Siddeshwar Swamiji ಗುರುನಮನ: 10 ಸಾವಿರ ನಾರಿಯರಿಂದ ವಚನಜ್ಞಾನ ಯಾತ್ರೆ


Team Udayavani, Dec 27, 2023, 7:45 PM IST

1-sdsdsa

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾದ ವರ್ಷದ ಸ್ಮರಣೆಗಾಗಿ ಗುರುನಮನದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದೆ. ಇದರ ಭಾಗವಾಗಿ ಬುಧವಾರ ನಗರಲ್ಲಿ ಸುಮಾರು 10 ಸಾವಿರ ಮಹಿಳೆಯರು ಸಿದ್ಧೇಶ್ವರ ಶ್ರೀಗಳು ರಚಿಸಿದ ಗ್ರಂಥಗಳನ್ನು ತಲೆಮೇಲೆ ಹೊತ್ತು ಶೋಭಾಯಾತ್ರೆ ನಡೆಸಿದರು.

ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮ ಜ.1 ರಿಂದ ಎರಡು ದಿನಗಳ ಕಾಲ ಜ್ಞಾನಯೋಗಾಶ್ರಮದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಸಂದೇಶವನ್ನು ಸಮಾಜಕ್ಕೆ ತಲುಪಿಸಲು ಡಿ.23 ರಿಂದ 31 ರ ವರೆಗೆ ಜ್ಞಾನಯೋಗಾಶ್ರಮದಿಂದ ವಿವಿಧ ವೈಚಾರಿಕ ಗೋಷ್ಠಿಗಳು ನಡೆಯುತ್ತಿವೆ.

ಶ್ರೀಗಳ ಮಹಿಳಾ ಭಕ್ತರು ಬುಧವಾರ ಶ್ರೀಸಿದ್ದೇಶ್ವರ ದೇವಸ್ಥಾನದಿಂದ ಜ್ಞಾನಯೋಗಾಶ್ರಮದ ವರೆಗೆ ಶ್ರೀಗಳು ರಚಿಸಿದ ಜ್ಞಾನನಿಧಿ ಗ್ರಂಥಗಳನ್ನು ತಲೆಮೇಲೆ ಹೊತ್ತು ಶೋಭಾಯಾತ್ರೆ ನಡೆಸಿದರು. ವಿಜಯಪುರ ನಗರ, ಜಿಲ್ಲೆ ಮಾತ್ರವಲ್ಲದೇ ನೆರೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳು ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 10 ಸಾವಿರ ಭಕ್ತೆಯರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಜ್ಞಾನನಿಧಿ ಗುರುವರ್ಯರಿಗೆ ವಿಶೇಷ ಗುರುನಮನ ಸಲ್ಲಿಸಿದರು.

ಬೃಹತ್ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅಕ್ಕನ ಬಗಳ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ಸಾಂಪ್ರದಾಯಿ ಸೀರೆಯುಟ್ಟು, ಸಿದ್ಧೇಶ್ವರ ಶ್ರೀಗಳು ರಚಿಸಿ ಕೃತಿಗಳನ್ನು ಕೆಂಪು ವರ್ಣದ ವಸ್ತ್ರಗಳಲ್ಲಿ ಕಟ್ಟಿ, ತಲೆ ಮೇಲೆ ಹೊತ್ತು ಸಾಲಾಗಿ ಶಿಸ್ತುಬದ್ಧವಾಗಿ ಸಾಗುತ್ತಿದ್ದರು. ಮೆರವಣಿಗೆಯಲ್ಲಿ ಯುವತಿಯರು ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶೋಭಾಯಾತ್ರೆ ಮೆರವು ಹೆಚ್ಚಿಸಿದ್ದರು.

ಸಿದ್ದೇಶ್ವರ ದೇವಸ್ಥಾನದಿಂದ ಜ್ಞಾನಯೋಗಾಶ್ರಮದ ವರೆಗೆ ಜೋಡಿ ಸಾಲಿನಲ್ಲಿ ಮಹಿಳೆಯರು ಹೆಜ್ಜೆ ಹಾಕುತ್ತಿದ್ದರೆರ, ಆಶ್ರಮ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಹೂಮಳೆಗರೆದು, ಸಂಭ್ರಮವನ್ನು ಇಮ್ಮಡಿಗೊಳಿಸಿದ್ದರು.ಮತ್ತೆ ಕೆಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರಿಗೆ ಸಿಹಿ ತಿನಿಸು, ನೀರು, ಪಾನೀಯ ವಿತರಿಸುವ ಮೂಲಕ ತಮ್ಮ ಸೇವೆ ಸಲ್ಲಿಸುತ್ತಿದ್ದರು.

