ಕನ್ಹಯ್ಯಲಾಲ್ ಹಂತಕರಿಗೆ ಕಠಿಣ ಶಿಕ್ಷೆಯಾಗಲಿ: ಶ್ರೀಶೈಲಶ್ರೀ
Team Udayavani, Jul 2, 2022, 6:12 PM IST
ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಅಮಾನವೀಯ ಕೃತ್ಯ ಖಂಡನಾರ್ಹ. ಪ್ರಜಾ ಪ್ರಭುತ್ವದ ಈ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿಪ್ರಾಯ ಬೇಧವಿದ್ದಲ್ಲಿ ಸಮರ್ಥ ಅಭಿಪ್ರಾಯದ ಮೂಲಕವೇ ವಿರೋಧಿಸಿ, ಗೆಲ್ಲಬೇಕು. ಆದರೆ ಜೀವ ಘಾತುಕ ಹತ್ಯೆ ಮೂಲಕ ಅಲ್ಲ ಎಂದು ಶ್ರೀಶೈಲ ಸೂರ್ಯಸಿಂಹಾಸನ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಶ್ರೀಗಳು ಅಭಿಪ್ರಾಯಪಟ್ಟರು.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಿಂಸೆಯನ್ನು ಪ್ರತಿಪಾದಿಸುವ ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಹೇಯವಾದ ಈ ಕೃತ್ಯದಲ್ಲಿ ಭಾಗಿಯಾದ ಹಾಗೂ ಇಂಥ ಕೃತ್ಯಗಳಿಗೆ ಪ್ರಚೋದನೆ ನೀಡುವವರಿಗೂ ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರಿಕೆಯ ಪಾಠವಾಗುವಂತೆ ಕೃತ್ಯದಲ್ಲಿ ಭಾಗಿಯಾದ ಹಾಗೂ ಪ್ರಚೋದಿಸಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು
ಶ್ರೀಶೈಲ ಕ್ಷೇತ್ರದಲ್ಲಿ ಕರ್ನಾಟಕದ ಭಕ್ತರ ಮೇಲೆ, ಸಾರಿಗೆ ಸಂಸ್ಥೆಯ ಸಿಬ್ಬಂದಿ ಮೇಲೆ, ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಇಂಥ ಘಟನೆಗಳು ಯಾರೋ ಕೆಲವರ ಕುತಂತ್ರದಿಂದ ಎರಡು ರಾಜ್ಯಗಳ ಭಾವನೆಗಳಿಗೆ ಧಕ್ಕೆ ತರುತ್ತಿವೆ. ವೈಯಕ್ತಿಕ ಘರ್ಷಣೆಗಳು ರಾಜ್ಯದ ಘರ್ಷಣೆಗೆ ಕಾರಣ ಆಗಬಾರದು ಎಂದರು.
ಶ್ರೀಶೈಲದಲ್ಲಿ ಭಕ್ತರ ಮೇಲೆ ಹಲ್ಲೆ ಘಟನೆ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿ ಸಮಸ್ಯೆ ಇತ್ಯರ್ಥಪಡಿಸಲಾಗಿದೆ. ಪದೇ ಪದೇ ಇಂಥ ಘಟನೆಗಳು ಜರುಗಂದಂತೆ ನಿಗ್ರಹಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಸಮಾಜದಲ್ಲಿ ಮೇಲು-ಕೀಳು ಎಂಬ ಜಾತಿ ವ್ಯವಸ್ಥೆ ಜೀವಂತ ಇರುವ ವರೆಗೂ ಸೌಲಭ್ಯಗಳಿಗಾಗಿ ಮೀಸಲಾತಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರ್ಕಾರದ ಸೌಲಭ್ಯ ಎಲ್ಲ ಸಮುದಾಯದ ಜನರಿಗೆ ಸಿಗಬೇಕು. ಇದಕ್ಕಾಗಿ ನ್ಯಾಯ ಸಮ್ಮತವಾಗಿರುವ ಬೇಡಿಕೆ ಇರುವ ಸಮುದಾಯದ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.