18ಕ್ಕೆ ತಳವಾರರ ಪ್ರತಿಭಟನೆ
Team Udayavani, Apr 15, 2022, 12:29 PM IST
ಸಿಂದಗಿ: ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಏ. 18ರಂದು ಪಟ್ಟಣದಲ್ಲಿ ಅಹಿಂದ್ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಳವಾರ, ಪರಿವಾರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾಜಿ ಮೆಟಗಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದಾಗಿ ಮುಖ್ಯಮಂತ್ರಿ, ಸಮಾಜಕಲ್ಯಾಣ ಇಲಾಖೆ ಸಚಿವರು, ಶಾಸಕರು ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಸ್ವತಃ ಮುಖ್ಯಮಂತ್ರಿ ಅವರೇ ತಿಳಿಸಿದ್ದರು. ಆದರೆ ಆರು ತಿಂಗಳಾದರೂ ಜಾತಿ ಪ್ರಮಾಣಪತ್ರ ನೀಡುತ್ತಿಲ್ಲ. ಮತ ಪಡೆಯಲು ಸುಳ್ಳು ಭರವಸೆ ನೀಡಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಆರೋಪಿಸಿದರು.
ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಿಂದ ತಳವಾರ ಸಮುದಾಯವನ್ನು ತೆಗೆದು ಹಾಕಿ, ಕೇಂದ್ರ ಸರ್ಕಾರದ ಗೆಜೆಟ್ ಹಾಗೂ ರಾಜ್ಯ ಸರ್ಕಾರದ ಅಧಿ ಸೂಚನೆಯ ಪ್ರಕಾರ ಅಟಲ್‌ಜೀ ಜನಸ್ನೇಹಿ ತಂತ್ರಾಂಶದಲ್ಲಿ ಪರಿಶಿಷ್ಟ ಪಂಗಡ ಎಂದು ಸೇರಿಸಿದರೆ ಜಾತಿ ಪ್ರಮಾಣ ಸಿಗಲಿದೆ. ಈಗಾಗಲೇ ಕೋರ್ಟ್ ಆದೇಶದ ಮೇರೆಗೆ ತಳವಾರ ಸಮುದಾಯದ ಕೆಲವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ದೊರಕಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇದು ತಮಗೆ ನೀಡುವ ಕೊನೆಯ ಸಮಯಾವಕಾಶ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವೈ.ಸಿ. ಮಯೂರ, ಟಿಪ್ಪು ಕ್ರಾಂತಿ ಸೇನೆ ಅಧ್ಯಕ್ಷ ದಸ್ತಗೀರ ಮುಲ್ಲಾ, ಕುರುಬರ ಸಂಘದ ತಾಲೂಕಾ ಅಧ್ಯಕ್ಷ ನಿಂಗಣ್ಣ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಸರಕಾರ ವಿಳಂಬನೀತಿ ಅನುಸರಿಸುತ್ತಿರುವುದನ್ನು ಖಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.