State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
524.526 ಮೀ.ಗಳಿಗೆ ಹೆಚ್ಚಳ: ಸರಕಾರ; ಡಿ. 16: ಕೃಷ್ಣಾ ತೀರದ ಜನಪ್ರತಿನಿಧಿ ಸಭೆ
Team Udayavani, Dec 14, 2024, 6:45 AM IST
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಅನ್ನದಾತರ ಅಹೋ ರಾತ್ರಿ ಹೋರಾಟ ಆರಂಭ ವಾದ ಬೆನ್ನಲ್ಲೇ ರಾಜ್ಯ ಸರಕಾರವು ಆಲಮಟ್ಟಿ ಜಲಾಶಯದ ಎತ್ತರವನ್ನು 519.60 ಮೀ.ಗಳಿಂದ 524.526 ಮೀ.ಗಳಿಗೆ ಹೆಚ್ಚಿಸಲು ತಾನು ಬದ್ಧ ಎಂದು ಘೋಷಿಸಿದೆ. ಅಲ್ಲದೆ ಈ ಕುರಿತು ಚರ್ಚಿಸಲು ಡಿ. 16ರಂದು ಜನಪ್ರತಿನಿಧಿಗಳ ಸಭೆ ನಡೆಸಲು ನಿರ್ಧರಿಸಿದೆ.
ಕೃಷ್ಣಾ ನದಿ ನೀರಿನ ವಿಷಯವಾಗಿ ಆಂಧ್ರ, ತೆಲಂಗಾಣ ರಾಜ್ಯ ಸರಕಾರ ಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದು, ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು. ಅದಕ್ಕೆ ಮುನ್ನ ಯೋಜನೆಯ ಅನು ಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಸಜ್ಜಾಗಿದೆ. ಇದರಿಂದ ಕೃಷ್ಣಾ ತೀರದ ಜನರ ಬೇಡಿಕೆಗೆ ಬಲ ಬಂದಂತಾಗಿದೆ.
ಆಲಮಟ್ಟಿ ಅಣೆಕಟ್ಟೆ ಎತ್ತರವನ್ನು 524 ಮೀ.ಗೆ ಹೆಚ್ಚಿಸುವುದು ನಮ್ಮ ನಿಲುವು. ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ಪರವಾನಿಗೆ ನೀಡಿದರೆ ಈಗಿರುವ 519ರಿಂದ 524 ಮೀ.ಗೆ ಎತ್ತರಿಸಲು ನಾವು ತಯಾರಾಗಿದ್ದೇವೆ. ಕೃಷ್ಣಾ ನದಿ ನೀರಿನ ವಿಚಾರವಾಗಿ ಆಂಧ್ರ ಪ್ರದೇಶ, ತೆಲಂಗಾಣದವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ. ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸಿ ನಮಗೆ ಅನು
ಕೂಲ ಮಾಡಿಕೊಡಬೇಕು ಎಂದು ವಿಜಯ ಪುರದಲ್ಲಿ ಸುದ್ದಿಗಾರರಿಗೆ ಸಿಎಂ ತಿಳಿಸಿದರು.
ದುಪ್ಪಟ್ಟು ಬೆಲೆ ಕೊಡಲು
ಸಾಧ್ಯವೆ: ಡಿಕೆಶಿ ಪ್ರಶ್ನೆ
ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀ.ಗೆ ಹೆಚ್ಚಿಸಲು ನಾವು ಬದ್ಧವಾಗಿದ್ದೇವೆ. ಆದರೆ ಈ ವಿಷಯದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮೊದಲೇ ಇದರ ಕಾಮಗಾರಿ ನಡೆಸಬೇಕೇ, ಬೇಡವೇ ಎಂದು ಚರ್ಚೆ ನಡೆಯುತ್ತಿದೆ. ಭೂಸ್ವಾಧೀನ ವಿಷಯವಾಗಿ ಸ್ವಲ್ಪ ಗೊಂದಲ ಇದೆ. ಕೆಲವರು ನ್ಯಾಯಾಲಯದಿಂದ ಬೆಂಗಳೂರಿನ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರ ಪಡೆಯಲು ಆದೇಶ ತಂದಿದ್ದಾರೆ. 10, 20 ಕೋಟಿ ರೂ. ಕೊಡಲು ಹೇಗೆ ಸಾಧ್ಯ? ಈ ನ್ಯೂನತೆ ಸರಿಪಡಿಸಬೇಕು. ಈ ಹಿಂದೆ ಬೊಮ್ಮಾಯಿ ಸರಕಾರ ರೈತರಿಗೆ ನಿಗದಿಪಡಿಸಿರುವ ದರದ ಬಗ್ಗೆ ನಮಗೆ ತಕರಾರಿಲ್ಲ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿ ಡಿ. 16 ರಂದು ಜನ ಪ್ರತಿನಿಧಿಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀ. ಹೆಚ್ಚಿಸಲು ಬದ್ಧ. ಆದರೆ ಈ ವಿಷಯದಲ್ಲಿ ಕೇಂದ್ರ ಅಧಿ ಸೂಚನೆ ಹೊರ ಡಿಸಬೇಕಿದೆ.
– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.