ಸಂಡೇ ಲಾಕ್‌ಡೌನ್ ಯಶಸ್ವಿ
Team Udayavani, Jul 20, 2020, 12:28 PM IST
ವಿಜಯಪುರ: ಕೋವಿಡ್ ನಿಯಂತ್ರಿಸಲು ಸರ್ಕಾರ ಸಂಡೆ ಲಾಕ್‌ಡೌನ್ ಮಾಡಿದ್ದಕ್ಕೆ ಜಿಲ್ಲೆಯ ಜನಜೀವನ ಸಂಪೂರ್ಣ ಸ್ತಬ್ಧವಾಗಿತ್ತು. ಕಳೆದ ರವಿವಾರ ಲಾಕ್‌ಡೌನ್ ವೇಳೆ ಕಂಡು ಬಂದ ದೃಶ್ಯಾವಳಿಗಳು ಪುನರಾವರ್ತನೆಗೊಂಡವು. ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಿದ್ದು, ಇದ್ದರಿಂದ ಇಡಿ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ರವಿವಾರದ ಒಂದು ದಿನದ ಮೂರನೇ ಲಾಕ್‌ಡೌನ್ ವಿಜಯಪುರ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.
ನಗರದ ರಸ್ತೆಯಲ್ಲಿ ಎಲ್ಲಿಯೋ ಒಬ್ಬಿಬ್ಬರು ನಡೆದುಕೊಂಡು, ಬೈಕ್ ಮೇಲೆ ಹೋಗುತ್ತಿರುವ ದೃಶ್ಯ ಗೋಚರಿಸಿದ್ದು ಬಿಟ್ಟರೆ ಬಹುಪಾಲು ಜನತೆ ಮನೆಯಿಂದ ಹೊರ ಬರಲಿಲ್ಲ. ಕೆಲವು ದಿನಗಳ ಹಿಂದೆ ಮತ್ತೆ ಗತ ವೈಭವಕ್ಕೆ ಮರಳಿ ಸಾಮಾನ್ಯವಾಗಿ ಇರುತ್ತಿದ್ದ ಜನಸಂದಣಿ ರಸ್ತೆಗಳು ಸಹ ಸಂಪೂರ್ಣ ಬಿಕೋ ಎನ್ನುತ್ತಿದ್ದವು.
ನಗರದ ಹೃದಯ ಭಾಗವಾದ ಗಾಂಧಿವೃತ್ತ, ಕೇಂದ್ರ ಬಸ್ ನಿಲ್ದಾಣ, ಕೆ.ಸಿ. ಮಾರುಕಟ್ಟೆ, ಡಾ| ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಮುಖ್ಯ ರಸ್ತೆಗಳಲ್ಲಿ ಜನ, ವಾಹನಗಳ ಸಂಚಾರವಿರಲಿಲ್ಲ. ಅಗತ್ಯ ಸೇವೆಗಳಾದ ಆಸ್ಪತ್ರೆ, ಪೆಟ್ರೋಲ್ ಬಂಕ್, ಕಿರಾಣಿ ಅಂಗಡಿಗಳು, ಕೋಳಿ ಮತ್ತು ಕುರಿ ಮಾಂಸ, ಹಾಲು ಮಾರಾಟ ಮಳಿಗೆಗಳು ಮಾತ್ರ ಬಾಗಿಲು ತೆರೆದಿದ್ದವು. ಆದರೆ, ಗ್ರಾಹಕರಿಲ್ಲದೇ ವ್ಯಾಪಾರ ಕ್ಷೀಣವಾಗಿತ್ತು. ಎಲ್ಲ ಅಂಗಡಿ, ಮುಂಗಟ್ಟು, ವಾಣಿಜ್ಯ ಮಳಿಗೆಗಳು ಬಾಗಿಲು ಬಂದ್ ಆಗಿದ್ದವು. ಬಸ್, ಆಟೊ ಸೇರಿದಂತೆ ಜನ, ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಜನರು ಸಹ ಹೊರಗೆ ಬರಲಿಲ್ಲ. ಹೋಟೆಲ್‌ಗಳು ಸಂಡೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಾಗಿಲು ಬಂದ್ ಮಾಡಿದ್ದವು.
ಸಾರ್ವಜನಿಕರು ಅನವಶ್ಯಕವಾಗಿ ಹೊರಗೆ ಬಾರದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ವಿವಿಧ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಅಧಿ ಕಾರಿಗಳು ಪೆಟ್ರೋಲಿಂಗ್ ಮಾಡಿ ಅನವಶ್ಯಕವಾಗಿ ಹೊರಗೆ ಬಂದವರಿಗೆ ಬುದ್ಧಿವಾದ ಹೇಳಿ ಮರಳಿ ಕಳುಹಿಸಿದರು ಪ್ರಮುಖ ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ತುರ್ತು ಸೇವೆಗಳಿಗೆ ತೆರಳುವವರ ಐಡಿ ಕಾರ್ಡ್ ಪರಿಶೀಲನೆ ನಡೆಸಿದ ನಂತರವಷ್ಟೇ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟರು. ವಿಜಯಪುರ, ಸಿಂದಗಿ, ಮುದ್ದೇಬಿಹಾಳ, ಬಸವನಬಾಗೇವಾಡಿ, ಇಂಡಿ, ಚಡಚಣ, ಹೊರ್ತಿ, ದೇವರಹಿಪ್ಪರಗಿ, ತಿಕೋಟಾ, ಕೊಲ್ಹಾರ, ನಾಲತವಾಡ, ಆಲಮಟ್ಟಿ, ನಿಡಗುಂದಿ, ತಾಳಿಕೋಟೆ ಸೇರಿದಂತೆ ಜಿಲ್ಲೆಯ ನಗರ, ಪಟ್ಟಣಗಳಲ್ಲಿ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕುವ ಮೂಲಕ ಸಂಚಾರಕ್ಕೆ ತಡೆಯೊಡ್ಡಿದ್ದರು. ಬೈಕ್, ಕಾರುಗಳಲ್ಲಿ ಅಡ್ಡಾಡುವವರನ್ನು ಪೊಲೀಸರು ತಡೆದು, ವಿಚಾರಣೆ ಮಾಡಿದ ಬಳಿಕ ತುರ್ತು ಇದ್ದವರಿಗೆ ಮಾತ್ರ ಹೋಗಲು ಬಿಟ್ಟರು. ಕೆಲವೆಡೆ ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.