾಳುಗಳನ್ನು ಆಸ್ಪತ್ರೆಗೆ ತಕ್ಷಣವೇ ಸಾಗಿಸಲು ತಮ್ಮ ಸರ್ಕಾರಿ ವಾಹನ ನೀಡಿದ್ದೂ ಅಲ್ಲದೆ ಗಾಯಾಳುಗಳ ಆರೈಕೆಗೆ ತಮ್ಮ ಆಪ್ತ ಸಹಾಯಕರು, ಆಪ್ತ ಸಿಬಂದಿ ಕಳುಹಿಸಿ ಮಾನವೀಯತೆ ಮೆರೆದರು.
ಎಲ್ಲರಿಗೂ ಮುದ್ದೇಬಿಹಾಳದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಮತ್ತು ತುರ್ತು ಚಿಕಿತ್ಸೆ ನೀಡಲಾಗಿದೆ. ಇಬ್ಬರು ಮಹಿಳೆಯರ ಕಾಲು ಮುರಿದಿದೆ ಎಂದು ಮೂಲಗಳು ತಿಳಿಸಿವೆ. ಶಾಸಕರ ಆಪ್ತ ಸಹಾಯಕ ಶಿವಾನಂದ ಮೂಲಿಮನಿ, ಶಾಸಕರ ಆಪ್ತರಾದ ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಉದಯ ರಾಯಚೂರ ಮತ್ತಿತರರು ಗಾಯಾಳುಗಳ ಆರೈಕೆ ಮಾಡುತ್ತಿದ್ದು ಆಸ್ಪತ್ರೆಯ ಸಿಬಂದಿ ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.