ವಚನಜ್ಞಾನ ಪಾದಯಾತ್ರೆ ಹಿನ್ನೆಲೆಯಲ್ಲಿ ಸಿದ್ದೇಶ್ವರ ದೇವಸ್ಥಾನದಿಂದ ಜ್ಞಸಾನಯೋಗಾಶ್ರಮದ ವರೆಗೆ ಶೋಭಾಯಾತ್ರೆ ಸಾಗುತ್ತಿದ್ದ ಆಶ್ರಮ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಾಹಗಳು ರಹಿತ ರಸ್ತೆಯಲ್ಲಿ ಶ್ವೇತ ಸೀರೆ ಧರಿಸಿದ ಮಹಿಳೆಯರು ಸಿದ್ಧೇಶ್ವರ ಶ್ರೀಗಳ ಜ್ಞಾನಗ್ರಂಥಗಳನ್ನು ತಲೆಯ ಮೇಲೆ ಹೊತ್ತು ಹೆಜ್ಜೆ ಹಾಕುತ್ತಿದ್ದಾಗ ನೆರೆದವರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿದ್ದರು.

ಸಿದ್ಧೇಶ್ವರ ಶ್ರೀಗಳ ಭಕ್ತರು ಶಿಸ್ತು ಸಂಯಮಕ್ಕೆ ಹೆಸರಾಗಿದ್ದರೂ, ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಿತ್ತು. ಎನ್.ಸಿ.ಸಿ. ಕೆಡಿಟ್‍ಗಳು ಶೋಭಾಯಾತ್ರೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ನಿಂತು ವಚನಜ್ಞಾನ ಯಾತ್ರೆ ಸುಗಮವಾಗಿ ಸಾಗುವಂತೆ ಮಾಡುವಲ್ಲಿ ತಮ್ಮ ಸೇವೆ ನೀಡುತ್ತಿದ್ದರು.

ನಗರದ ಅಕ್ಕನ ಬಳಗ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ಕಾರ್ಯಕರ್ತರು ಶ್ರೀಗಳ ಜ್ಞಾನಕೃತಿಗಳನ್ನು ಸ್ವಯಂ ಪ್ರೇರಿತವಾಗಿ ತಲೆ ಮೇಲೆ ಹೊತ್ತು ಜ್ಞಾನಪಾದಯಾತ್ರೆ ಮಾಡಿದ್ದಾರೆ. ಶೋಭಾಯಾತ್ರೆಯನ್ನು ಯಶಸ್ಸಿಗೊಳಿಸುವ ಮೂಲಕ ಮಾದರಿ ರೂಪಿಸಿದ್ದಾರೆ.
– ಹರ್ಷಾನಂದ ಶ್ರೀಗಳು ಜ್ಞಾನಯೋಗಾಶ್ರಮ ವಿಜಯಪುರ

ಸಿದ್ದೇಶ್ವರ ಶ್ರೀಗಳು ಜ್ಞಾನಕ್ಕೆ ಮಹತ್ವ ನೀಡುತ್ತಿದ್ದ ಕಾರಣ ಜ್ಞಾನಬುತ್ತಿ ಹೊತ್ತು ಸಾಗುವ ಮಹಿಳೆಯರ ಶೋಭಾಯಾತ್ರೆಯನ್ನು ವಚನ ಜ್ಞಾನ ಯಾತ್ರೆ ಎಂದು ಕರೆದಿದ್ದೇವೆ. ಇದರಿಂದ ಜನರಲ್ಲಿ ಜ್ಞಾನದ ಹಸಿವು ಹೆಚ್ಚುವಂತಾಗಲಿ ಎಂಬ ಆಶಯ ನಮ್ಮದು.
– ರುದ್ರಮುನಿ ಶ್ರೀಗಳು ಆಲಮಟ್ಟಿ.

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.