ಮೋದಿ ವಿದೇಶ ಪ್ರವಾಸದ ಬಳಿಕ ರಾಜ್ಯದ ರಾಜಕೀಯ ನಿರ್ಧಾರ: ಯತ್ನಾಳ
Team Udayavani, May 3, 2022, 11:38 AM IST
ವಿಜಯಪುರ : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಗಾಗಿ ಭೇಟಿ ನೀಡಿದ್ದಾರೆ. ಆದರೆ ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಮರಳಿದ ಬಳಿಕ ಮೇ 10 ರೊಳಗೆ ಸೂಕ್ತ ನಿರ್ಧಾರವಾಗಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮಂಗಳವಾರ ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ವಿಚಾರ ಸೇರಿದಂತೆ ರಾಜ್ಯದಲ್ಲಿ ಆಗಿರುವ ರಾಜಕೀಯದಲ್ಲಿ ಬೆಳವಣಿಗೆಗಳ ಬಗ್ಗೆ ಸೂಕ್ತ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಬಳಿಕ ಮೇ 10ರೊಳಗೆ ಎಲ್ಲ ನಿರ್ಧಾರವಾಗಬಹುದು, ಪ್ರಧಾನಿಗಳ ಆಗಮಿಸಿದ ಎರಡು ದಿನದಲ್ಲೂ ಆಗಬಹುದು ಎಂದರು.
ಎರಡು ದಿನಗಳಲ್ಲಿ ಪ್ರಧಾನಿ ಮೋದಿ ವಿದೇಶ ಪ್ರವಾಸ ಮುಗಿಸಿ ಆಗಮಿಸಲಿದ್ದು, ಅವರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಏನು ಮಾಡಬೇಕು ಎನ್ನುವ ಬಗ್ಗೆ ನಿರ್ಧಾರಿಸುವ ಕುರಿತು ಈಗಾಗಲೇ ಎಲ್ಲ ರೀತಿಯ ವರದಿಗಳನ್ನ ಪಡೆದಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ನಡೆದ ಪಕ್ಷದ ಉನ್ನತಾಧಿಕಾರ ಹೊಂದಿರುವ ನಾಯಕರ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಚರ್ಚೆಯ ವಿಷಯ ಏನೆಂದು ನನಗೆ ತಿಳಿಯದು. ಆದರೆ ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.