ಫಲಿತಾಂಶ ಸುಧಾರಣೆಗೆ ವಿಶೇಷ ಪ್ರಯೋಗ
Team Udayavani, Mar 3, 2020, 12:54 PM IST
ವಿಜಯಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲಾಮಟ್ಟದ ಸ್ಥಾನದಲ್ಲಿ ನಿರಂತರ ಕೊನೆ ಹಂತದ ಸ್ಥಾನದಲ್ಲಿರುವ ವಿಜಯಪುರ ಜಿಲ್ಲೆಯನ್ನು ಮುಂಚೂಣಿ ಸ್ಥಾನಕ್ಕೆ ತರಲು ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೆಲವು ಕಾರ್ಯಕ್ರಮ ರಾಜ್ಯದಲ್ಲೇ ಇಂಥ ವಿಶೇಷ ಕಾರ್ಯಕ್ರಮಗಳು ವಿಜಯಪುರ ಜಿಲ್ಲೆಯಲ್ಲಿ ಪ್ರಯೋಗಿಸಲ್ಪಟ್ಟಿವೆ.
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಸಜ್ಜಾಗಿರುವ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ವಲಯ ಹಾಗೂ ತಾಲೂಕು ಮಟ್ಟದಲ್ಲಿ ರಸಪ್ರಸ್ನೆ ಕಾರ್ಯಕ್ರಮ, ಜೊತೆಗೆ ಕನ್ನಡ ಮಾಧ್ಯಮ ಮಕ್ಕಳಿಕೆ ಕೌನ್ ಬನೇಗಾ ವಿದ್ಯಾಪತಿ ಹಾಗೂ ಉರ್ದು ಮಾಧ್ಯಮ ಮಕ್ಕಳಿಕೆ ಕೌನ್ ಬನೇಗಾ ಅಲ್ಲಮ ಕಾರ್ಯಕ್ರಮ ಯಶಸ್ವಿಯಾಗಿ ಮುಗಿಸಿದ್ದು ಉತ್ತಮ ಫಲಿತಾಂಶದ ನಿರೀಕ್ಷೆ ಮೂಡಿಸಿದೆ.
ಇದಲ್ಲದೇ ರಾಜ್ಯದಲ್ಲೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಯಲ್ಲಿ ಮಕ್ಕಳನ್ನು ಓದಲು ಪ್ರೇರೇಪಿಸಲು ಶಿಕ್ಷಕರು ಬೆಳಗ್ಗೆ 5:30ಕ್ಕೆ ಪರೀಕ್ಷಾರ್ಥಿಗಳನ್ನು ಎಬ್ಬಿಸಲು ಮೊಬೈಲ್‌ಗೆ ಮಿಸ್ಡ್ ಕಾಲ್ ಕಾರ್ಯಕ್ರಮ ನಡೆಯುತ್ತಿದೆ. ಪ್ರತಿ ದಿನ ಬೆಳಗ್ಗೆ 9:30ರಿಂದ 10:30ರವರೆಗೆ ವಿಶೇಷ ತರಗತಿ, ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ರಾತ್ರಿ ಶಾಲೆ ಮೂಲಕ ಮಕ್ಕಳಿಗೆ ವಿಶೇಷ ಪಾಠ ಮಾಡಿರುವುದು ಮಕ್ಕಳಿಗೆ ಹೆಚ್ಚಿನ ಪ್ರಯೋಜನವಾಗಿದೆ. ಇದರಿಂದ ಬೆಳಗ್ಗೆ ಏಳಲು ಆಲಸ್ಯತನ ತೋರುವ ಮಕ್ಕಳನ್ನು ಎಬ್ಬಿಸುವಲ್ಲಿ ಸಹಕಾರಿಯಾಗಿದೆ. ಮಕ್ಕಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದಲ್ಲದೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುತ್ತಿರುವ ಮಕ್ಕಳ ತಾಯಂದಿರ ಸಭೆ, ಮಕ್ಕಳನ್ನು ಓದಲು ಪ್ರೇರೇಪಿಸಲು ಆಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡುವ ಕಾರ್ಯಕ್ರಮ ನಡೆಸಿದೆ. ಪರೀಕ್ಷಾರ್ಥಿಗಳಿಗೆ ಕಲಿಕೆಯಲ್ಲಿ ಕಠಿಣ ಎನಿಸುವ ಇಂಗ್ಲಿಷ್, ಗಣಿತ, ವಿಜ್ಞಾನದಂಥ ವಿಷಯಗಳಲ್ಲಿ ಗೊಂದಲ ಇರುವ ಅಂಶಗಳ ವಿಷಯ ಪರಿಣಿತರಿಂದ ಫೋನ್ ಇನ್ ಕಾರ್ಯಕ್ರಮ ಮಾಡಲಾಗಿದೆ. ಈ ಹಿಂದೆ ಅಧಿಕ ಪ್ರಮಾಣದಲ್ಲಿ ಪರೀಕ್ಷಾರ್ಥಿಗಳು ಗಣಿತ, ವಿಜ್ಞಾನ, ಇಂಗ್ಲಿಷ್, ಸಮಾಜ ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣ ಗೊಳ್ಳುತ್ತಿದ್ದಾರೆ. ಈ ಅನುಭವದ ಆಧಾರದಲ್ಲಿ ಕಲಿಕೆ ಸುಲಭಗೊಳಿಸಲು ಶಂಕರ್ ಟ್ರಸ್ಟ್ ಸಹಯೋಗದಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆಗಳ ಸೆಟ್ ವಿತರಿಸಿದ್ದು ಮಕ್ಕಳೊಂದಿಗೆ ಶಿಕ್ಷಕರಿಗೂ ಹೆಚ್ಚು ಪ್ರಯೋಜನವಾಗಿದೆ.
