ವಿದ್ಯಾರ್ಥಿನಿಯರ ಕರಾಟೆ ತರಬೇತಿಗೆ ಚಾಲನೆ
Team Udayavani, Jan 22, 2022, 5:51 PM IST
ಮುದ್ದೇಬಿಹಾಳ: 8-10 ವರ್ಷಗಳ ಹೋರಾಟದ ಪ್ರತಿಫಲವಾಗಿ ಸರ್ಕಾರ ವಿವಿಧ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಕೊಡುವ ಕಾರ್ಯಕ್ಕೆ ಚಾಲನೆ ನೀಡಿದೆ. ಎಲ್ಲರೂ ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಆತ್ಮರಕ್ಷಣೆಯ ಕಲೆ ಕರಾಟೆಯನ್ನು ಮನಗೊಟ್ಟು ಕಲಿತು ಭವಿಷ್ಯದಲ್ಲಿನ ತೊಂದರೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಸಬಲತೆ ಸಾಧಿಸಬೇಕು ಎಂದು ಕರ್ನಾಟಕ ಕರಾಟೆ ಡು ಸಂಸ್ಥೆಯ ರಾಜ್ಯಾಧ್ಯಕ್ಷ ಶಿವಕುಮಾರ ಶಾರದಳ್ಳಿ ಹೇಳಿದರು.
ಡಿ.ದೇವರಾಜ ಅರಸು ಮತ್ತು ಸರ್ಕಾರಿ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ನಡೆದ ಕರಾಟೆ ತರಬೇತಿಗೆ ಚಾಲನೆ ನೀಡುವ ಪ್ರತ್ಯೇಕ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಅವರು ಮಾತನಾಡಿದರು.
ಪ್ರಸ್ತುತ ವಿಜಯಪುರ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಯುವ ಕಿತ್ತೂರು ರಾಣಿ ಚನ್ನಮ್ಮ, ಮೊರಾರ್ಜಿ ದೇಸಾಯಿ ಸೇರಿ ಒಟ್ಟು 39 ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡುವ ಅವಕಾಶ ದೊರಕಿದೆ ಎಂದರು.
ವಸತಿ ನಿಲಯಗಳ ಮೇಲ್ವಿಚಾರಕಿಯ ರಾದ ಇಂದುಮತಿ ಚವ್ಹಾಣ, ಎಫ್. ಎಚ್.ಕಾಳಗಿ ಮಾತನಾಡಿದರು. ಕರಾಟೆ ಶಿಕ್ಷಕಿಯರಾದ ಸುಮಾ ತಡವಲಕರ, ಅಖೀಲಾ ಸೊನ್ನದ, ಮಧು ಘಾಗರೆ ವೇದಿಕೆಯಲ್ಲಿದ್ದರು. ಆಯಾ ವಸತಿ ನಿಲಯಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.