ಅಧ್ಯಾತ್ಮವೇ ದೇಶದ ನಿಜವಾದ ಆಸ್ತಿ: ನಡಹಳ್ಳಿ

ದಾರಿ ಹೋಕರಿಗೂ ದಾಸೋಹ ಮಾಡುವ ಸಂಪ್ರದಾಯ ಇಂದಿಗೂ ನಮ್ಮ ದೇಶ, ನಮ್ಮ ರಾಜ್ಯದಲ್ಲಿದೆ

Team Udayavani, Aug 24, 2022, 6:17 PM IST

ಅಧ್ಯಾತ್ಮವೇ ದೇಶದ ನಿಜವಾದ ಆಸ್ತಿ: ನಡಹಳ್ಳಿ

ಮುದ್ದೇಬಿಹಾಳ: ನಮ್ಮ ದೇಶದ ನಿಜವಾದ ಆಸ್ತಿ ಅಧ್ಯಾತ್ಮವಾಗಿದೆ. ಜಗತ್ತಿನಲ್ಲಿಯೇ ನಿಜವಾದ ಶ್ರೀಮಂತ ಹಾಗೂ ಅಧ್ಯಾತ್ಮದ ಸಾಮ್ರಾಜ್ಯ ವಿಜಯನಗರ ಸಾಮ್ರಾಜ್ಯವಾಗಿತ್ತು. ಆಗ ಈ ಭಾಗ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿತ್ತು ಅನ್ನೋದು ನಮಗೆಲ್ಲ ಹೆಮ್ಮೆ ತರುವಂಥದ್ದು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ ಪಾರ್ವತಿ ಸಂಗಮೇಶ್ವರ ದೇವಸ್ಥಾನ ಆವರಣದಲ್ಲಿ ಶ್ರಾವಣ ಮಾಸದ ಪ್ರಯುಕ್ತ ನಡೆಯುತ್ತಿರುವ ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರ ಮಹಾಪುರಾಣ ಪ್ರವಚನದಲ್ಲಿ ಯುವಕ ಮಂಡಳಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಹೇಗೆ ಬದುಕಬೇಕು ಅನ್ನೋದನ್ನು ಹೇಳಿಕೊಟ್ಟ ದೇಶ ನಮ್ಮ ಭಾರತ. ಕಾಯಕ ಮಾಡುತ್ತಲೇ ಸಂಸ್ಕೃತಿ, ಸಂಸ್ಕಾರ ಪಾಲಿಸುತ್ತ ಆಧ್ಯಾತ್ಮದ ಒಲವನ್ನು ಹೊಂದಿರುವ ಈ ದೇಶದ ಹಿರಿಮೆ ಬೇರೆ ಯಾವ ದೇಶದಲ್ಲೂ ಕಂಡು ಬರೊಲ್ಲ. ಇದು ಶರಣರು, ಸಂತರ ನಾಡು. ಇಂಥ ನಾಡಿನಲ್ಲಿ ಪ್ರವಚನ ನಡೆದರೆ ಮನೆ ಮನೆಗಳಿಂದ ತಾಯಂದಿರು ಬರುತ್ತಾರೆ. ಇದು ನಮ್ಮ ಸಂಸ್ಕೃತಿ. ದಾರಿ ಹೋಕರಿಗೂ ದಾಸೋಹ ಮಾಡುವ ಸಂಪ್ರದಾಯ ಇಂದಿಗೂ ನಮ್ಮ ದೇಶ, ನಮ್ಮ ರಾಜ್ಯದಲ್ಲಿದೆ ಎಂದರು.

ಪ್ರವಚನಕಾರ ವೇದಮೂರ್ತಿ ಶಿವಮೂರ್ತಿ ಶಾಸ್ತ್ರಿಯವರು, ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಗಣ್ಯರಾದ ಪ್ರಸನ್ನಕುಮಾರ ಜಹಾಗೀರದಾರ, ಬಸನಗೌಡ ಪಾಟೀಲ, ಅಶೋಕ ಬೋವಿ, ತಾಪಂ ಮಾಜಿ ಸದಸ್ಯ ಮಲ್ಲನಗೌಡ ಪಾಟೀಲ, ಪಣಯ್ಯ ಹಿರೇಮಠ, ಬಿ.ಬಿ. ಭೋವಿ, ಸಂಗಪ್ಪ ರಾಮೋಡಗಿ, ಅಡಿವೆಪ್ಪ ನಾಡಗೌಡ್ರ, ಶೇಖಪ್ಪ ನಾರಯಣಪುರ, ರುದ್ರು ರಾಮೋಡಗಿ, ಮಲ್ಲಿಕಾರ್ಜನ ಗುಡಗುಂಟಿ, ಗಿರೀಶ ಲಿಂಗದಳ್ಳಿ, ಎಚ್‌.ಎನ್‌. ಭೋವಿ, ಆದೇಶ ನಾಗರತ್ತಿ ಮುಂತಾದವರು ಇದ್ದರು.

ಸಂಗಮೇಶ್ವರ ದೇವಸ್ಥಾನದ ನೂತನ ತೇರು ನಿರ್ಮಾಣಕ್ಕೆ ವೈಯುಕ್ತಿಕವಾಗಿ 2 ಲಕ್ಷ ರೂ. ನೆರವು ನೀಡುತ್ತೇನೆ. ಒಂದು ವೇಳೆ ತೇರು ಪೂರ್ಣಗೊಳ್ಳಲು ಇನ್ನೂ ಹೆಚ್ಚಿನ ನೆರವು ಬೇಕಾದರೂ ನೀಡುತ್ತೇನೆ.
ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕರು

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.