ಇದಲ್ಲದೇ ಮಕ್ಕಳಿಗೆ ಪರೀಕ್ಷೆ ಎದುರಿಸುವಲ್ಲಿ, ಸರಣಿ ಪರೀಕ್ಷೆಗಳ ಮೂಲಕ ಮಕ್ಕಳ ಮೌಲ್ಯಮಾಪನ ಮಾಡಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪಾಸಿಂಗ್ ಪ್ಯಾಕೇಜ್ ರೂಪಿಸಲಾಗಿದೆ. ಇದು ಪರೀಕ್ಷೆ ಎದುರಿಸುವ ವಿಷಯದಲ್ಲಿ ಮಕ್ಕಳಿಗೆ ಇರುವ ಭಯ ಹೋಗಲಾಡಿಸುವಲ್ಲಿ ಹೆಚ್ಚು ಪರಿಣಾಮಕಾರಿ ಆಗಲಿದೆ ಎಂಬ ಅಂದಾಜಿಸಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುತ್ತಿರುವ ಪರೀಕ್ಷಾರ್ಥಿಗಳ ಮನೆ ಮನೆಗೆ ಶಿಕ್ಷಕರು ಭೇಟಿ. ಪಾಲಕರು ಹಾಗೂ ಪರೀಕ್ಷಾರ್ಥಿಗಳಿಗೆ ಓದಿನ ಕುರಿತು ಸೂಕ್ತ ಮಾಹಿತಿ ನೀಡುವ, ಪರೀಕ್ಷೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವೂ ಯಶಸ್ವಿಯಾಗಿದೆ. ಮತ್ತೂಂದೆಡೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಪ್ರತಿ ಶಿಕ್ಷಕರು 10 ಮಕ್ಕಳನ್ನು ದತ್ತು ಪಡೆದು, ಮಕ್ಕಳಿಗೆ ಕಲಿಕೆಯಯಲ್ಲಿ ಆಸಕ್ತಿ ಮೂಡಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಕ್ಕಳಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದರ ಜೊತೆಗೆ ಪರೀಕ್ಷಾರ್ಥಿಗಳಿಗೆ ಹೆಚ್ಚು ಅಂಕ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸುವ ಬರವಣಿಗೆ ಶುದ್ಧೀಕರಣಕ್ಕೂ ವಿಶೇಷ ಗಮನ ನೀಡಿ ತರಬೇತಿ ನೀಡಲಾಗಿದೆ.
ಹೀಗೆ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಮುಂಚೂಣಿ ಪಟ್ಟಿಗೆ ತರಲು ನಡೆಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ರೂಪಿಸಿರುವ ಹತ್ತು ಹಲವು ವಿಶೇಷ ಕಾರ್ಯಕ್ರಮಗಳು ಮೆಚ್ಚುಗೆ ಪಡೆದಿವೆ. ಈ ವಿನೂತನ ಪ್ರಯೋಗಗಳು ಪ್ರಸಕ್ತ ವರ್ಷದ ಪರೀಕ್ಷೆಯಲ್ಲಿ ಪರೀಕ್ಷಾರ್ಥಿಗಳಿಗೆ ಸಹಕಾರಿ ಅಗಲಿದೆ ಎಂದು ಭಾರಿ ನಿರೀಕ್ಷೆ ಇರಿಸಿಕೊಳ್ಳಲಾಗಿದೆ. ಪರೀಕ್ಷೆ ಮುಗಿದು, ಫಲಿತಾಂಶ ಬಂದ ನಂತರವೇ ಈ ವಿಶೇಷ ಕಾರ್ಯಕ್ರಮಗಳು ಹಾಗೂ ವಿನೂತನ ಪ್ರಯೋಗಗಳು ಹೇಗೆ ಪರಿಣಾಮ ಮಾಡಿದೆ ಎಂಬುದು ಸ್ಪಷ್ಟವಾಗಿದೆ.
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರುವ ಸದಾಶಯದಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಪರಿಣಾಮ ಮಕ್ಕಳಲ್ಲಿ ಓದುವ ಹಾಗೂ ಕಲಿಕೆಯಲ್ಲಿ ವಿಶೇಷ ಆಸಕ್ತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಉತ್ತಮ ಫಲಿತಾಂಶದ ಜೊತೆಗೆ ಜಿಲ್ಲೆ ರಾಜ್ಯಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಿರೀಕ್ಷೆ ಇದೆ. –ಪ್ರಸನ್ನಕುಮಾರ, ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ವಿಜಯಪುರ
-ಜಿ.ಎಸ್. ಕಮತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.