ಕಾಲುವೆ ನಿರ್ಮಾಣದಲ್ಲಿ ಶಿವಾನಂದ ಪಾಟೀಲ ಭ್ರಷ್ಟಾಚಾರ: ಬೆಳ್ಳುಬ್ಬಿ
Team Udayavani, Oct 17, 2017, 1:19 PM IST
ಬಸವನಬಾಗೇವಾಡಿ: ಜಿಲ್ಲೆಯ ಮುಳವಾಡ, ಚಿಮ್ಮಲಗಿ, ಗುತ್ತಿ ಬಸವಣ್ಣ ಸೇರಿದಂತೆ ಅನೇಕ ಏತ ನೀರಾವರಿ ಯೋಜನೆಗಳ
ಕಾಲುವೆ ನಿರ್ಮಾಣದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರು ಕೋಟ್ಯಂತರ ರೂ. ಭ್ರಷ್ಟಾಚಾರ ಎಸಗಿದ್ದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಸೋಮವಾರ ಮಸೂತಿ ಪಶ್ಚಿಮ ಮುಖ್ಯ ಕಾಲುವೆ ವೀಕ್ಷಿಸಿದ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ಮುಳವಾಡ, ಚಿಮ್ಮಲಗಿ, ಗುತ್ತಿಬಸವಣ್ಣ ಸೇರಿದಂತೆ ಕೆರೆ ತುಂಬುವ ಯೋಜನೆ ಜಿಲ್ಲೆಯಲ್ಲಿ 6 ಸಾವಿರ ಕೋಟಿ ಕಾಮಗಾರಿ ಸಾಗಿದೆ. ಇದರಲ್ಲಿ ಸುಮಾರು 4 ಸಾವಿರ ಕೋಟಿಯಷ್ಟು ಕಾಮಗಾರಿ ಮುಗಿದಿದೆ ಎಂದು ಹೇಳುತ್ತಾರೆ. ಅದರಲ್ಲಿ ಮಸೂತಿ, ಮಸಿಬಿನಾಳ, ನಂದಿಹಾಳ ಸೇರಿದಂತೆ ಅನೇಕ ಕಡೆ ಕಾಲುವೆ ಸಂಪೂರ್ಣ ಕಳಪೆ ಗುಣಮಟ್ಟದಾಗಿದ್ದು. ಇದರಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅವರು ಕೋಟ್ಯಂತರ ರೂ. ಭ್ರಷ್ಟಾಚಾರದಲ್ಲಿ ಶಾಮಿಲ್ ಆಗಿದ್ದು ಸತ್ಯಾಂಶ ತಿಳಿಯಬೇಕಾದರೆ ಎಸಿಬಿ ಮತ್ತು ಸಿಬಿಐ ತನಿಖೆಯಾಗಬೇಕು ಎಂದು ಹೇಳಿದರು.
ಯಾವುದೆ ಒಬ್ಬ ಜನಪ್ರತಿನಿಧಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಮೇಲಿಂದ ಮೇಲೆ ಭೇಟಿ ನೀಡಿ ಅಲ್ಲಿ
ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಕಳಪೆಯಾದಲ್ಲಿ ಅದನ್ನು ಸರಿಪಡಿಸಬೇಕು. ತಾಲೂಕಿನಲ್ಲಿ ನಡೆಯುತ್ತಿರುವ ಎಲ್ಲ ಏತ
ನೀರಾವರಿಯ ಮುಖ್ಯ ಕಾಲುವೆಗಳು ಕಳಪೆ ಗುಣಮಟ್ಟದಾಗಿದ್ದು ಇದನ್ನು ವೀಕ್ಷಿಸಿ ಸರಿಪಡಿಸುವ ಕೆಲಸವನ್ನು ಶಾಸಕ ಶಿವಾನಂದ ಪಾಟೀಲ ಮಾಡಿಲ್ಲ. ಅದರೆ ಈ ಕಳಪೆ ಕಾಮಗಾರಿ ಕೆಲಸದಲ್ಲಿ ಅವರದು ಪಾಲಿದೆ ಎಂಬುವುದು ಕಂಡು ಬರುತ್ತಿದೆ ಎಂದು ಹೇಳಿದರು.
ಈ ಭಾಗದ ರೈತರ ಮತ್ತು ಅವಳಿ ಜಿಲ್ಲೆಯ ಜನತೆಯ ಹೋರಾಟದ ಫಲದಿಂದ ಮತ್ತು 2008ರಲ್ಲಿ ಮುಖ್ಯಮಂತ್ರಿ
ಬಿ.ಎಸ್. ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ ಮತ್ತು ಅಂದಿನ ನಿರಾವರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಸವರಾಜ ಬೊಮ್ಮಾಯಿವರ ಪ್ರಯತ್ನದಿಂದ ವಿಜಯಪುರ- ಬಾಗಲಕೋಟಿ ಅವಳಿ ಜಿಲ್ಲೆಯ ಮುಳವಾಡ, ಚಿಮ್ಮಲಗಿ, ಗುತ್ತಿಬಸವಣ್ಣ ಸೇರಿದಂತೆ ಅನೇಕ ಏತ ನೀರಾವರಿ ಯೋಜನೆಗಳ ಹಾಗೂ ಕೆರೆ ತುಂಬುವ ಯೋಜನೆಗೆ ಚಾಲನೆ ಸಿಕ್ಕಿದೆ. ಆದರೆ ಇಂದು ಕಾಂಗ್ರೆಸ್ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಈ ಎಲ್ಲ ಏತ ನೀರಾವರಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಎಂದು ಹೇಳಿದರು.
ಅ. 23ಕ್ಕೆ ವಿಜಯಪುರ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದು
ಅವರಿಗೆ ಜಿಲ್ಲೆಯಲ್ಲಿ ನಡೆದಿರುವ ನೀರಾವರಿ ಯೋಜನೆ ಕಾಲುವೆಯ ಭ್ರಷ್ಟಾಚಾರದ ಬಗ್ಗೆ ಸಮಗ್ರ ಮಾಹಿತಿ ನೀಡಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಸವರಾಜ ಕುಂಬಾರ, ನಿತ್ಯಾನಂದ ಮಠ, ರಾಮಣ್ಣ ಬಾಟಿ, ಆನಂದ ಬಿಷ್ಟಗೊಂಡ, ರಾಮು
ಜಗತಾಪ, ಈರಣ್ಣ ರೋಳ್ಳಿ, ಮಲ್ಲು ಸೇಬಗೊಂಡ, ಪ್ರವೀಣ ಪವಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.