ಜೆಡಿಎಸ್‌ನಿಂದ ಗುರುರಾಜಗೌಡ ಸ್ಪರ್ಧೆ?

Team Udayavani, Mar 14, 2021, 5:24 PM IST

Sindagi byelection

ಸಿಂದಗಿ: ಮಾಜಿ ಪ್ರಧಾನಿ ದೇವೇಗೌಡರ ಕಟ್ಟಾ ಆಭಿಮಾನಿಯಾಗಿದ್ದ ದಿ| ಶಾಸಕ ಎಂ.ಸಿ. ಮನಗೂಳಿ ಅವರ ನಿಧನದ ನಂತರ ಅವರ ಪುತ್ರ ಅಶೋಕ ಮನಗೂಳಿ ಜೆಡಿಎಸ್‌ ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು. ಈ ರಾಜಕೀಯ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್‌ ಪಕ್ಷ ಎಲ್ಲಿ ಮರೆಯಾಯಿತು ಎಂದು ಕಾರ್ಯಕರ್ತರಲ್ಲಿ ದುಗುಡು ತುಂಬಿಕೊಂಡಿತ್ತು.

ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಅಭ್ಯರ್ಥಿಯನ್ನು ಕಣದಲ್ಲಿ ಇಳಿಸಬೇಕು ಎಂದು ನಿರ್ಧರಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜಿಲ್ಲಾ ಜೆಡಿಎಸ್‌ ಮುಖಂಡರೊಂದಿಗೆ ಚರ್ಚಿಸಿ ಯೋಗ್ಯ ಅಭ್ಯರ್ಥಿಯನ್ನು ಹುಡುಕಾಟ ಮಾಡುವ ಸಂದರ್ಭದಲ್ಲಿ ಅವರಿಗೆ ಕಂಡದ್ದು ತಾಲೂಕಿನ ಚಾಂದಕವಠೆ ಜಿಪಂ ಸದಸ್ಯ ಗುರುರಾಜಗೌಡ ದೇವಪ್ಪಗೌಡ ಪಾಟೀಲ. ಗುರುರಾಜಗೌಡ ಪಾಟೀಲ ಅವರು ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಿದಲ್ಲಿ ಉಪ ಚುನಾವಣೆಯಲ್ಲಿ ತ್ರಿಕೋನ ಸ್ಪಧೆ ನಡೆಯುತ್ತದೆ. ಜೆಡಿಎಸ್‌ ಕಾರ್ಯಕರ್ತರು ಉತ್ಸುಕರಾಗಿದ್ದಾರೆ.

ಜಿಪಂ ಅಭ್ಯರ್ಥಿ ಗುರುರಾಜಗೌಡ ದೇವಪ್ಪಗೌಡ ಪಾಟೀಲ ಅವರನ್ನು ಮಾ. 11ರಂದು ಮಾಜಿ  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕರೆಸಿಕೊಂಡು ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಲು ಆಹ್ವಾನ ನೀಡಿದ್ದಾರೆ. ಗುರುರಾಜಗೌಡರು ಎರಡು ದಿನ ಕಾಲಾವಕಾಶ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

2016ರಲ್ಲಿ ಚಾಂದಕವಠೆ ಜಿಪಂ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಪೈಪೋಟಿ ಮಧ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿ ಸಿದ ಕಂಪ್ಯೂಟರ್‌ ವಿಷಯದಲ್ಲಿ ಬಿಇ ಪದವಿ ಪಡೆದ ಗುರುರಾಜಗೌಡ ದೇವಪ್ಪಗೌಡ ಪಾಟೀಲ ಇತಿಹಾಸ ಸೃಷ್ಟಿಸಿದ್ದಾರೆ. ಗುರುರಾಜಗೌಡ ಅವರ ಅಜ್ಜ ಗುರುಲಿಂಗಪ್ಪಗೌಡ ಪಾಟೀಲ ಅವರು 1962ರಲ್ಲಿ ಇಂಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾಗಿ, 1967ರಲ್ಲಿ ಸ್ವತಂತ್ರ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಗುರುರಾಜಗೌಡರ ತಂದೆ ದೇವಪ್ಪಗೌಡ ಅವರು 1987ರಲ್ಲಿ ದೇವಪ್ಪಗೌಡ ಅವರು ಜಿಪಂ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಸದಾ ಸಾಮಾಜಿಕ ಸೇವೆಯಲ್ಲಿರುವುದರಿಂದ 2013ರ ವಿಧಾನಸಭಾ ಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ಸ್ಪ ರ್ಧಿಸಲು ಬಯಸಿದರು. ಆದರೆ ಟಿಕೆಟ್‌ ಸಿಗಲಿಲ್ಲ. ಆದರೂ ಅಭಿಮಾನಿಗಳ ಒತ್ತಾಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದರು. ಚುನಾವಣೆ  ಹತ್ತಿರವಾದಾಗ ಅವರು ಹೃದಯಾಘಾತದಿಂದ ನಿಧನರಾದರು. ನಂತರ ಅವರ ಮಗ ಗುರುರಾಜಗೌಡ ಪಾಟೀಲ 2016ರಲ್ಲಿ ಚಾಂದಕವಠೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿ ಸಿದರು. 2021ರ  ಸಿಂದಗಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದ ಚುನಾವಣೆಗೆ ಸ್ಪ ರ್ಧಿಸಿ ಗೆಲುವು ಸಾಧಿ ಸುವ ಮೂಲಕ ತಂದೆಯ ಕನಸು ನನಸು ಮಾಡಲು ಜೆಡಿಎಸ್‌ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವಕಾಶ ನೀಡಿದ್ದಾರೆ.

ಜಿಪಂ ಅಭ್ಯರ್ಥಿ ಗುರುರಾಜಗೌಡ ಪಾಟೀಲ ಅವರು ಜೆಡಿಎಸ್‌ ಪಕ್ಷದಿಂದ ಸ್ಪ ರ್ಧಿಸಿದಲ್ಲಿ ಸಿಂದಗಿ ಕ್ಷೇತ್ರದ ಜೆಡಿಎಸ್‌ ಕಾರ್ಯಕರ್ತರಿಗೆ ಮರು ಜೀವ ಬಂದಂತಾಗುತ್ತದೆ ಎಂದು ಹಳೆ ಜೆಡಿಎಸ್‌ ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಂಡರು.

ರಮೇಶ ಪೂಜಾರ

ಟಾಪ್ ನ್ಯೂಸ್

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.