ಅಭಿವೃದ್ಧಿ ಕಾಮಗಾರಿಗಳಿಗೆ ಸಿದ್ದೇಶ್ವರ ಶ್ರೀ ಮೆಚ್ಚುಗೆ

33 ಕೋಟಿ ರೂ. ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ

Team Udayavani, Aug 27, 2019, 2:41 PM IST

vp-tdy-2

ಬಸವನಬಾಗೇವಾಡಿ: ಬಸವ ಭವನದ ಕಾಮಗಾರಿ ನೀಲನಕ್ಷೆಯನ್ನು ಶಾಸಕ ಶಿವಾನಂದ ಪಾಟೀಲ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ತೋರಿಸಿದರು.

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ ಕಾಮಗಾರಿ, ವಿಜಯಪುರ ರಸ್ತೆಯಲ್ಲಿ ನಡೆಯುತ್ತಿರುವ ಬಸವ ಭವನ ಕಾಮಗಾರಿಯನ್ನು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವೀಕ್ಷಿಸಿ ಶುಭಾಶೀರ್ವಾದ ನೀಡಿದರು.

ಈ ವೇಳೆ ಶಾಸಕ ಶಿವಾನಂದ ಪಾಟೀಲ ಅವರು, ಮೆಗಾ ಮಾರುಕಟ್ಟೆ ಕಾಮಗಾರಿ ಮೊದಲ ಹಂತದಲ್ಲಿ 33 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಳ ಭಾಗದಲ್ಲಿ ವಾಹನಗಳ ಪಾರ್ಕಿಂಗ್‌ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದು ಐದು ಅಂತಸ್ತಿನ ಮೆಗಾ ಮಾರುಕಟ್ಟೆ ನಿರ್ಮಾಣವಾಗಲಿದೆ. ಸದ್ಯ ಮೊದಲ, ಎರಡನೇ ಅಂತಸ್ತಿನ ಕಟ್ಟಡ ಕಾಮಗಾರಿ ಆರಂಭವಾಗಿದೆ. ಮೆಗಾ ಮಾರುಕಟ್ಟೆಯ ಮೇಲಿನ ಅಂತಸ್ತಿನ ಅಂಗಡಿಗಳಿಗೆ ಹೋಗಲು ಲಿಪ್ಟ್ ವ್ಯವಸ್ಥೆ ಮಾಡಲಾಗುವದು. ಇದು ಒಟ್ಟು 57 ಕೋಟಿ ವೆಚ್ಚದ ಕಾಮಗಾರಿಯಾಗಿದೆ. ಪಟ್ಟಣದಲ್ಲಿರುವ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ ಎಂದು ಶ್ರೀಗಳಿಗೆ ವಿವರಿಸಿದರು.

ಪಟ್ಟಣದ ವಿಜಯಪುರ ರಸ್ತೆಯಲ್ಲಿ ಅಂದಾಜು 9 ಕೋಟಿ ವೆಚ್ಚದಲ್ಲಿ ಭವ್ಯವಾದ ಬಸವ ಭವನ ನಿರ್ಮಾಣವಾಗುತ್ತಿದೆ. ಇದರಲ್ಲಿ ಮದುವೆ ಸೇರಿದಂತೆ ವಿವಿಧ ಸಮಾರಂಭಗಳನ್ನು ಮಾಡಲು ಜನರಿಗೆ ಬೇಕಾದ ಸೌಲಭ್ಯಗಳನ್ನು ಒಳಗೊಂಡಂತೆ ಬಸವ ಭವನ ನಿರ್ಮಾಣವಾಗುತ್ತಿದೆ. ಮೇಲ್ಭಾಗದಲ್ಲಿ ದೊಡ್ಡ ಪ್ರಮಾಣದ ಹಾಲ್ ವ್ಯವಸ್ಥೆಯಿದೆ. ಕೆಳ ಭಾಗದಲ್ಲಿ ಊಟದ ವ್ಯವಸ್ಥೆಗೆ ಜಾಗೆ ಕಲ್ಪಿಸಲಾಗಿದೆ. ಅಡುಗೆ ತಯಾರಿಸಲು ಅಡುಗೆ ಕೋಣೆ, ಜನರು ಕೈ ತೊಳೆಯಲು ಬೇಕಾದ ನಲ್ಲಿ ವ್ಯವಸ್ಥೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಒಳಗೊಂಡ ಭವ್ಯವಾದ ಬಸವ ಭವನ ನಿರ್ಮಾಣವಾಗುತ್ತಿದೆ.

ಇದಕ್ಕೆ ಪಕ್ಕದಲ್ಲಿರುವ ಉರ್ದು ಪ್ರಾಥಮಿಕ ಶಾಲೆಯ ಜಾಗೆಯನ್ನು ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ವಿಚಾರವಿದೆ. ಉರ್ದು ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಲಾಗುವದು. ಇಂಗಳೇಶ್ವರ ರಸ್ತೆಯಲ್ಲಿ ಪುರಸಭೆಯಿಂದ ಕಡು ಬಡವರಿಗೆ ಅನುಕೂಲವಾಗುವ 500 ಜಿ ಪ್ಲಸ್‌ ಮಾದರಿಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ ಎಂದು ಶ್ರೀಗಳ ಗಮನಕ್ಕೆ ತಂದ ಅವರು, ಬಸವ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಶ್ರೀಗಳಿಗೆ ಆಗಮಿಸಬೇಕೆಂದು ಮನವಿ ಮಾಡಿಕೊಂಡರು.

ಪಟ್ಟಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿ ಹರ್ಷಿಸಿದರು. ಈ ಸಂದರ್ಭದಲ್ಲಿ ಸಿದ್ದಲಿಂಗ ಸ್ವಾಮೀಜಿ, ಅಕ್ಕಅನ್ನಪೂರ್ಣತಾಯಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ತಹಸೀಲ್ದಾರ ಎಂ.ಎನ್‌.ಚೋರಗಸ್ತಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಕರೂರ, ಅಭಿಯಂತರರಾದ ಜಿ.ಸಿ.ವಂದಾಲ, ವಿಲಾಸ ರಾಠೊಡ, ಮುಖ್ಯಾಧಿಕಾರಿ ಬಿ.ಎ.ಸೌದಾಗರ, ಮುಖಂಡರಾದ ಬಸವರಾಜ ಕೋಟಿ, ಸಂಗಮೇಶ ಓಲೇಕಾರ, ಬಸವರಾಜ ರಾಯಗೊಂಡ, ಅಶೋಕ ಹಾರಿವಾಳ, ದೇವೇಂದ್ರ ಚವ್ಹಾಣ, ಶಿವಾನಂದ ತೋಳನೂರ, ವಿನುತ ಕಲ್ಲೂರ, ಸಂಜೀವ ಕಲ್ಯಾಣಿ, ನೀಲಪ್ಪ ನಾಯಕ, ಜಗದೇವಿ ಗುಂಡಳ್ಳಿ, ರುಕ್ಮಿಣಿ ರಾಠೊಡ, ಸುನೀಲ ಚಿಕ್ಕೊಂಡ, ಸುರೇಶ ಮಣ್ಣೂರ, ದೀಲಿಪ್‌, ಬಸವರಾಜ ಗಚ್ಚಿನವರ, ನಜೀರ ಗಣಿ, ರಾಜು ಬೂತನಾಳ, ಪಿಎಸ್‌ಐ ಗುರುಶಾಂತ ದಾಶ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.