ಎಂಬಿಪಿ ಕೆಲಸಕ್ಕೆ ನೀರೆರೆದ ಸಿದ್ದೇಶ್ವರ ಶ್ರೀ


Team Udayavani, Feb 10, 2019, 11:12 AM IST

vij-2.jpg

ವಿಜಯಪುರ: ಎಂ.ಬಿ. ಪಾಟೀಲರೆ ನೀವು ನೀರಾವರಿಗಾಗಿ ಮಾಡಿರುವ ಕೆಲಸ ಸದಾ ಶಾಶ್ವತವಾಗಿರುತ್ತದೆ. ನೀರಾವರಿಗೆ ನೀವು ಮಾಡಿರುವ ಕಾರ್ಯ ದೊಡ್ಡದಿದೆ. ಭವಿಷ್ಯದಲ್ಲೂ ನೀವು ಎಲ್ಲಿದ್ದರೂ ಸದಾ ನೀರಾವರಿಗಾಗಿ ನಿಮ್ಮ ಕಾರ್ಯ ಮುಂದುವರಿಸಿ. ನೀರು ಪುಣ್ಯದ ಕಾರ್ಯ, ನೀರಿನೊಂದಿಗೆ ನಿಮ್ಮ ಹೆಸರು ಸದಾ ಇರುತ್ತದೆ ಎಂದು ಸಿದ್ದೇಶ್ವರ ಶ್ರೀಗಳು ಆಶೀರ್ವದಿಸಿದ್ದಾರೆ.

ಶನಿವಾರ ಗೃಹ ಸಚಿವ ಎಂ.ಬಿ. ಪಾಟೀಲ ಬಾಗಲಕೋಟೆ ಜಿಲ್ಲೆಯ ಬೀಳಗಿ ಮಾರ್ಗವಾಗಿ ವಿಜಯಪುರ ಜಿಲ್ಲೆಯತ್ತ ಪ್ರಯಾಣ ಬೆಳೆಸಿದ್ದರು. ಇದೇ ವೇಳೆ ಸಿದ್ದೇಶ್ವರ ಶ್ರೀಗಳು ಕೃಷ್ಣಾ ನದಿಗೆ ನಿರ್ಮಿಸಿರುವ ಕೊರ್ತಿ-ಕೋಲ್ಹಾರ ಸೇತುವೆ ಮೇಲೆ ನಡೆದುಕೊಂಡು ಬರುತ್ತಿದ್ದರು. ಬೀಳಗಿ ಹಿರೇಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳು ಕೂಡ ವಿಜಯಪುರ ನಗರದತ್ತ ಹೊರಟಿದ್ದರು. ಮಾರ್ಗಮಧ್ಯೆ ಕೃಷ್ಣಾ ಸೇತುವೆ ಮೇಲೆ ವಾಹನ ನಿಲ್ಲಿಸಿದ ಶ್ರೀಗಳು, ನದಿ ದೃಶ್ಯ ಸವಿಯುತ್ತ ಸೇತುವೆ ಮೇಲೆ ನಡೆಯುತ್ತ ಹೊರಟಿದ್ದರು. ಶ್ರೀಗಳನ್ನು ನೋಡಿದ ಸಚಿವ ಎಂ.ಬಿ. ಪಾಟೀಲ ಅವರು ತಮ್ಮ ವಾಹನ ನಿಲ್ಲಿಸಿ, ಶ್ರೀಗಳ ಬಳಿ ಹೋಗಿ ಆಶೀರ್ವಾದ ಪಡೆದು ಯೋಗಕ್ಷೇಮ ವಿಚಾರಿಸಿದರು.

ಬಳಿಕ ಸಚಿವರ ಆರೋಗ್ಯ ವಿಚಾರಿಸಿದ ಶ್ರೀಗಳು, ನೀರಾವರಿ ಕೆಲಸಗಳು ಹೇಗೆ ನಡೆಯುತ್ತಿವೆ ಎಂದು ಕೇಳಿದರು. ನಾನೀಗ ನೀರಾವರಿ ಸಚಿವನಲ್ಲ, ಗೃಹ ಸಚಿವ. ಹೀಗಾಗಿ ಖಾತೆ ಕೆಲಸದ ಕುರಿತು ನನಗೆ ತಿಳಿಯದು ಎಂದಾಗ ನೀವು ಎಲ್ಲಿದ್ದರೂ, ಯಾವ ಖಾತೆ ನಿಭಾಯಿಸಿದರೂ ನೀರಾವರಿ ವಿಷಯ ಮಾತ್ರ ಮರೆಯಬಾರದು ಎಂದು ಸಲಹೆ ನೀಡಿದರು.

ನಂತರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ವಿವಿಧ ಕಾಮಗಾರಿಗಳ ಕುರಿತು ಸಚಿವರಿಂದ ಮಾಹಿತಿ ಪಡೆದ ಶ್ರೀಗಳು, ಭೂಸ್ವಾಧೀನ ಹಾಗೂ ಭೂ ಪರಿಹಾರ ಕುರಿತು ಏನೇನು ಕಾರ್ಯ ಆಗುತ್ತಿದೆ ಎಂದು ಕೇಳಿದರು. ಈ ಹಂತದಲ್ಲಿ ತಮಗೆ ಮಾಹಿತಿ ಇರುವುದನ್ನು ಶ್ರೀಗಳೊಂದಿಗೆ ಹಂಚಿಕೊಂಡ ಸಚಿವರು, ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಪುನರ್ವಸತಿ-ಪುನರ್‌ ನಿರ್ಮಾಣ ಕಾರ್ಯಕ್ಕಾಗಿ 3 ಹಂತಗಳಲ್ಲಿ ರೂಪುರೇಷೆ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಸಮಗ್ರ ಚರ್ಚೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟಿಲ ವಿವರಿಸಿದರು.

ಗೃಹ ಸಚಿವನಾಗಿ ಎರಡನೇ ಬಾರಿಗೆ ನನ್ನ ತವರು ಜಿಲ್ಲೆಗೆ ಹೊರಟ ವೇಳೆ ಅನಿರೀಕ್ಷಿತವಾಗಿ ಕೃಷ್ಣಾ ನದಿ ಸ್ಥಳದಲ್ಲಿ ಶ್ರೀಗಳ ದರ್ಶನ ಹಾಗೂ ಮಾರ್ಗದರ್ಶನ ದೊರೆತಿದ್ದು ನನ್ನ ಸೌಭಾಗ್ಯ. ಶ್ರೀಗಳ ಆಶಯದಂತೆ ನಡೆದುಕೊಳ್ಳುತ್ತೇನೆ. ಜಿಲ್ಲೆಯ ನೀರಾವರಿ ಹಾಗೂ ರೈತರ ಕುರಿತು ಶ್ರೀಗಳ ಕಳಕಳಿ, ಕಾಳಜಿ ಅನನ್ಯ. ಸಮಿಶ್ರ ಸರ್ಕಾರದ ಸಿಎಂ ಎಚ್.ಡಿ.ಕುಮಾರಸ್ವಾಮಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರೊಂದಿಗೆ ನಾನೂ ಕೂಡಾ ನೀರಾವರಿಗೆ ಸದಾ ಶ್ರಮಿಸುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.