ರಾಮಾಯಣದಲ್ಲಿವೆ ಸಾಮಾಜಿಕ ಮೌಲ್ಯಗಳು; ಜಿಲ್ಲಾಧಿಕಾರಿ ದಾನಮ್ಮ

ಸೂರ್ಯ ಚಂದ್ರರು ಇರುವವರೆಗೂ ರಾಮಾಯಣ ಅಮರ ಕಾವ್ಯ

Team Udayavani, Oct 10, 2022, 6:35 PM IST

ರಾಮಾಯಣದಲ್ಲಿವೆ ಸಾಮಾಜಿಕ ಮೌಲ್ಯಗಳು; ಜಿಲ್ಲಾಧಿಕಾರಿ ದಾನಮ್ಮ

ವಿಜಯಪುರ: ವಾಲ್ಮೀಕಿ ಮಹರ್ಷಿ ಭಾರತ ದೇಶ ಕಂಡ ಹಲವಾರು ಮಹಾನ್‌ ದಾರ್ಶನಿಕರಲ್ಲಿ ಒಬ್ಬರಾಗಿದ್ದಾರೆ. ಮಾತೃ, ಪಿತೃ, ಆಚಾರ್ಯ, ಅತಿಥಿ ದೇವೋಭವ ಸಂದೇಶ ನೀಡಿದವರು, ಪಿತೃ ವಾಕ್ಯ ಪರಿಪಾಲನೆಯಂತಹ ಹಲವಾರು ಸಾಮಾಜಿಕ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್‌ ಸಂತರು ಎಂದು ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮನವರ ಅಭಿಪ್ರಾಯಪಟ್ಟರು.

ರವಿವಾರ ನಗರದ ಕಂದಗಲ್ಲ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣ ಮಹಾಕಾವ್ಯದಲ್ಲಿ ಸಮಾಜಕ್ಕೆ ಅಗತ್ಯ ಇರುವ ಎಲ್ಲ ಮಾನವೀಯ ಮೌಲ್ಯಗಳನ್ನು ಕಾಣಲು ಸಾಧ್ಯವಿದೆ. ಜಾಗತಿಕವಾಗಿ ಹೆಸರಾದ ಈ ಮಹಾಕಾವ್ಯದಲ್ಲಿನ ಹಲವಾರು ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ.

ಅಲ್ಲಿನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ವಿಶೇಷ ಉಪನ್ಯಾಸ ನೀಡಿದ ಬಬಲೇಶ್ವರದ ಶಾಂತವೀರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರೊ| ಮಹಾದೇವ ರೆಬಿನಾಳ, ಮಹಾತ್ಮ ನೆಲೆಯಾಗಿರುವ ಭಾರತದಲ್ಲಿ ನಾವು ಪುಣ್ಯವಂತರು. ರಾಮಾಯಣ ಮತ್ತು ಅಲ್ಲಿನ ಉಪ ಕಥೆಗಳು ನಮ್ಮ ಜೀವನಕ್ಕೆ ದಾರಿ ದೀಪವಾಗಿವೆ.ಸೂರ್ಯ ಚಂದ್ರರು ಇರುವವರೆಗೂ ರಾಮಾಯಣ ಅಮರ ಕಾವ್ಯವಾಗಿ ಹಾಗೂ ವಾಲ್ಮೀಕಿ ಕೂಡ ಅಮರರಾಗಿರುತ್ತಾರೆ ಎಂದರು.

ಎಡಿಸಿ ರಮೇಶ ಕಳಸದ, ಪರಿಶಿಷ್ಟ ವರ್ಗಗಳ ಅಪರ ಕಾರ್ಯದರ್ಶಿ ಎಸ್‌.ಎಂ. ವಾಲಿ, ಜಿಪಂ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ವಾಲ್ಮೀಕಿ ಸಮುದಾಯದ ಮುಖಂಡರಾದ ಅಖೀಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ, ಬಿ.ಎಸ್‌. ಗಸ್ತಿ, ಎ.ಎಸ್‌. ರೆಬಿನಾಳ, ಎಸ್‌.ಡಿ. ದುರಗಣ್ಣವರ, ಭಾರತಿ ಕೌಲಗಿ, ಚನ್ನಮ್ಮ ಬಟಗಿ, ಮಹಾದೇವ ನಾಟೀಕರ ವೇದಿಕೆಯಲ್ಲಿದ್ದರು.

ಮಳಸಿದ್ದ ನಾಯಕವಾಡಿ, ಲಕ್ಷ್ಮಣ ಕೋಳುರಗಿ, ಈರಪ್ಪ ಯಡಹಳ್ಳಿ, ಅಮಿತ್‌ ನಾಯಕವಾಡಿ, ಎಸ್‌. ಎಲ್‌. ನಾಟೀಕಾರ, ಮಹಾದೇವ ವಾಲೀಕಾರ, ಮಂಜುನಾಥ ಆರೇಶಂಕರ, ಬಿ.ಕೆ. ತೊಂಡೆನವರ, ಬಾಬು ಜಾನಮಟ್ಟಿ, ವಿಶ್ವನಾಥಗೌಡ ಬಟಗಿ, ಎಸ್‌.ಎಸ್‌. ಬೇಡರ, ಬಿ.ಎಸ್‌. ರೆಬಿನಾಳೆ, ಕಾವೇರಿ ಬಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಉಮೇಶ ಶಿರಹಟ್ಟಿಮಠ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಂ.ಎಸ್‌. ಬರಗಿಮಠ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಭೀಮರಾಯ್‌ ಜಿಗಜಿಣಗಿ, ದೇವೇಂದ್ರ ಮಿರೇಕರ ಹಾಗೂ ಇತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾಮನಗೌಡ ಕನ್ನೊಳ್ಳಿ ಸ್ವಾಗತಿಸಿದರು. ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿ ಕಾರಿ ರಾಜಶೇಖರ ದೈವಾಡಿ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪುಂಡಲೀಕ ಮಾನವರ ವಂದಿಸಿದರು.

ಮೆರವಣಿಗೆ: ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಧಿಕಾರಿ ಡಾ| ವಿ.ಬಿ. ದಾನಮ್ಮನವರ, ಎಎಸ್ಪಿ ಡಾ| ರಾಮ್‌ ಅರಸಿದ್ದಿ ಜಂಟಿಯಾಗಿ ಚಾಲನೆ ನೀಡಿದರು. ವಿವಿಧ ಜಾನಪದ ಕಲಾ ತಂಡಗಳೊಂದಿಗೆ ದೇವಸ್ಥಾನದ ಆವರಣದಿಂದ ಆರಂಭಗೊಂಡ ಮೆರವಣಿಗೆ ಗಾಂಧಿಧೀಜಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್‌ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ಕಂದಗಲ್‌ ಹನುಮಂತರಾಯ ಜಿಲ್ಲಾ ರಂಗಮಂದಿರಕ್ಕೆ ಬಂದು ತಲುಪಿತು.

ಟಾಪ್ ನ್ಯೂಸ್

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.