ಶೃಂಗೇರಿ ಶ್ರೀಗಳಿಂದ ಶಾರದಾ ಪೂಜೆ
Team Udayavani, Nov 27, 2018, 12:30 PM IST
ವಿಜಯಪುರ: ಧರ್ಮಾಚರಣೆ ಪ್ರತಿಯೊಬ್ಬ ಭಕ್ತನ ಆದ್ಯ ಕರ್ತವ್ಯ ಎಂದು ಶೃಂಗೇರಿ ಶಾರದಾ ಪೀಠದ ವಿಧುಶೇಖರಭಾರತಿ ಶ್ರೀಗಳು ಹೇಳಿದರು. ಸನಾತನ ಧರ್ಮ ಪ್ರಚಾರಕ್ಕೋಸ್ಕರ ದೇಶಾದ್ಯಂತ ವಿಜಯಯಾತ್ರೆ ಹಮ್ಮಿಕೊಂಡಿರುವ ಶ್ರೀಗಳು, ವಿಜಯಪುರದ ಶಂಕರ ಮಠದಲ್ಲಿ ನಡೆದ ಸಭೆಯಲ್ಲಿ ಆಶೀವರ್ಚನ ನೀಡಿದರು.
ತನ್ನ ಪ್ರದೇಶಕ್ಕೆ ರಾಜನಾದವನು ಒಂದು ನಿಯಮ ಜಾರಿಗೆ ತಂದಂತೆ, ಇಡಿ ಜಗತ್ತಿಗೆ ರಾಜನಾದ ಭಗವಂತನು ಜಗದ ನಿಯಮ ಅನುಷ್ಠಾನಕ್ಕೆ ತಂದಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಧರ್ಮಾಚರಣೆ ಹಾಗೂ ಪಾಲನೆ ಮಾಡಬೇಕು. ಸನಾತನ ಧರ್ಮವನ್ನು ಎಲ್ಲೆಡೆ ಪಸರಿಸಿದ ಕೀರ್ತಿ ಜಗದ್ಗುರು ಶಂಕರ ಭಗವತ್ಪಾದರಿಗೆ ಸಲ್ಲುತ್ತದೆ ಎಂದರು.
ಸಮಾರಂಭಕ್ಕೂ ಮುನ್ನ ಸಂಸ್ಥಾನ ಅರ್ಚಕರಿಂದ ಚಂದ್ರಮೌಳೇಶ್ವರ ಪೂಜೆ, ನಂತರ ಶ್ರೀಗಳಿಂದ ಮಂತ್ರಾಕ್ಷತೆ ವಿತರಣೆ ನಡೆಯಿತು. ನಂತರ ಭಕ್ತರಿಂದ ಪಾದುಕಾ ಪೂಜೆ, ವಸ್ತ್ರ ಸಮರ್ಪಣೆ, ಭಿಕ್ಷಾವಂದನೆ ಸೇವೆಗಳು ಜರುಗಿದವು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಶ್ರೀಮಠಕ್ಕೆ ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆದರು. ಗಂಗಾಧರ ದೇಶಪಾಂಡೆ, ಇನಾಮದಾರ, ಅರುಣ ಸೊಲಾಪುರಕರ, ಡಾ| ಶೈಲೇಶ ದೇಶಪಾಂಡೆ, ರಾಜು ಪದಕಿ, ಸಿದ್ಧಾಂತಿ, ಮಹೇಶ ದೇಶಪಾಂಡೆ, ಶಾಮ ಜೋಶಿ, ಶಂಕರ ಕುಲಕರ್ಣಿ, ವಲ್ಲಭ ಮನಗೂಳಿ, ಪ್ರಕಾಶ ಅಕ್ಕಲಕೋಟ, ಶ್ರೀನಿವಾಸ ಬೆಟಗೇರಿ, ವಿಜಯ ಜೋಶಿ, ಶ್ರೀಹರಿ ಗೊಳಸಂಗಿ ಇದ್ದರು. ಶ್ರೀಮಠದ ಅಧ್ಯಕ್ಷ ಪ್ರದೀಪ ಕುಲಕರ್ಣಿ ಸ್ವಾಗತಿಸಿದರು. ಪ್ರಮೋದ ಅಥಣಿ ಪ್ರಾಸ್ತಾವಿಕ ಮಾತನಾಡಿದರು. ರಾಜು ಪದಕಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.