ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಇನ್ನೂ ಹೊಂದಾಣಿಕೆ ಆಗಿಲ್ಲ: ಸಿದ್ಧರಾಮಯ್ಯ
Team Udayavani, Nov 12, 2019, 11:39 AM IST
ವಿಜಯಪುರ: ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕೈ ಜೋಡಿಸುವ ಕುರಿತು ಕಾಂಗ್ರೆಸ್ ಇನ್ನೂ ನಿರ್ಧಾರ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಲ್ಲ, 12 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಆದರೆ ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವ ಶಂಕೆ ಇದೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ರಚಿಸುವಾಗ ಖರ್ಗೆಗೆ ಸಿಎಂ ಸ್ಥಾನ ನೀಡಲು ತಾವು ವಿರೋಧಿಸಿಲ್ಲ. ದೇವೇಗೌಡರು ಯಾಕೆ ಹಾಗೆ ಹೇಳುತ್ತಿದ್ದಾರೋ ಏನೋ ಗೊತ್ತಿಲ್ಲ. ಸಮ್ಮಿಶ್ರ ಸರ್ಕಾರ ಒಪ್ಪಂದ ಮಾಡುವಾಗ ನಾನು ಆ ಸಭೆಯಲ್ಲಿ ಇರಲಿಲ್ಲ. ಹೈಕಮಾಂಡ್ ಸೂಚನೆ ಹಿನ್ನೆಲೆ ನಾನು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಜೊತೆ ಸರ್ಕಾರ ರಚನೆಗೆ ಒಪ್ಪಿದ್ದೆ ಎಂದರು.
ಉಪಚುನಾವಣೆ ವಿಚಾರದಲ್ಲಿ ಉಹಾಪೋಹ ಪತ್ರಿಕೋದ್ಯಮ ಹೆಚ್ಚಾಗಿದೆ. ಈಗಾಗಲೇ ಕೆಲವು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಬಾಕಿ 7 ಕ್ಷೇತ್ರಗಳಿಗೆ ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.
ಸಚಿವ ಸಿ ಟಿ ರವಿ ಅವರ ಹೇಳಿಕೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾವು ಆಪರೇಶನ್ ಹಸ್ತ ಮಾಡಲ್ಲ. ಸಚಿವ ಸಿ.ಟಿ. ರವಿ ಮೊದಲು ಬಿಜೆಪಿ ಬಿಟ್ಟು ಬರುವವರನ್ನು ತಡೆಯಲಿ. ಬಿಜೆಪಿ ಬಳಿ ದುಡ್ಡಿದೆ, ಹೀಗಾಗಿ ಅನೈತಿಕ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ಯಾವುದೇ ಮುಖಂಡರೊಂದಿಗೆ ಮನಸ್ತಾಪ ಉಂಟಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.